ಇಂಡಿಯಾ ಮೆರಿಟೈಮ್ ವೀಕ್‌ 2025; ₹4,500 ಕೋಟಿ ಮೌಲ್ಯದ ಒಪ್ಪಂದಕ್ಕೆ ಸಹಿ

Date:

ಮುಂಬೈನಲ್ಲಿ ನಡೆದ ಇಂಡಿಯಾ ಮೆರಿಟೈಮ್ ವೀಕ್ (India Maritime Week – IMW) 2025 ಕಾರ್ಯಕ್ರಮದ ಅಂಗವಾಗಿ ನಡೆದ ಕರ್ನಾಟಕ ರಾಜ್ಯ ಅಧಿವೇಶನವು ಯಶಸ್ವಿಯಾಗಿ ಪೂರ್ಣಗೊಂಡಿದೆ. ʼExploring PPP Synergies for a Sustainable Blue Economyʼ ಎಂಬ ವಿಷಯದಡಿ ನಡೆದ ಈ ಅಧಿವೇಶನದಲ್ಲಿ ಸುಮಾರು ₹4,500 ಕೋಟಿ ಮೌಲ್ಯದ ವಿವಿಧ ಮಹತ್ವದ ಒಪ್ಪಂದ ಪತ್ರಗಳಿಗೆ ಸಹಿ ಹಾಕಲಾಗಿದೆ.

- Advertisement -

ಕಾರ್ಯಕ್ರಮದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾಲಿಗೆ ಸಚಿವ ಮಂಕಾಳ ಎಸ್‌ ವೈದ್ಯ ಅವರು ಅಧ್ಯಕ್ಷತೆ ವಹಿಸಿದ್ದು, “ಕರ್ನಾಟಕವು ತನ್ನ ಸಮುದ್ರ ಸಂಪನ್ಮೂಲಗಳನ್ನು ಸ್ಥಿರ ಅಭಿವೃದ್ಧಿಯ ದಿಕ್ಕಿನಲ್ಲಿ ಬಳಸಿಕೊಳ್ಳುವ ದೃಷ್ಟಿಯಿಂದ ಬ್ಲೂ ಎಕಾನಮಿ ಕ್ಷೇತ್ರದಲ್ಲಿ ಮುಂದಾಳತ್ವ ತೋರಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ಕರ್ನಾಟಕ ಜಲಸಾರಿಗೆ ಮಂಡಳಿ ಸಹಿ ಮಾಡಿದ ಹಲವು ಪ್ರಮುಖ ಸಂಸ್ಥೆಗಳೊಂದಿಗಿನ ಒಪ್ಪಂದಗಳು ಈ ಕೆಳಗಿನಂತಿವೆ…

  • ಜೆಎಸ್‌ಡಬ್ಲ್ಯೂ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್: ಕೆನಿಯಲ್ಲಿ ಪಿಪಿಪಿ ಆಧಾರದ ಮೇಲೆ ನಿರ್ಮಿಸಲ್ಪಡುವ ಸರ್ವಋತು ಡೀಪ್ ವಾಟರ್ ಗ್ರೀನ್‌ಫೀಲ್ಡ್ ಬಂದರು ಅಭಿವೃದ್ಧಿಗೆ ಸಂಬಂಧಿಸಿದ ಕನ್ಸೆಶನ್ ಒಪ್ಪಂದ – ₹4,118 ಕೋಟಿ ಮೌಲ್ಯ.
  • ಕೊಂಕಣ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್ (KRCL): ಅಮದಳ್ಳಿ ರೈಲು ಸೈಡಿಂಗ್ ಅಭಿವೃದ್ಧಿಗೆ ಸಂಬಂಧಿಸಿದ ಒಪ್ಪಂದ – ₹45.88 ಕೋಟಿ ಮೌಲ್ಯ.
  • ಭಾರತ ಆಂತರಿಕ ಜಲಮಾರ್ಗ ಪ್ರಾಧಿಕಾರ (IWAI): ರಾಜ್ಯದ ರಾಷ್ಟ್ರೀಯ ಜಲಮಾರ್ಗಗಳ ಅಭಿವೃದ್ಧಿಗೆ ಸಂಬಂಧಿಸಿದ ಒಪ್ಪಂದ – ಅಂದಾಜು ₹300 ಕೋಟಿ ಮೌಲ್ಯ.
  • ನ್ಯಾಷನಲ್ ಇನ್‌ಲ್ಯಾಂಡ್ ನ್ಯಾವಿಗೇಶನ್ ಇನ್ಸ್ಟಿಟ್ಯೂಟ್ (NINI), ಪಾಟ್ನಾ: ಮಂಗಳೂರು ನಗರದಲ್ಲಿ ಇನ್‌ಲ್ಯಾಂಡ್ ವಾಟರ್ ಟ್ರಾನ್ಸ್‌ಪೋರ್ಟ್ ಮತ್ತು ನ್ಯಾವಿಗೇಶನ್‌ನಲ್ಲಿ ಶ್ರೇಷ್ಠತೆ ಕೇಂದ್ರ (COE-IWTN) ಸ್ಥಾಪನೆಗೆ ಒಪ್ಪಂದ – ಅಂದಾಜು ₹50 ಕೋಟಿ ಮೌಲ್ಯ.
  • ಕರ್ನಾಟಕ ಸರ್ಕಾರದ ಮೀನುಗಾರಿಕೆ ಇಲಾಖೆ: ಬಳ್ಳಾರಿ ಜಿಲ್ಲೆಯಲ್ಲಿ ತಂಪು ಸಂಗ್ರಹಣೆ, ಸಂಸ್ಕರಣಾ ಘಟಕಗಳು ಮತ್ತು ಪರೀಕ್ಷಾ ಪ್ರಯೋಗಾಲಯ ಸ್ಥಾಪನೆ ಸೇರಿದಂತೆ ವಿವಿಧ ಯೋಜನೆಗಳಿಗಾಗಿ ಒಪ್ಪಂದ – ಅಂದಾಜು ₹12 ಕೋಟಿ ಮೌಲ್ಯ.

ಕಾರ್ಯಕ್ರಮದ ವೇಳೆ ಕರ್ನಾಟಕ ರಾಜ್ಯ ಸಮುದ್ರ ಮತ್ತು ಜಲಮಾರ್ಗ ಮಾಸ್ಟರ್‌ ಪ್ಲ್ಯಾನ್‌ (KSMWMP) ಕುರಿತು ಚರ್ಚೆ ನಡೆಸಲಾಯಿತು. ಈ ಯೋಜನೆ ಒಟ್ಟು ₹23,000 ಕೋಟಿ ಮೌಲ್ಯದ 126 ಯೋಜನೆಗಳನ್ನು ಒಳಗೊಂಡಿದ್ದು, ರಾಜ್ಯದ ಸಮುದ್ರ ಮತ್ತು ಜಲಮಾರ್ಗ ಅಭಿವೃದ್ಧಿಗೆ ಸಮಗ್ರ ಮಾರ್ಗಚಿತ್ರ ನೀಡಲಿದೆ ಎನ್ನಲಾಗಿದೆ. ಈ ಪೈಕಿ ₹7,500 ಕೋಟಿಗೂ ಹೆಚ್ಚು ಮೌಲ್ಯದ 10 ಪ್ರಮುಖ ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP) ಯೋಜನೆಗಳು ಶೀಘ್ರದಲ್ಲೇ ಕಾರ್ಯಾರಂಭಕ್ಕೆ ಸಿದ್ಧವಾಗಿವೆ. ಇವುಗಳಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆ ಮತ್ತು ರಾಜ್ಯದ ಮೊದಲ ಸಮುದ್ರ ಸಂಗ್ರಹಾಲಯ (Maritime Museum) ಸ್ಥಾಪನೆಯು ಪ್ರಮುಖ ಆಕರ್ಷಣೆಯಾಗಿವೆ.

ಇದನ್ನೂ ಓದಿ: ಈ ದಿನ ಸಂಪಾದಕೀಯ | ಸಂಘಪರಿವಾರದ ಹುನ್ನಾರಗಳನ್ನು ಅರಿತ ದಲಿತರು

ಅಧಿವೇಶನದಲ್ಲಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಮೂಲಸೌಕರ್ಯ ಅಭಿವೃದ್ಧಿ ಕಾರ್ಯದರ್ಶಿ ಡಾ. ಮಂಜುಳ ಎನ್‌ (ಐಎಸ್)‌, ನ್ಯೂ ಮಂಗಳೂರು ಪೋರ್ಟ್‌ ಅಥಾರಿಟಿ ಅಧ್ಯಕ್ಷ ಡಾ. ಎ ವಿ ರಮಣ, ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಾಲಚಂದ್ರ ಹೆಚ್‌ ಸಿ, ಮಂಡಳಿಯ ನಿರ್ದೇಶಕ ದಿವಾಕರ್‌ ನಾಯಕ್‌ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಕಡಿತಗಳ ಆರೋಪದ ನಡುವೆಯೇ, ಕರ್ನಾಟಕದ ಮತದಾರರ ಪಟ್ಟಿಯ SSR ಘೋಷಿಸಿದ ECI

ಇತ್ತೀಚೆಗಷ್ಟೇ ಮುಕ್ತಾಯಗೊಂಡ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ...

ತಮ್ಮದೇ ಸಚಿವರ ಫೋನ್ ಕದ್ದಾಲಿಸಿ, ಬಳಿಕ ನಮ್ಮನ್ನು ಗುರಿಯಾಗಿಸಿದರು: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ!

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಕಾಂಗ್ರೆಸ್ ನಾಯಕರ ಫೋನ್‌ಗಳನ್ನು ಕದ್ದಾಲಿಸುತ್ತಿದೆ ಎಂದು...

ನಿಗಮ-ಮಂಡಳಿ ನೇಮಕದಲ್ಲಿ RSS ಕಾರ್ಯಕರ್ತನಿಗೆ ಮಣೆ; ಕಾಂಗ್ರೆಸ್‌ನೊಳಗೇ ಭಾರೀ ಆಕ್ರೋಶ!

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮಂಡ್ಯ ಜಿಲ್ಲೆಯ 14 ಮಂದಿಗೆ...

ಗಾಂಧೀಜಿ ತತ್ವಗಳ ಪ್ರಸ್ತುತತೆ: ಸಮಾನತೆಯ ಸಮಾಜಕ್ಕೆ ಶ್ರಮದ ಘನತೆಯೇ ಅಡಿಪಾಯ

ಸರ್ವಜನರ ಹಿತ, ಎಲ್ಲ ಕೆಲಸಗಳಿಗೂ ಸಮಾನ ಗೌರವ ಮತ್ತು ಶಾರೀರಿಕ ಶ್ರಮದ...