ವಿಶ್ವ ಶ್ರೇಷ್ಠ ಸರೋದ್ ವಾದಕ ಪಂಡಿತ್ ರಾಜೀವ್‌ ತಾರಾನಾಥ್ ನಿಧನ

Date:

ಸಂಗೀತ ಲೋಕದ ವಿಶ್ವ ಶ್ರೇಷ್ಠ ಸರೋದ್ ವಾದಕ ಪದ್ಮಶ್ರೀ ಪುರಸ್ಕೃತ ಪಂಡಿತ್ ರಾಜೀವ್ ತಾರಾನಾಥ್ ಇಂದು ನಿಧನರಾಗಿದ್ದಾರೆ. ಶ್ರೀಯುತರಿಗೆ 91 ವರ್ಷ ವಯಸ್ಸಾಗಿತ್ತು.

ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ತೀವ್ರ ಅಸ್ವಸ್ಥರಾಗಿ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕುವೆಂ‍ಪು ನಗರದ ಪಂಚಮಂತ್ರ ರಸ್ತೆಯಲ್ಲಿರುವ ನಿವಾಸದಲ್ಲಿ, ತಿಂಗಳ ಹಿಂದೆ ಕುಸಿದು ಬಿದ್ದು ಅವರ ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಳ್ಳುತ್ತಿದ್ದರು.
ಇಂದು ರಾತ್ರಿ 7.05ರ ವೇಳೆಗೆ ಮೃತಪಟ್ಟಿದ್ದಾರೆ.

ರಾಜೀವ್ ತಾರಾನಾಥ್ ಅವರು ಬೆಂಗಳೂರಿನಲ್ಲಿ 17 ಅಕ್ಟೋಬರ್ 1932 ರಂದು ಜನಿಸಿದರು. ಅವರು ತಮ್ಮ ತಂದೆ ಪಂಡಿತ್ ತಾರಾನಾಥ್ ಅವರಿಂದ ಸಂಗೀತದಲ್ಲಿ ಆರಂಭಿಕ ತರಬೇತಿಯನ್ನು ಪಡೆದರು. ಅವರು ಒಂಬತ್ತು ವರ್ಷದವರಾಗಿದ್ದಾಗ ಮೊದಲ ಸಾರ್ವಜನಿಕ ಗಾಯನ ಪ್ರದರ್ಶನವನ್ನು ನೀಡಿದರು. ರಾಜೀವ್ ಅವರು ತಮ್ಮ ಇಪ್ಪತ್ತನೇ ವಯಸ್ಸಿನಲ್ಲಿಯೇ ಆಕಾಶವಾಣಿಗೆ ಹಾಡುತ್ತಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಸಂಪುಟದಲ್ಲಿ ಬಲಾಢ್ಯರು ಮುಂದಕ್ಕೆ, ಹಿಂದುಳಿದವರು ಹಿಂದಕ್ಕೆ

ರಾಜೀವ್ ತಾರಾನಾಥ್ ಸಾಹಿತ್ಯದಲ್ಲಿ ಪಿಎಚ್‌ಡಿ ಪಡೆದು ತಿರುಚಿರಾಪಳ್ಳಿಯ ಪ್ರಾದೇಶಿಕ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇಂಗ್ಲಿಷ್ ಸಾಹಿತ್ಯದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು. ಸಂಗೀತದ ಮೇಲಿನ ಪ್ರೀತಿಯಿಂದಾಗಿ ತಮ್ಮ ವೃತ್ತಿಯನ್ನು  ತ್ಯಜಿಸಿ ಕಲ್ಕತ್ತಾಗೆ ಹೋಗಿ ಅಲ್ಲಿ ಅಲಿ ಅಕ್ಬರ್ ಖಾನ್ ಅವರ ಮಾರ್ಗದರ್ಶನದಲ್ಲಿ ಸಂಗೀತ ತರಬೇತಿ ಪಡೆದರು.

ಪ್ರಶಸ್ತಿಗಳು

ರಾಜೀವ್ ತಾರಾನಾಥ್ ಅವರ ಸಾಧನೆಯನ್ನು ಗುರುತಿಸಿ ಸಂಗೀತ ರತ್ನ ಮೈಸೂರು ಟಿ. ಚೌಡಯ್ಯ ಸ್ಮಾರಕ ಪ್ರಶಸ್ತಿ 1998 (ಕರ್ನಾಟಕ ಸರಕಾರ),

ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿ-1993,

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ-1996,
ಕೆಂಪೇಗೌಡ ಪ್ರಶಸ್ತಿ- 2006,

ಗಾಯನ ಸಮಾಜದಿಂದ ಸಂಗೀತ ಕಲಾರತ್ನ
ಜ್ಯೋತಿ ಸುಬ್ರಮಣ್ಯ ಪ್ರಶಸ್ತಿ,

ಭ್ರಮರಾಂಬಾ ಎನ್ ನಾಗರಾಜ್ ಬಂಗಾರದ ಪದಕ,

ವಿ. ಟಿ. ಶ್ರೀನಿವಾಸನ್ ಸ್ಮಾರಕ ಪ್ರಶಸ್ತಿ,

ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ‘ನಾಡೋಜ’ ಪ್ರಶಸ್ತಿ

‘ಪದ್ಮಶ್ರೀ’ ಪ್ರಶಸ್ತಿ

ರಾಜೀವ್ ತಾರಾನಾಥ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮೈಸೂರಿನ ಕುವೆಂಪುನಗರದ ಜ್ಞಾನ ಗಂಗಾ ಶಾಲೆ ಹತ್ತಿರದ ಅವರ ಮನೆಯ ಎದುರು ಬುಧವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 12ರಿಂದ 2 ಗಂಟೆಯೊಳಗೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಅಂತ್ಯಕ್ರಿಯೆ  ನಡೆಯಲಿದೆ’ ಎಂದು ರಾಜೀವ್ ತಾರಾನಾಥ್ ಅವರ ಆಪ್ತ, ಲೇಖಕ ಟಿ. ಎಸ್. ವೇಣುಗೋಪಾಲ್ ತಿಳಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೈಗಾರಿಕೆಗಳಿಗೆ ಉತ್ತೇಜನ ಎಲ್ಲ ರಾಜ್ಯಗಳಿಗೂ ಸಮಾನವಾಗಿರಲಿ:‌ ಎಚ್‌ಡಿಕೆ ಮಾತಿಗೆ ಎಂ ಬಿ ಪಾಟೀಲ್ ಸಹಮತ

ಗುಜರಾತಿನ ಸಾನಂದ್‌ನಲ್ಲಿ ಸೆಮಿಕಂಡಕ್ಟರ್ ಉತ್ಪಾದನಾ ಘಟಕವನ್ನು ಸ್ಥಾಪಿಸುತ್ತಿರುವ ಅಮೆರಿಕ ಮೂಲದ ಮೈಕ್ರಾನ್...

ಕಾಂಗ್ರೆಸ್‌ ಕಚೇರಿಯಲ್ಲಿ ಅಕಾಡೆಮಿ ಅಧ್ಯಕ್ಷರ ಜೊತೆ ಡಿಕೆ ಶಿವಕುಮಾರ್ ಸಭೆ: ಸಾಂಸ್ಕೃತಿಕ ವಲಯದಿಂದ ತೀವ್ರ ವಿರೋಧ

ರಾಜ್ಯ ಸರ್ಕಾರದ ಅಡಿಯಲ್ಲಿರುವ ವಿವಿಧ ಸಾಂಸ್ಕೃತಿಕ ಅಕಾಡೆಮಿಗಳು ಹಾಗೂ ನಿಗಮ ಮಂಡಳಿಗಳ ಅಧ್ಯಕ್ಷರ...

ಕುಮಾರಸ್ವಾಮಿ, ಬೊಮ್ಮಾಯಿ ಶಾಸಕ ಸ್ಥಾನಕ್ಕೆ ರಾಜೀನಾಮೆ

ಮಾಜಿ ಮುಖ್ಯಮಂತ್ರಿಗಳಾದ ಕೇಂದ್ರ ಸಚಿವ ಹೆಚ್ ​​ಡಿ ಕುಮಾರಸ್ವಾಮಿ ಮತ್ತು ಸಂಸದ...