ರಾಜಕೀಯ ಚಟುವಟಿಕೆ ಬಿರುಸು; ಶನಿವಾರ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಮಹತ್ವದ ಸಭೆ

Date:

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಗಾಗಿ ಕಾಂಗ್ರೆಸ್‌ನಲ್ಲಿ ಚಟುವಟಿಕೆಗಳು ಬಿರುಸಿನಿಂದ ಆರಂಭವಾಗಿವೆ. ನೂತನ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ನಾಳೆ (ಶನಿವಾರ) ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆ ಕರೆಯಲಾಗಿದೆ.

- Advertisement -

ಗುರುವಾರವಷ್ಟೇ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅದನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರದ ಬೆನ್ನಲ್ಲೇ ಹಾಲಿ ಸಚಿವ ಸಂಪುಟವನ್ನು ವಿಸರ್ಜನೆಗೊಳಿಸಿ ರಾಜಭವನ ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಇದೀಗ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ಸಭೆಯು ವಿಧಾನಸೌಧದ 3ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಹಾಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಲಿದೆ. ಸಭೆಯಲ್ಲಿ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇರಲಿದ್ದಾರೆ. ಸಭೆಗೆ ಪಕ್ಷದ ಎಲ್ಲ ಶಾಸಕರು ಕಡ್ಡಾಯವಾಗಿ ಭಾಗವಹಿಸುವಂತೆ ಹೈಕಮಾಂಡ್ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಈಗಾಗಲೇ ಎಲ್ಲ ಶಾಸಕರಿಗೂ ಅಧಿಕೃತ ಸಂದೇಶ ರವಾನಿಸಲಾಗಿದೆ ಎಂದು ಶಾಸಕಾಂಗ ಪಕ್ಷದ ಕಾರ್ಯದರ್ಶಿ, ಹಿರಿಯ ಶಾಸಕ ಅಲ್ಲಮಪ್ರಭು ಮಾಹಿತಿ ನೀಡಿದ್ದಾರೆ.

“ನಾಳಿನ ಸಭೆಯಲ್ಲಿ ಶಾಸಕರ ಒಮ್ಮತದ ನಿರ್ಧಾರದಂತೆ ನೂತನ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಿ ಅಧಿಕೃತವಾಗಿ ಘೋಷಿಸಲಾಗುವುದು. ಸಭೆಯ ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಲಾಗುವುದು. ಅವರು ಸಮಯ ನಿಗದಿಪಡಿಸಿದ ನಂತರ ಪ್ರಮಾಣವಚನ ಕಾರ್ಯಕ್ರಮದ ದಿನಾಂಕ ಪ್ರಕಟವಾಗಲಿದೆ” ಎಂದು ಅಲ್ಲಮಪ್ರಭು ಮಾಹಿತಿ ನೀಡಿದ್ದಾರೆ.

WhatsApp Image 2026 05 29 at 2.13.51 PM

ಇನ್ನು, ತಾವೂ ಸಹ ಸಚಿವ ಸ್ಥಾನದ ಆಕಾಂಕ್ಷಿಯೇ ಎಂದಿರುವ ಅಲ್ಲಮಪ್ರಭು, “ನಾನು ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತನಾಗಿ ದುಡಿದಿದ್ದೇನೆ. ಈ ಬಾರಿ ನನಗೆ ಸಚಿವ ಸ್ಥಾನ ಸಿಗುವ ಪೂರ್ಣ ಆಶಾಭಾವನೆಯಿದೆ” ಎಂದಿದ್ದಾರೆ.

ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರ ಪಟ್ಟಾಭಿಷೇಕಕ್ಕೆ ತೆರೆಮರೆಯಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ. ನಾಳಿನ ಸಭೆಯಲ್ಲಿ ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದೆ. ಈ ಮಧ್ಯೆ, ಹಂಗಾಮಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ತಮಗೆ ಮುಖ್ಯಮಂತ್ರಿಯಾಗಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.

ಬಹುಶಃ, ಸೋಮವಾರ (ಜೂನ್ 1) ಸಂಜೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅಥವಾ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲು ಚಿಂತನೆ ನಡೆಸಲಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ʼಯುವ ಸೌರಭʼ ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭೆ ಅನಾವರಣ

ವಿದ್ಯಾರ್ಥಿಗಳಲ್ಲಿರುವ  ಪ್ರತಿಭೆಯನ್ನು ಅನಾವರಣಗೊಳಿಸಲು ‘ಯುವ ಸೌರಭ’ದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸೂಕ್ತ ವೇದಿಕೆಯಾಗಿವೆ....

ಭಾರತವು ವಿಶ್ವದ ಅತ್ಯಂತ ವಿಶ್ವಾಸಾರ್ಹ ಆರ್ಥಿಕ ಪಾಲುದಾರ: ಪ್ರಧಾನಿ ಮೋದಿ

ಭಾರತದ ಆರ್ಥಿಕ ಬೆಳವಣಿಗೆಯು ಬಲವಾದ ಆಧಾರಸ್ತಂಭಗಳು ಮತ್ತು ನಿರಂತರ ಸುಧಾರಣೆಗಳ ಮೇಲೆ...

ಕುಂಭಮೇಳದ ಹೊಸ್ತಿಲಲ್ಲಿ ಆತಂಕ: ನಾಸಿಕ್‌ ನೀರಿನಲ್ಲಿ ಸಾವಿರ ಪಟ್ಟು ಹೆಚ್ಚು ಕ್ಯಾನ್ಸರ್‌ಕಾರಕ ‘ಕ್ರೋಮಿಯಂ’ ಪತ್ತೆ

2027ರಲ್ಲಿ ಜರುಗಲಿರುವ ಕುಂಭಮೇಳಕ್ಕೆ ಸಜ್ಜಾಗುತ್ತಿರುವ ಮಹಾರಾಷ್ಟ್ರದ ನಾಸಿಕ್‌ ನಗರದಲ್ಲಿ ಆತಂಕಕಾರಿ ಬೆಳವಣಿಗೆಯೊಂದು...

‘ರಾವಣನ ದಹನ ಏಕೆ, ದುರ್ಯೋಧನನದ್ದೇಕಿಲ್ಲ?’ – ಮಾನವ ಹಕ್ಕುಗಳ ಆಯೋಗಕ್ಕೆ ಈ ಹಿಂದೆಯೂ ಸಲ್ಲಿಕೆಯಾಗಿತ್ತು ಅರ್ಜಿ

ವಿಜಯದಶಮಿ/ದಸರಾ ಹಬ್ಬದ ಸಮಯದಲ್ಲಿ ಪ್ರತಿವರ್ಷ ರಾವಣನ ಪೋಸ್ಟ‌ರ್ ಅಥವಾ ಗೊಂಬೆಯನ್ನು ದಹಿಸುವುದು...