ಪ್ರಥಮ ನೈಸರ್ಗಿಕ ಅನಿಲ ಆಧಾರಿತ 370 ಮೆ.ವ್ಯಾ ಸಾಮರ್ಥ್ಯದ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಉದ್ಘಾಟನೆ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಲಹಂಕದಲ್ಲಿರುವ ರಾಜ್ಯದ ಪ್ರಥಮ ನೈಸರ್ಗಿಕ ಅನಿಲ ಆಧಾರಿತ 370 ಮೆ.ವ್ಯಾ ಸಾಮರ್ಥ್ಯದ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಮಂಗಳವಾರ ಲೋಕಾರ್ಪಣೆಗೊಳಿಸಿದರು.

ಬಳಿಕ ಮಾತನಾಡಿದ ಅವರು, “ರಾಜ್ಯದ ಆರ್ಥಿಕ-ಸಾಮಾಜಿಕ ಪ್ರಗತಿಗೆ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಬೇಕು. ಕೃಷಿ, ಕೈಗಾರಿಕೆ ಬೆಳವಣಿಗೆ ಆದರೆ ಮಾತ್ರ ಜಿಡಿಪಿ ಬೆಳವಣಿಗೆ” ಎಂದು ಹೇಳಿದರು.

“ಕೃಷಿ ಮತ್ತು ಕೈಗಾರಿಕೆ ಹಾಗೂ ವಸತಿಗೆ ಅಪಾರ ಪ್ರಮಾಣದ ವಿದ್ಯುತ್ ಅಗತ್ಯ. ಕೃಷಿ, ಕೈಗಾರಿಕೆ ಅಭಿವೃದ್ಧಿಯಿಂದ ಉದ್ಯೋಗ ಸೃಷ್ಟಿಯಾಗುತ್ತದೆ. ಉದ್ಯೋಗದಿಂದ ಜಿಡಿಪಿ ಪ್ರಗತಿಯಾಗುತ್ತದೆ. ಆದ್ದರಿಂದ ನಾವು ವಿದ್ಯುತ್ ಉತ್ಪಾದನೆಯಲ್ಲಿ ಸಂಪೂರ್ಣ ಸ್ವಾವಲಂಬಿಗಳಾಗುವ ದಿಕ್ಕಿನಲ್ಲಿ ಸಾಗುತ್ತಿದ್ದೇವೆ. ಅದರ ಭಾಗವಾಗಿಯೇ ಈ ವಿದ್ಯುತ್ ಉತ್ಪಾದನಾ ತಯಾರಿಕಾ ಘಟಕ ಲೋಕಾರ್ಪಣೆ ಮಾಡಿದ್ದೇನೆ” ಎಂದರು.

Advertisements

“1500 ಮೌಲ್ಯದ ಕೋಟಿ ವಿದ್ಯುತ್ ಅನ್ನು ನಾವು ಹೊರಗಡೆಗೆ ಮಾರಾಟ ಮಾಡಿದ್ದೇವೆ. ಕಳೆದ ವರ್ಷ ಮಳೆ ಬರಲಿಲ್ಲ. ಬರಗಾಲ ಇತ್ತು. ಬರಗಾಲದಲ್ಲೂ ಕೂಡ ನಾವು ಅಗತ್ಯ ವಿದ್ಯುತ್ ಪೂರೈಸಿದೆವು. 2030 ಕ್ಕೆ 60000 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಗುರಿ ಇದೆ. ಇದನ್ನು ನಾನು ಬಜೆಟ್ ನಲ್ಲೇ ಘೋಷಿಸಿದ್ದೇನೆ. ವರ್ಷದಿಂದ ವರ್ಷಕ್ಕೆ ವಿದ್ಯುತ್ ಬಳಕೆ, ಬೇಡಿಕೆ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವಾಗಿ ನಾವು ಉತ್ಪಾದನೆ ಹೆಚ್ಚಿಸಿ ಸ್ವಾವಲಂಬಿ ಆಗಿದ್ದೇವೆ. ನಾವು ಹೊರಗಡೆಗೆ ವಿದ್ಯುತ್ ಮಾರಾಟ ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ” ಎಂದು ಹೇಳಿದರು.

“ಯಲಹಂಕದ ವಿದ್ಯುತ್ ಸ್ಥಾವರಕ್ಕೆ ನಾವೇ ನಮ್ಮ ಸರ್ಕಾರದಲ್ಲೇ ಶಂಕು ಸ್ಥಾಪನೆ ಮಾಡಿದ್ದೆವು. ಈಗ ನಮ್ಮದೇ ಸರ್ಕಾರ ಇದನ್ನು ಲೋಕಾರ್ಪಣೆ ಕೂಡ ಮಾಡಿದ್ದೇವೆ” ಎಂದರು.

ಬೋನಸ್ ಘೋಷಣೆ

ಯಲಹಂಕ ವಿದ್ಯುತ್ ಸ್ಥಾವರದ ಆರಂಭಕ್ಕೆ ಶ್ರಮಿಸಿದ ಎಲ್ಲಾ ಕಾರ್ಮಿಕರಿಗೆ 5000 ರೂಪಾಯಿ ಬೋನಸ್ ಅನ್ನು ಇದೇ ಸಂದರ್ಭದಲ್ಲಿ ಸಿಎಂ ಘೋಷಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಶಾಸಕರಾದ ಯಲಹಂಕ ವಿಶ್ವನಾಥ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್ ಮತ್ತು ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X