ನಾವು ಹಿಂದುಳಿದವರಲ್ಲ; ಜಾತಿವಾರು ಸಮೀಕ್ಷೆಯಲ್ಲಿ ಭಾಗವಹಿಸಲು ನಾರಾಯಣ ಮೂರ್ತಿ-ಸುಧಾ ಮೂರ್ತಿ ನಿರಾಕರಣೆ

Date:

ಕರ್ನಾಟಕ ಸರ್ಕಾರದ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿವಾರು ಗಣತಿ)ಯಲ್ಲಿ ಮಾಹಿತಿ ಹಂಚಿಕೊಳ್ಳಲು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಅವರ ಪತ್ನಿ, ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ನಿರಾಕರಿಸಿದ್ದಾರೆ. ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ವಯಂ ಘೋಷಣಾ ಪತ್ರಕ್ಕೆ ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ.

- Advertisement -

ಜಯನಗರದಲ್ಲಿರುವ ಅವರ ಮನೆಗೆ ಕಳೆದ ವಾರ ಗಣತಿದಾರರು ಭೇಟಿ ನೀಡಿದ್ದರು. ಸರ್ಕಾರಿ ಸಮೀಕ್ಷಾ ಫಾರಂನಲ್ಲಿ ಅವರು ಬರೆದಿರುವಂತೆ, ‘ನಾವು ಮತ್ತು ನಮ್ಮ ಕುಟುಂಬ ಹಿಂದುಳಿದ ವರ್ಗಕ್ಕೆ ಸೇರಿದವರಲ್ಲ. ಹೀಗಾಗಿ ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದು ನಮಗೆ ಸಂಬಂಧವಿಲ್ಲದ್ದು ಮತ್ತು ಸರ್ಕಾರಕ್ಕೂ ಯಾವುದೇ ಉಪಯೋಗವಿಲ್ಲ’ ಎಂದು ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನೊಳಗೊಂದು ಆರೆಸ್ಸೆಸ್ ಆನೆ ಅವಿತಿರುವ ದುರಂತ!

ಸುಧಾ ಮೂರ್ತಿ, ಇನ್ಫೋಸಿಸ್ ಫೌಂಡೇಶನ್‌ನ ಅಧ್ಯಕ್ಷೆಯಾಗಿ ಮತ್ತು ರಾಜ್ಯಸಭಾ ಸದಸ್ಯೆಯಾಗಿ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದಾರೆ. ನಾರಾಯಣ ಮೂರ್ತಿ ಇನ್ಫೋಸಿಸ್ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದಾರೆ. ಅವರ ನಿರಾಕರಣೆಯು ಸಮೀಕ್ಷೆಯ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದೆ, ವಿಶೇಷವಾಗಿ ಸಮೀಕ್ಷೆಯು ಹಿಂದುಳಿದ ವರ್ಗಗಳನ್ನು ಗುರುತಿಸಿ ಸರ್ಕಾರಿ ಯೋಜನೆಗಳನ್ನು ಸುಧಾರಿಸುವ ಉದ್ದೇಶ ಹೊಂದಿದೆ.

ಬೆಂಗಳೂರು ನಗರದಲ್ಲಿ ಸದ್ಯ ಶೇ.81ರಷ್ಟು ಮನೆಗಳ ಸಮೀಕ್ಷೆ ಮುಗಿದಿದ್ದು, ಎಷ್ಟು ಮಂದಿ ಭಾಗವಹಿಸಲು ನಿರಾಕರಿಸಿದ್ದಾರೆ ಎಂಬುದರ ಬಗ್ಗೆ ಖಚಿತ ಮಾಹಿತಿ ಲಭ್ಯವಿಲ್ಲ. ಮಾಧ್ಯಮಗಳ ವರದಿಯಂತೆ, ಪಾಲ್ಗೊಂಡವರು ಕೇವಲ ಶೇ.25ರಷ್ಟು ಪ್ರಶ್ನೆಗಳಿಗೆ ಮಾತ್ರ ಉತ್ತರ ನೀಡಿದ್ದಾರೆ ಎನ್ನಲಾಗಿದೆ.

Narayanamurty caste survey
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...