ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ: ಸಿಎಂ ಡಿ ಕೆ ಶಿವಕುಮಾರ್

Date:

ಸಂವಿಧಾನ ಎನ್ನುವುದು ಕೇವಲ ಪುಸ್ತಕವಲ್ಲ, ಅದು ಪ್ರತಿಯೊಬ್ಬ ಭಾರತೀಯನ ಹಕ್ಕು, ಗೌರವ, ಸ್ವಾತಂತ್ರ್ಯ ಮತ್ತು ಸಮಾನತೆಯ ರಕ್ಷಾ ಕವಚ. ಅದರ ಆಶಯ ಮತ್ತು ಮೌಲ್ಯಗಳನ್ನು ಬಾಲ್ಯದಿಂದಲೇ ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಪಠ್ಯಕ್ರಮದಲ್ಲಿ ಸಂವಿಧಾನಕ್ಕೆ ಸಂಬಂಧಿಸಿದ ಪಾಠಗಳನ್ನು ಅಳವಡಿಸಲಾಗುವುದು. ಇದಕ್ಕಾಗಿ ಪ್ರತ್ಯೇಕ ಸಮಿತಿ ರಚಿಸಲಾಗುವುದು” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಘೋಷಿಸಿದರು.

- Advertisement -

ಮಹಾರಾಜ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶಿವಕುಮಾರ್ ಅವರು ಮಾತನಾಡಿದರು. “ಸಂವಿಧಾನ ದೇಶದ ಅಂತರಾತ್ಮ. ಪ್ರಜಾಪ್ರಭುತ್ವದ ಶಕ್ತಿ. ದೇಶದ 140 ಕೋಟಿ ಜನರ ಕನಸು, ಗೌರವ ಮತ್ತು ಹಕ್ಕುಗಳನ್ನು ಕಾಪಾಡುವ ರಾಷ್ಟ್ರೀಯ ಶಕ್ತಿ. ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ತಿಳಿದುಕೊಳ್ಳಬೇಕು. ಅದರ ಮೌಲ್ಯಗಳನ್ನು ಪುಸ್ತಕಕ್ಕೆ ಸೀಮಿತಗೊಳಿಸದೆ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಪ್ರತಿಪಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನ ದಿನ | ಸಂವಿಧಾನಕ್ಕೆ ಮೋದಿ ಸರ್ಕಾರ ಮತ್ತು...

ಭಾರತವು ಸಂವಿಧಾನ ದಿನವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆ ಮತ್ತು ಸಂವಿಧಾನದ ಮೂಲ ಆಶಯಗಳು ಅಭೂತಪೂರ್ವ ಬಿಕ್ಕಟ್ಟಿಗೆ ಸಿಲುಕಿವೆ. 2014ರಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...

ಯುಪಿ ಚುನಾವಣೆ: ಆಡಳಿತ ಯಂತ್ರ, ಜಾತಿ ಸಮೀಕರಣ ಮತ್ತು...

2027ರ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಲ್ಲಿನ ಲಿಂಗ ಅಂತರ, ಜಾತಿ ಸಮೀಕರಣ ಹಾಗೂ ಮೈತ್ರಿ ಪಕ್ಷಗಳ ಸೀಟು ಹಂಚಿಕೆಯ ಚೌಕಾಸಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ನಡೆಯುತ್ತಿರುವ...

ಯುಪಿ ಚುನಾವಣೆ | ಯುದ್ಧಕ್ಕೆ ಮೊದಲೇ ಉಡುಗಿ ಹೋಯಿತೇ...

ಉತ್ತರ ಪ್ರದೇಶದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನಾಗಾಲೋಟಕ್ಕೆ ಬ್ರೇಕ್ ಹಾಕಿ ದೇಶದ ರಾಜಕಾರಣದಲ್ಲೇ ಸಂಚಲನ ಮೂಡಿಸಿತ್ತು ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ಮೈತ್ರಿ. ಆದರೀಗ, 2027ರ ಉತ್ತರ ಪ್ರದೇಶ ವಿಧಾನಸಭಾ...

“ಮಕ್ಕಳಿಗೆ ಸಂವಿಧಾನದ ಆಶಯಗಳನ್ನು ಪರಿಚಯಿಸದಿದ್ದರೆ ನಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿದಂತಾಗುವುದಿಲ್ಲ. ಹೀಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳ ಜತೆಗೆ ಖಾಸಗಿ ಶಾಲೆಗಳಲ್ಲೂ ಸಂವಿಧಾನದ ಆಶಯಗಳು, ಮೂಲಭೂತ ಹಕ್ಕುಗಳು ಹಾಗೂ ಮೌಲ್ಯಗಳನ್ನು ಬೋಧಿಸುವ ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ಸಮಿತಿ ರಚಿಸಿ ಪಠ್ಯಪುಸ್ತಕಗಳಲ್ಲಿ ಸೂಕ್ತ ಪಾಠಗಳನ್ನು ಅಳವಡಿಸಲಾಗುವುದು. ವಿದ್ಯಾರ್ಥಿಗಳು ಸಂವಿಧಾನವನ್ನು ಕೇವಲ ಓದುವುದಷ್ಟೇ ಅಲ್ಲ, ಅದರ ತತ್ವಗಳನ್ನು ಜೀವನದಲ್ಲಿ ಪಾಲಿಸುವಂತಾಗಬೇಕು ಎಂಬುದು ಸರ್ಕಾರದ ಆಶಯ” ಎಂದರು.

ಇದನ್ನೂ ಓದಿ: ಸಂವಿಧಾನ ಬದಲಿಸುವ ಹೇಳಿಕೆ ನೀಡಿದ್ದರೆ ಇಂದೇ ರಾಜಕೀಯ ನಿವೃತ್ತಿ ಪಡೆಯುವೆ: ಡಿ ಕೆ ಶಿವಕುಮಾರ್

“ಯುವಜನರಲ್ಲಿ ಪ್ರಜಾಪ್ರಭುತ್ವದ ಅರಿವು ಮತ್ತು ನಾಯಕತ್ವ ಗುಣ ಬೆಳೆಸಲು ವಿಧಾನಸಭಾ ಕ್ಷೇತ್ರಗಳಲ್ಲಿ ಯುವ ಸಂಸತ್‌ಗಳ ರಚನೆ ಹಾಗೂ ಯುವ ನಾಯಕರನ್ನು ಗುರುತಿಸುವ ಕಾರ್ಯಕ್ರಮಗಳನ್ನೂ ರೂಪಿಸಲಾಗಿದೆ. ಮುಂದಿನ ಪೀಳಿಗೆಗೆ ಸಂವಿಧಾನದ ಮಹತ್ವ ತಲುಪಿಸುವ ನಿಟ್ಟಿನಲ್ಲಿ ಇಂತಹ ಪ್ರಯತ್ನಗಳು ಅಗತ್ಯ” ಎಂದು ಹೇಳಿದರು.

ಸಂವಿಧಾನವೇ ರಾಷ್ಟ್ರೀಯ ಗ್ರಂಥ, ದೇಶದ ಅಂತರಾತ್ಮ

“ಮಹಾತ್ಮ ಗಾಂಧೀಜಿ ಮತ್ತು ಪಂಡಿತ್ ಜವಾಹರಲಾಲ್ ನೆಹರು ಅವರ ಮಾರ್ಗದರ್ಶನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಂವಿಧಾನ ರಚನೆಯ ಮಹತ್ವದ ಜವಾಬ್ದಾರಿ ನೀಡಲಾಯಿತು. ದೇಶದ ಪ್ರತಿಯೊಬ್ಬ ಪ್ರಜೆಗೂ ನ್ಯಾಯ, ಹಕ್ಕು ಮತ್ತು ಸಮಾನತೆಯ ಅವಕಾಶ ಕಲ್ಪಿಸಿದ ಸಂವಿಧಾನ ರಚನಾ ಮಹನೀಯರಿಗೆ ಕೋಟಿ ನಮನ ಸಲ್ಲಿಸಬೇಕು. ಸಂವಿಧಾನ ನಮ್ಮೆಲ್ಲರ ನ್ಯಾಯದ ಆಧಾರ, ಸಮಾನತೆಯ ಬಂಡಾರ. ಪ್ರಜಾಪ್ರಭುತ್ವಕ್ಕೆ ಶಕ್ತಿ ತುಂಬಿದ ಪವಿತ್ರ ಗ್ರಂಥ” ಎಂದು ಬಣ್ಣಿಸಿದರು.

“ಸಂವಿಧಾನವೇ ದೇಶದ ರಾಷ್ಟ್ರೀಯ ಗ್ರಂಥ, ಸಂವಿಧಾನವೇ ದೇಶದ ಏಕೈಕ ಧರ್ಮ ಎಂಬ ಭಾವನೆಯೊಂದಿಗೆ ಅದನ್ನು ಉಳಿಸಿ ಬೆಳೆಸಬೇಕು. ಮನೆ ನಿರ್ಮಾಣಕ್ಕೆ ನೀಲನಕ್ಷೆ ಹೇಗೆ ಅಗತ್ಯವೋ, ದೇಶದ ನಿರ್ಮಾಣಕ್ಕೂ ಸಂವಿಧಾನದ ಬುನಾದಿ ಅಷ್ಟೇ ಮುಖ್ಯ. ಸಂವಿಧಾನ ನಿಂತ ನೀರಲ್ಲ. ಕಾಲಕ್ಕೆ ತಕ್ಕಂತೆ ಸಮಾಜದ ಅಗತ್ಯಗಳಿಗೆ ಅನುಗುಣವಾಗಿ ಬದಲಾವಣೆಗಳನ್ನು ಅಳವಡಿಸಿಕೊಳ್ಳುವ ಶಕ್ತಿ ಅದಕ್ಕಿದೆ. ಆದರೆ, ಅದರ ಮೂಲ ಆಶಯಗಳಾದ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವವನ್ನು ಎಂದಿಗೂ ಮರೆಯಬಾರದು” ಎಂದರು.

ಇದನ್ನೂ ಓದಿ: ಸಂವಿಧಾನ ದಿನ | ಸಂವಿಧಾನದ ರಕ್ಷಣೆಗೆ ಗಾಂಧಿ, ಖರ್ಗೆ ಕರೆ; ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳ ಆಕ್ರೋಶ

ಅಧಿಕಾರ ಪ್ರಶ್ನಿಸುವ ಧೈರ್ಯ ನೀಡಿದ ಸಂವಿಧಾನ

“ಸಂವಿಧಾನ ಕೇವಲ ಮುಖ್ಯಮಂತ್ರಿ, ಸಚಿವರು, ಶಾಸಕರು ಮತ್ತು ಪಂಚಾಯಿತಿ ಸದಸ್ಯರಿಗೆ ಅಧಿಕಾರ ನೀಡಿಲ್ಲ. ಅಧಿಕಾರದಲ್ಲಿರುವವರನ್ನು ಪ್ರಶ್ನಿಸುವ ಧೈರ್ಯವನ್ನೂ ಸಾಮಾನ್ಯ ಜನರಿಗೆ ನೀಡಿದೆ. ನ್ಯಾಯ ಸಿಗದಿದ್ದಾಗ ನ್ಯಾಯಾಲಯದ ಮೆಟ್ಟಿಲೇರಿ ಸಂವಿಧಾನದ ಆಶಯದಂತೆ ತಮ್ಮ ಹಕ್ಕುಗಳನ್ನು ಕೇಳುವ ಅವಕಾಶ ಪ್ರತಿಯೊಬ್ಬರಿಗೂ ಇದೆ. ಶ್ರೀಮಂತರು ಮತ್ತು ಬಡವರು ಎಂಬ ತಾರತಮ್ಯವಿಲ್ಲದೆ ಎಲ್ಲರಿಗೂ ಒಂದೇ ಕಾನೂನು, ಒಂದೇ ನ್ಯಾಯ ಎಂಬ ತತ್ವವನ್ನು ಸಂವಿಧಾನ ಎತ್ತಿಹಿಡಿದಿದೆ” ಎಂದು ಹೇಳಿದರು.

“ನಾನು ರೈತನ ಮಗನಾಗಿ, ಜನರ ಪ್ರಜಾಸೇವಕನಾಗಿ ಮುಖ್ಯಮಂತ್ರಿಯಾಗಿ ಇಲ್ಲಿ ನಿಂತಿದ್ದೇನೆ. ಕಳೆದ 40 ವರ್ಷಗಳಿಂದ ವಿವಿಧ ಹಂತಗಳಲ್ಲಿ ಜನಸೇವೆ ಮಾಡಿಕೊಂಡು ಬಂದಿದ್ದೇನೆ. ನನ್ನ ಬದುಕಿಗೆ ಶಕ್ತಿ, ಧೈರ್ಯ, ಸ್ಫೂರ್ತಿ ಮತ್ತು ಪ್ರೇರಣೆ ನೀಡಿರುವುದು ಸಂವಿಧಾನ. ಅಧಿಕಾರ ನೀಡುವುದರ ಜತೆಗೆ ಜನರ ಹಕ್ಕುಗಳನ್ನು ಗೌರವಿಸುವ ಜವಾಬ್ದಾರಿಯನ್ನೂ ಅದು ನಮಗೆ ನೀಡಿದೆ” ಎಂದು ತಿಳಿಸಿದರು.

ಸಾಮಾಜಿಕ ನ್ಯಾಯವೇ ಸಂವಿಧಾನದ ಜೀವಾಳ

“ಸಂವಿಧಾನ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ಮತ್ತು ನ್ಯಾಯ ಒದಗಿಸುವ ವ್ಯವಸ್ಥೆಯನ್ನು ರೂಪಿಸಿದೆ. 2013ರಿಂದ 2018ರವರೆಗೆ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಮೀಸಲಿಡುವ ಐತಿಹಾಸಿಕ ನಿರ್ಧಾರ ಕೈಗೊಂಡಿತ್ತು. ಸಾಮಾಜಿಕ ನ್ಯಾಯದ ಆಶಯವನ್ನು ಕಾರ್ಯರೂಪಕ್ಕೆ ತರುವ ಇಂತಹ ನಿರ್ಧಾರಗಳು ದೇಶಕ್ಕೆ ಮಾದರಿಯಾಗಿವೆ” ಎಂದರು.

dkshi siddu
ಚಿತ್ರ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಫೇಸ್‌ಬುಕ್

“ಸಂವಿಧಾನದ ಪೀಠಿಕೆಯಲ್ಲಿ ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನು ಸೇರ್ಪಡೆಗೊಳಿಸಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ನಿರ್ಧಾರವನ್ನು ಸ್ಮರಿಸಿದ ಅವರು, ಈ ಪದಗಳ ಸೇರ್ಪಡೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ” ಎಂದರು.

“ಕಾಂಗ್ರೆಸ್ ಪಕ್ಷದ ಇತಿಹಾಸವೇ ದೇಶದ ಇತಿಹಾಸ. ಕಾಂಗ್ರೆಸ್ ಶಕ್ತಿಯೇ ದೇಶದ ಶಕ್ತಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಎಲ್ಲ ವರ್ಗಗಳಿಗೂ ನ್ಯಾಯ ಮತ್ತು ಹಕ್ಕುಗಳನ್ನು ಒದಗಿಸುವ ಕೆಲಸ ಮಾಡಿದೆ. ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವಲ್ಲಿ ಪಕ್ಷ ಸದಾ ಬದ್ಧವಾಗಿದೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಂಪ್ ಸೆಡ್ಡು ಹೊಡೆದ ಕಿಮ್: ಮತ್ತಷ್ಟು ಅಣ್ವಸ್ತ್ರ ನಿರ್ಮಾಣಕ್ಕೆ ಕರೆ

ಇತ್ತೀಚಿನ ಏಷ್ಯಾ ಪ್ರವಾಸದ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದ...

ಅಮೆರಿಕದೊಂದಿಗೆ ಶೀಘ್ರ ವ್ಯಾಪಾರ ಒಪ್ಪಂದಕ್ಕೆ ಬದ್ಧ: ಹೆಚ್ಚುವರಿ ಉತ್ಪಾದನಾ ಸಾಮರ್ಥ್ಯದ ಆರೋಪ ತಳ್ಳಿಹಾಕಿದ ಭಾರತ

ಅಮೆರಿಕದೊಂದಿಗೆ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು ಶೀಘ್ರದಲ್ಲೇ ಅಂತಿಮಗೊಳಿಸಲು ಬದ್ಧವಾಗಿರುವುದಾಗಿ ಕೇಂದ್ರ ಸರ್ಕಾರ...

ಉತ್ತರ ಪ್ರದೇಶ SIR: 194 ಕ್ಷೇತ್ರಗಳಲ್ಲಿ 2022ರ ಗೆಲುವಿನ ಅಂತರಕ್ಕಿಂತ ‘ಗೈರು’ ಮತದಾರರ ಸಂಖ್ಯೆಯೇ ಅಧಿಕ!

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿದೆ....