ಆರ್‌ಎಸ್ಎ‌ಸ್ ಯಾವ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿತ್ತು: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

Date:

ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್ಎ‌ಸ್) ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಸಂಘದ ಪಾತ್ರವನ್ನು ಪ್ರಶ್ನಿಸಿದ್ದಾರೆ. ಅಲ್ಲದೆ, ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಪ್ರಾಣತೆತ್ತ ತಮ್ಮ ಸಂಘಟನೆಯ ಸದಸ್ಯರ ಹೆಸರನ್ನು ಬಹಿರಂಗಪಡಿಸುವಂತೆ ಸವಾಲು ಹಾಕಿದ್ದಾರೆ.

- Advertisement -

ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಆರ್‌ಎಸ್ಎ‌ಸ್ ಶಾಖೆಗಳಂತಹ ಚಟುವಟಿಕೆಗಳನ್ನು ನಿಯಂತ್ರಿಸುವ ಉದ್ದೇಶ ಹೊಂದಿರುವ ‘ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿ ಬಳಕೆ ನಿಯಂತ್ರಣ ಮಸೂದೆ’ಯ ಕುರಿತು ರಾಜ್ಯದಲ್ಲಿ ರಾಜಕೀಯ ಜಟಾಪಟಿ ನಡೆಯುತ್ತಿರುವ ಬೆನ್ನಲ್ಲೇ ಖರ್ಗೆ ಈ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ಆರ್‌ಎಸ್ಎ‌ಸ್‌ಗೆ ನನ್ನ ಒಂದೇ ಪ್ರಶ್ನೆ, ನೀವು ಯಾವ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದೀರಿ ಎಂದು ನಮಗೆ ತಿಳಿಸಿ ಎಂದು ಖರ್ಗೆ ಸವಾಲು ಹಾಕಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದ 500 ಕಾಂಗ್ರೆಸ್ ಸದಸ್ಯರ ಪಟ್ಟಿಯನ್ನು ತಾನು ನೀಡಬಲ್ಲೆ, ಅದೇ ರೀತಿ ಆರ್.ಎಸ್.ಎಸ್ ಪ್ರಾಣತೆತ್ತ ತನ್ನ 50 ಜನರ ಹೆಸರನ್ನಾದರೂ ನೀಡಲಿ ಎಂದು ಅವರು ಸವಾಲೆಸೆದಿದ್ದಾರೆ. ಅಲ್ಲದೆ, ದೇಶ ವಿಭಜನೆಯ ನಂತರ ನಡೆದ ಕೋಮುಗಲಭೆಗಳ ಸಂದರ್ಭದಲ್ಲಿ ಜನರನ್ನು ರಕ್ಷಿಸುವಲ್ಲಿ ಸಂಘದ ಪಾತ್ರವೇನಿತ್ತು ಎಂದು ಅವರು ಪ್ರಶ್ನಿಸಿದ್ದಾರೆ.

ಆರ್‌ಎಸ್ಎ‌ಸ್ ಅನ್ನು ನಿಷೇಧಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಂಘವು ನೋಂದಣಿಯೇ ಆಗಿಲ್ಲ, ಹೀಗಿರುವಾಗ ಅದನ್ನು ನಿಷೇಧಿಸಲು ಹೇಗೆ ಸಾಧ್ಯ ಎಂದು ಕೇಳಿದ್ದಾರೆ. ಸಂತೋಷ್ ಮತ್ತು ಮೋಹನ್ ಭಾಗವತ್ ಹೇಳಿರುವುದು ನಿಜ, ಅವರನ್ನು ನಿಷೇಧಿಸಲು ಸಾಧ್ಯವಿಲ್ಲ. ಏಕೆಂದರೆ ಅವರು ನೋಂದಣಿಯೇ ಆಗಿಲ್ಲ. ನಿಮ್ಮ ಸಂಸ್ಥೆಯನ್ನು ನಿಷೇಧಿಸಲು, ಮೊದಲು ನೀವು ನೋಂದಾಯಿಸಿಕೊಳ್ಳಬೇಕಲ್ಲವೇ ಎಂದು ಕಾಲೆಳೆದಿದ್ದಾರೆ.

ಇದೇ ವೇಳೆ, ‘ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿ ಬಳಕೆ ನಿಯಂತ್ರಣ ಮಸೂದೆ, 2026’ ಅನ್ನು ಖರ್ಗೆ ಬಲವಾಗಿ ಸಮರ್ಥಿಸಿಕೊಂಡರು. ಇದು ಕೇವಲ ಆರ್.ಎಸ್.ಎಸ್ ಅನ್ನು ಗುರಿಯಾಗಿಸಿ ತಂದಿರುವ ಮಸೂದೆ ಎಂಬ ಬಿಜೆಪಿಯ ಆರೋಪಗಳನ್ನು ಅವರು ಸಾರಾಸಗಟಾಗಿ ತಳ್ಳಿಹಾಕಿದರು. ಉದ್ದೇಶಿತ ಕಾನೂನಿನ ಅಡಿ, ಯಾವುದೇ ಸಂಸ್ಥೆಗಳು ಸಾರ್ವಜನಿಕ ಆಸ್ತಿ ಅಥವಾ ಸರ್ಕಾರಿ ಆವರಣದಲ್ಲಿ ಕಾರ್ಯಕ್ರಮಗಳನ್ನು ನಡೆಸುವ ಮೊದಲು ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಈ ಮಸೂದೆಯಲ್ಲಿ ಯಾವುದೇ ಸಂಸ್ಥೆ, ಸಂಘ, ಅಥವಾ ರಾಜಕೀಯ ಪಕ್ಷದ ಹೆಸರನ್ನು ಉಲ್ಲೇಖಿಸಲಾಗಿದೆಯೇ ಎಂದು ಪ್ರಶ್ನಿಸಿದ ಖರ್ಗೆ, ಸಾರ್ವಜನಿಕ ಸ್ಥಳಗಳ ಬಳಕೆಯನ್ನು ನಿಯಂತ್ರಿಸುವ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನಿರ್ದೇಶನಗಳಿಗೆ ಕಾನೂನಿನ ಬಲ ನೀಡುವ ಉದ್ದೇಶವನ್ನು ಮಾತ್ರ ಈ ಮಸೂದೆ ಹೊಂದಿದೆ ಎಂದು ಸ್ಪಷ್ಟಪಡಿಸಿದರು.

ಖಾಸಗಿ ಜಾಗದಲ್ಲಿ ಯಾರು ಬೇಕಾದರೂ ಕಾರ್ಯಕ್ರಮ ಮಾಡಿಕೊಳ್ಳಬಹುದು. ನಿಮ್ಮ ಮನೆ ಅಥವಾ ಕಚೇರಿಯ ಕಾಂಪೌಂಡ್ ಒಳಗೆ ನೀವು ಏನು ಬೇಕಾದರೂ ಮಾಡಿ, ಯಾರಿಗೂ ಅಭ್ಯಂತರವಿಲ್ಲ, ಆದರೆ ಸಾರ್ವಜನಿಕ ಆಸ್ತಿಯಲ್ಲಿ ಕಾರ್ಯಕ್ರಮ, ಮೆರವಣಿಗೆ ಮಾಡುವಾಗ ನಿಯಂತ್ರಿಸುವ ಜವಾಬ್ದಾರಿ ಸರ್ಕಾರಕ್ಕಿದೆ ಎಂದರು. ಈ ಮಸೂದೆ ಯಾವುದೇ ಸಂಘಟನೆಯನ್ನು ನಿಷೇಧಿಸುವ ಪ್ರಯತ್ನವಲ್ಲ ಎಂದು ಸ್ಪಷ್ಟಪಡಿಸಿದ ಅವರು, ಬಿಜೆಪಿಗೆ ‘ಪ್ರಿಯಾಂಕ್-ಫೋಬಿಯಾ’ ಶುರುವಾಗಿದೆ ಎಂದು ವ್ಯಂಗ್ಯವಾಡಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲಮರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಶೈಕ್ಷಣಿಕ ಸಾಮಗ್ರಿಗಳ ವಿತರಣೆ

ನವೆಂಬರ್ 14ರ ಮಕ್ಕಳ ದಿನಾಚರಣೆ ಹಾಗೂ ಜವಾಹರಲಾಲ್ ನೆಹರು ಅವರ ಜನ್ಮದಿನದ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ ವೇದಿಕೆಯಾಗಲಿ

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು...

ಆನ್‌ಲೈನ್‌ನಲ್ಲಿ 70 ಬಾಲಕಿಯರಿಗೆ ಲೈಂಗಿಕ ಶೋಷಣೆ: ಭಾರತೀಯ ವಿದ್ಯಾರ್ಥಿಗೆ ಯುಕೆಯಲ್ಲಿ 30 ವರ್ಷ ಜೈಲು!

ಬ್ರಿಟನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿ ಬಿಲಾಲ್ ಕಾಜಿಗೆ ಅಲ್ಲಿನ ನ್ಯಾಯಾಲಯವು 30 ವರ್ಷಗಳ...

ಪಂಜಾಬ್‌ನಲ್ಲಿ 5,000ಕ್ಕೂ ಹೆಚ್ಚು ಕೃಷಿ ತ್ಯಾಜ್ಯ ಸುಡುವ ಪ್ರಕರಣ ದಾಖಲು: 1 ಕೋಟಿ ರೂ. ದಂಡ ವಿಧಿಸಿದ ಸರ್ಕಾರ

ದೆಹಲಿ ಮತ್ತು ಉತ್ತರ ಭಾರತದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ನಡುವೆಯೇ, ಪಂಜಾಬ್‌ನಲ್ಲಿ ಕೃಷಿ...