ಜಾತಿ ನಿಂದನೆ ಆರೋಪ: ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ವಿರುದ್ಧ ದೂರು ದಾಖಲು

Date:

Advertisements

ಜಾತಿ ನಿಂದನೆ, ಬೆದರಿಕೆ ಹಾಕಿರುವ ಆರೋಪಕ್ಕೆ ಸಂಬಂಧಿಸಿದಂತೆ ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ ಮಾಜಿ ನಿರ್ದೇಶಕ ಬಲರಾಮ್ ಮತ್ತಿತರ 18 ಜನರ ವಿರುದ್ಧ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಸ್‌ಸಿಎಸ್‌ಪಿ / ಟಿಎಸ್‌ಪಿ ಅನುದಾನ ಬಳಕೆಯಾಗುತ್ತಿಲ್ಲವೇಕೆ?

Advertisements

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದನ್ ರಂಗರಾಜನ್, ರಂಗರಾಜನ್ ಶ್ರೀಧರ್ ವಾರಿಯರ್, ಸಂಧ್ಯಾ ವಿಶ್ವೇಶ್ವರಯ್ಯ, ಹರಿ ಕೆವಿಎಸ್, ದಾಸಪ್ಪ, ಹೇಮಲತಾ ಮಹಿತಿ ಚಟ್ಟೋಪಾಧ್ಯಾಯ ಕೆ. ಪ್ರದೀಪ್ ಡಿ.ಸಾವರ್ ಮತ್ತು ಮನೋಹರನ್ ಮತ್ತಿತರರನ್ನು ಆರೋಪಿಗಳಾಗಿ ಹೆಸರಿಸಲಾಗಿದೆ.

ಅಧ್ಯಾಪಕರಾಗಿದ್ದ ಬೋವಿ ಸಮುದಾಯಕ್ಕೆ ಸೇರಿದ ದುರ್ಗಪ್ಪ ಅವರು ದೂರು ನೀಡಿದ್ದು, “2014 ರಲ್ಲಿ ತನ್ನನ್ನು ಹನಿ ಟ್ರ್ಯಾಪ್ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಿ ವಜಾ ಮಾಡಲಾಗಿದೆ.ಇನ್ನೂ, ಕ್ರಿಸ್ ಗೋಪಾಲಕೃಷ್ಣನ್ ಸೇರಿ 18 ಮಂದಿ 2008 ರಿಂದ 2025ರ ವರೆಗೆ ಜಾತಿನಿಂದನೆ ದೌರ್ಜನ್ಯ ನಡೆಸುತ್ತಾ ಬಂದಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X