ಚುನಾವಣಾ ನಿರಂಕುಶ ಪ್ರಭುತ್ವದತ್ತ ಭಾರತ ಜಾರುತ್ತಿದೆ: ಮಾಧವ ದೇಶಪಾಂಡೆ

Date:

ನಮ್ಮದು ಬೂದು ಬಣ್ಣದ ಚುನಾಯಿತ ಪ್ರಜಾಪ್ರಭುತ್ವದ ಮಾದರಿಯಾಗಿತ್ತು. ಅದೀಗ ಚುನಾಯಿತ ಸರ್ವಾಧಿಕಾರಕ್ಕೆ, ಅಂದರೆ ಗ್ರೇ ಎಲೆಕ್ಟೋರಲ್ ಆಟೋಕ್ರಸಿಗೆ ಹೊರಳಿದೆ. ಕಳೆದ 4 ತಿಂಗಳಿಂದ ಭಾರತ ಎಲೆಕ್ಟೋರಲ್ ಆಟೋಕ್ರಸಿಯಲ್ಲಿದೆ ಎಂಬುದು ಖಚಿತವಾಗಿದೆ. ಇಂತಹ ವರ್ಗೀಕರಣದ ವ್ಯಾಪ್ತಿಯೊಳಗೆ ರಷ್ಯಾ ದೇಶವಿರುವುದನ್ನು ಗಮನಿಸಬಹುದು ಎಂದು ಒಬಾಮಾ ಆಡಳಿತ ಸಲಹೆಗಾರ ಹಾಗೂ ತಾಂತ್ರಿಕ ಸುರಕ್ಷಣಾ ತಜ್ಞ ಮಾಧವ ದೇಶಪಾಂಡೆ ಆತಂಕ ವ್ಯಕ್ತಪಡಿಸಿದರು.

- Advertisement -

ಬೆಂಗಳೂರಿನ ಗಾಂಧಿ ಭವನದಲ್ಲಿ ಸೋಮವಾರ ʼಎದ್ದೇಳು ಕರ್ನಾಟಕʼ ಆಯೋಜಿಸಿದ್ದ, ಚುನಾವಣಾ ಆಯೋಗ ದೇಶವ್ಯಾಪಿ ಮಾಡಲು ಹೊರಟಿರುವ SIR ಪ್ರಕ್ರಿಯೆಯನ್ನು ವಿರೋಧಿಸಿ ನಡೆಯುತ್ತಿರುವ ಮಂಥನಾ ಸಮಾವೇಶದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಪ್ರಜಾಪ್ರಭುತ್ವದ ನಾಲ್ಕು ಪ್ರಮುಖ ಸ್ತಂಭಗಳು ಕುಸಿಯುತ್ತಿರುವುದು ರಾಜಕೀಯ ಸಮಸ್ಯೆ ಮಾತ್ರವಲ್ಲದೆ, ನಾಗರಿಕ ಹಕ್ಕುಗಳನ್ನು ಕಳ್ಳತನ ಮಾಡುವ ಪ್ರಕ್ರಿಯೆಯಾಗಿಯೂ ರೂಪುಗೊಂಡಿದೆ. ಪ್ರಜಾಪ್ರಭುತ್ವದ ಮೂಲ ಉದ್ದೇಶಗಳು ಹೇಗೆ ನಾಶವಾಗುತ್ತಿವೆ, ನಮ್ಮದೇ ನಾಗರಿಕತ್ವ ನಮ್ಮವರ ಕೈಯಲ್ಲಿಯೇ ಹೇಗೆ ಕಸಿಯಲ್ಪಡುತ್ತಿದೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಸಂಪೂರ್ಣ ಡಿಜಿಟಲ್ ಆಗಿರುವ ಚುನಾವಣಾ ವ್ಯವಸ್ಥೆಗೆ ಯಾವುದೇ ಎಲೆಕ್ಟ್ರಾನಿಕ್ ಲಾಕಿಂಕ್‌ ಸಿಸ್ಟಮ್ ಇಲ್ಲದಿರುವುದು, ಡೇಟಾ ತಿದ್ದುಪಡಿಯ ಅಪಾಯವನ್ನು ಸ್ಪಷ್ಟವಾಗಿ ಹೇಳುತ್ತದೆ. Evm ಯಂತ್ರಗಳ ವಿನಿಮಯವೂ ಇಲ್ಲಿ ಸಾಧ್ಯ. ಹೀಗಿರುವಾಗ ಯಾವುದರ ಆಧಾರದ ಮೇಲೆ ಇಡೀ ಚುನಾವಣಾ ವ್ಯವಸ್ಥೆಯನ್ನು ಡಿಜಿಟಲೀಕರಣ ಮಾಡಲಾಗಿದೆ ಎನ್ನುವುದನ್ನು ಗಂಭೀರವಾಗಿ ಚಿಂತಿಸಬೇಕಿದೆ” ಎಂದರು.

ಕಾರ್ಯಕ್ರಮದಲ್ಲಿ‌ ಸಾಮಾಜಿಕ ಚಿಂತಕ ಹಾಗೂ ರಾಜಕೀಯ ವಿಶ್ಲೇಷಕ ಶಿವಸುಂದರ್, ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರೈಟ್ಸ್‌ನ ಮುಖ್ಯಸ್ಥ ಹರೀಶ್‌ ನರಸಪ್ಪ, ಜಾಮಾಅತೆ ಇಸ್ಲಾಮಿ ಹಿಂದ್‌ನ ರಾಜ್ಯ ಕಾರ್ಯದರ್ಶಿ ಮೊಹಮ್ಮದ್‌ ಕುನ್ನಿ, ಎದ್ದೇಳು ಕರ್ನಾಟಕದ ಮುಖ್ಯಸ್ಥೆ ತಾರಾ ರಾವ್‌, ನಮ್ಮ ಓಟು, ನಮ್ಮ ಹಕ್ಕು ಅಭಿಯಾನದ ಮಾನವಿ, ಸಾಮಾಜಿಕ ಹೋರಾಟಗಾರ ನೂರ್‌ ಶ್ರೀಧರ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...