ದಾಂಡೇಲಿ | ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನರ‌ ಸಾವು

Date:

ಉತ್ತರ ಕನ್ನಡದ ದಾಂಡೇಲಿ ಬಳಿ ಬರಿಯಂಪೈಲಿ ಗ್ರಾಮದ ಸನಿಹ ಅಕೋಡಾ ಮಜಿರೆ ಬಳಿ ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನ ಸಾವನ್ನಪ್ಪಿದ ದುರ್ಘಟನೆ ಇಂದು ನಡೆದಿದೆ. ಮೃತರಲ್ಲಿ ನಾಲ್ವರು ಮಕ್ಕಳು‌ ಸೇರಿದ್ದಾರೆ.  ಇವರೆಲ್ಲರೂ ಹುಬ್ಬಳ್ಳಿಯಿಂದ ಪ್ರವಾಸಕ್ಕೆಂದು ಆಗಮಿಸಿದ್ದರು.

- Advertisement -

ಕಾಳಿ ನದಿಯಲ್ಲಿ ಈಜಲು ಇಳಿದಾಗ ಆರು ವರ್ಷದ ಮೊಹಿನ್‌ ಅಹಮ್ಮದ್ ನೀರಿನ ಸೆಳವಿಗೆ ಸಿಕ್ಕಿದ್ದಾನೆ. ಆತನನ್ನು ರಕ್ಷಿಸಲು ಅಲ್ಪಿಯಾ ಅಹಮ್ಮದ್ ( 10) , ಇಫ್ರಾ ಅಹಮ್ಮದ್( 15), ಅಬೀದ್ ಅಹಮ್ಮದ್ (12) ನೀರಲ್ಲಿ ಮುಳುಗಿದರು. ಇವರ ರಕ್ಷಣೆ ಇಳಿದ ತಂದೆ ನಜೀರ್ ಅಹಮ್ಮದ್ (40) , ನಜೀರ್ ಸಹೋದರಿ ರೇಶ್ಮಾ ಉನ್ನೀಸಾ ( 38) ಸಹ ನದಿಯಲ್ಲಿ ಮುಳುಗಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇಡಿ ಎಂಬ ತನಿಖಾ ಸಂಸ್ಥೆಯ ಘನತೆಯನ್ನು ಮಣ್ಣುಪಾಲು ಮಾಡಿದ್ದೇ ಮೋದಿಯ ‘ಮಹಾನ್’ ಸಾಧನೆ

ಇವರ ಜೊತೆಗಿದ್ದ ಇಬ್ಬರು ಸುರಕ್ಷಿತವಾಗಿದ್ದಾರೆ. ಇವರು ನದಿಯ ದಡದಲ್ಲಿದ್ದರು ಎನ್ನಲಾಗಿದೆ. ನದಿಯಲ್ಲಿ ಮುಳುಗಿದ ಎಲ್ಲರನ್ನು ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ದಾಂಡೇಲಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು ನಿಂದ ಹೊರಟಿದ್ದರು ;

ನಜೀರ್ ಹಾಗೂ ಅವರ ಸಹೋದರಿ ರೇಶ್ಮಾ ಬೆಂಗಳೂರುನಿಂದ ಹುಬ್ಬಳ್ಳಿಯ ಸಂಬಂಧಿಕರ ಮನೆಗೆ ಭೇಟಿ ನೀಡಿ, ಅಲ್ಲಿಂದ ದಾಂಡೇಲಿ ಮಾರ್ಗವಾಗಿ ಕಾರವಾರಕ್ಕೆ ಬರುವವರಿದ್ದರು‌. ಮಾರ್ಗಮಧ್ಯೆ ಹುಬ್ಬಳ್ಳಿ ಸಂಬಂಧಿಕರ ಮನೆಗೆ ನಜೀರ್ ಅಹಮ್ಮದ್ ಹೋಗಿದ್ದರು. ಹುಬ್ಬಳ್ಳಿ ಯಿಂದ ಕಾರವಾರಕ್ಕೆ ಬರುವವರಿದ್ದರು. ಮಾರ್ಗಮಧ್ಯೆ ಬಿರಯಂಪಯಲಿ ಗ್ರಾಮ ಅಕೋಡಾ ಬಳಿ ಕಾಳಿ ನದಿ ನೋಡಲು ಇಳಿದಿದ್ದಾರೆ. ಇದು ಅತ್ಯಂತ ದುರ್ಗಮ ಪ್ರದೇಶ. ಇಲ್ಲಿ ನದಿಯಲ್ಲಿ ಈಜಲು ಯಾರೂ ಹೋಗದ ಸ್ಥಳವೆಂದು ಸ್ಥಳೀಯರು ಮಾತಾಡಿಕೊಳ್ಳುತ್ತಿದ್ದಾರೆ.

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...