ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಜೆಡಿಎಸ್‌ ಮುಖಂಡರ ಮೇಲೆ ಹಲ್ಲೆ ಹೆಚ್ಚಳ: ಕುಮಾರಸ್ವಾಮಿ ಆರೋಪ

Date:

  • ಗೃಹ ಇಲಾಖೆ, ಪೊಲೀಸ್ ವ್ಯವಸ್ಥೆ ಆಡಳಿತ ಪಕ್ಷದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ
  • ಕೃತ್ಯ ಎಸಗಿದ ದುರುಳರನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಬೇಕು: ಕುಮಾರಸ್ವಾಮಿ

ಚಿಂತಾಮಣಿ ವಿಧಾನಸಭೆ ಕ್ಷೇತ್ರದ ಜನತಾದಳದ ಮುಖಂಡರು, ನಗರಸಭೆ ಸದಸ್ಯ ಅಗ್ರಹಾರ ಮುರಳಿ ಅವರ ಮೇಲೆ ದುಷ್ಕರ್ಮಿಗಳು ಮಚ್ಚು ಲಾಂಗ್ ಗಳಿಂದ ಪೈಶಾಚಿಕ ದಾಳಿ ನಡೆಸಿರುವ ಘಟನೆ ಖಂಡನೀಯ. ಈ ಕೃತ್ಯ ಎಸಗಿದ ದುರುಳರನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಬೇಕು ಹಾಗೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ

- Advertisement -

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಮೇಲೆ ವಿಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲಿನ ದೌರ್ಜನ್ಯ ಮೇರೆ ಮೀರಿದೆ. ಗೃಹ ಇಲಾಖೆ, ಪೊಲೀಸ್ ವ್ಯವಸ್ಥೆ ಆಡಳಿತ ಪಕ್ಷದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ಅಧಿಕಾರಿಗಳು ಆಡಳಿತ ಪಕ್ಷ ನಾಯಕರ ಕೈಗೊಂಬೆಗಳು ಆಗಿರುವ ಪರಿಣಾಮವೇ ಇಂಥ ಘಟನೆಗಳಿಗೆ ದಾರಿ ಆಗುತ್ತಿದೆ. ರಾಜ್ಯದಲ್ಲಿ ಕಳೆದ ಮೂರು ನಾಲ್ಕು ತಿಂಗಳಿನಿಂದ ಈ ರೀತಿಯ ಘಟನೆಗಳು ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಪೂರ್ಣವಾಗಿ ಕುಸಿದು ಬಿದ್ದಿದೆ. ಮೊದಲು ಇಂಥ ಪ್ರಕರಣಗಳು ನಡೆಯುತ್ತಿರಲಿಲ್ಲ” ಎಂದು ಕಾಂಗ್ರೆಸ್‌ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರವೇನೋ ಬದಲಾಯಿತು, ಕೋಮುವಾದಿಗಳ ಅಟಾಟೋಪಗಳಿಗೆ  ಅಂಕುಶ ಯಾವಾಗ?

“ಕೆಲ ದಿನಗಳ ಹಿಂದೆ ಹಾಸನದಲ್ಲಿ ನಮ್ಮ ಪಕ್ಷದ ಮುಖಂಡ ಕೃಷ್ಣೇಗೌಡರನ್ನು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಹೊಳೆನರಸೀಪುರದಲ್ಲಿ ನಮ್ಮ ಪಕ್ಷದ ಮುಖಂಡ ಅಶ್ವತ್ಥ್ ಅವರ ಮೇಲೆ ದಾಳಿ ನಡೆದಿತ್ತು. ಈಗ ಚಿಂತಾಮಣಿಯಲ್ಲಿ ಅಂಥದ್ದೇ ಘಟನೆ ನಡೆದಿರುವುದು ಪ್ರತಿಪಕ್ಷಗಳನ್ನು ಹೆದರಿಸಿ ಬೆದರಿಸುವ ದುಷ್ಟ ಹುನ್ನಾರವಲ್ಲದೆ ಮತ್ತೇನಲ್ಲ” ಎಂದಿದ್ದಾರೆ.

“ನಮ್ಮ ಪಕ್ಷದ ಕಾರ್ಯಕರ್ತರು, ಮುಖಂಡರನ್ನು ವ್ಯವಸ್ಥಿತವಾಗಿ ಗುರಿ ಮಾಡಲಾಗುತ್ತಿದೆ. ಇದು ಸರಿ ಅಲ್ಲ, ಸಹಿಸಲು ಸಾಧ್ಯವಿಲ್ಲ. ಸಮಾಜದಲ್ಲಿ ಸದಾ ಶಾಂತಿ ನೆಲೆಸಿರಬೇಕು ಎನ್ನುವುದು ನಮ್ಮ ಪಕ್ಷದ ಆಶಯ. ಸರಕಾರ ಮತ್ತು ಗೃಹ ಸಚಿವರು ಕೂಡಲೇ ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು. ತಪ್ಪಿದರೆ ಪಕ್ಷದ ವತಿಯಿಂದ ಉಗ್ರವಾದ ಹೋರಾಟಗಳನ್ನು ಹಮ್ಮಿಕೊಳ್ಳಬೇಕಾಗುತ್ತದೆ” ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...