ಮೋದಿ ಸರ್ಕಾರದಿಂದ ಅನುದಾನ ಅನ್ಯಾಯ: ಹಕ್ಕಿಗಾಗಿ ಮತ್ತೆ ಸುಪ್ರೀಂ ಅಂಗಳಕ್ಕೆ ಕರ್ನಾಟಕ!

Date:

ರಾಜ್ಯದ ಆರ್ಥಿಕ ಹಕ್ಕುಗಳನ್ನು ಕೇಂದ್ರ ಸರ್ಕಾರವು ಕಸಿದುಕೊಳ್ಳುವ ವಿಚಾರದಲ್ಲಿ ಈ ಹಿಂದೆ ಹಲವು ಬಾರಿ ಕೇಂದ್ರ, ರಾಜ್ಯ ಸರ್ಕಾರಗಳ ನಡುವೆ ವಾಕ್ಸಮರ ನಡೆದಿದೆ. ಅದರಲ್ಲೂ ಮುಖ್ಯವಾಗಿ ದಕ್ಷಿಣ ಭಾರತದ ರಾಜ್ಯಗಳ, ಬಿಜೆಪಿಯೇತರ ಅಧಿಕಾರ ಹೊಂದಿರುವ ರಾಜ್ಯಗಳಿಗೆ ಅನುದಾನದ ವಿಷಯದಲ್ಲಿ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂಬ ಆರೋಪಗಳು ಆಗಾಗೇ ಕೇಳಿಬರುತ್ತಿದೆ. ಮೋದಿ ಸರ್ಕಾರದ ಈ ಅನುದಾನ ಅನ್ಯಾಯದ ವಿರುದ್ಧವಾಗಿ, ತಮ್ಮ ಹಕ್ಕಿಗಾಗಿ ಇದೀಗ ಸುಪ್ರೀಂ ಕೋರ್ಟ್‌ನ ಅಂಗಳಕ್ಕೆ ಕರ್ನಾಟಕ ಸರ್ಕಾರ ಇಳಿಯಲು ಮುಂದಾಗಿದೆ.

- Advertisement -

15ನೇ ಹಣಕಾಸು ಆಯೋಗದ ಶಿಫಾರಸಿನ ಅನ್ವಯ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಬಿಡುಗಡೆಯಾಗಬೇಕಿದ್ದ ₹2,186.20 ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ಕ್ಷುಲ್ಲಕ ತಾಂತ್ರಿಕ ಕಾರಣಗಳನ್ನು ಮುಂದಿಟ್ಟು ತಡೆಹಿಡಿದಿದೆ. ಈ ವಿಚಾರವಾಗಿ ಕಾಂಗ್ರೆಸ್ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ (ಎಸ್‌ಎಲ್‌ಪಿ) ಸಲ್ಲಿಸಲು ಮುಂದಾಗಿದೆ. ಈ ಹಿಂದೆ 2024ರಲ್ಲೂ ಬರ ಪರಿಹಾರ ವಿಳಂಬವಾದಾಗ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋದ ನಂತರವೇ ಕೇಂದ್ರದಿಂದ ₹3,498.82 ಕೋಟಿ ಬಿಡುಗಡೆಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈಲ್ವೆ ಪ್ಲಾಟ್‌ಫಾರ್ಮ್‌ನಿಂದ ಜಾಗತಿಕ ಪಯಣ: ಸಣ್ಣ ಊರಿನ ಕನಸುಗಳಿಗೆ...

"ಧೋನಿ ಬರುವ ಮುನ್ನ ರಾಂಚಿಯ ಪೋಷಕರು ಮಕ್ಕಳ ವೈದ್ಯರು, ಎಂಜಿನಿಯರ್ ಆಗಬೇಕೆಂದು ಬಯಸುತ್ತಿದ್ದರು. ಅವರು ಬಂದ ಮೇಲೆ ಎಲ್ಲರೂ ಧೋನಿಯಾಗಲು, ವಿಕೆಟ್‌ಕೀಪರ್ ಆಗಲು ಬಯಸಿದರು" ಎನ್ನುತ್ತಾರೆ ಬಾಲ್ಯದ ಕೋಚ್ ಕೇಶವ್ ಬ್ಯಾನರ್ಜಿ. ಸೌರಭ್...

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಇದನ್ನೂ ಓದಿ: ಮೋದಿ ಅವಧಿಯಲ್ಲಿ ಪಾತಾಳಕ್ಕೆ ಕುಸಿದಿದೆ ಭಾರತದ ಶಿಕ್ಷಣ ಬಜೆಟ್ ‘ಕಾಕ್ರೋಚ್ ಆಕ್ರೋಶ’ದ ಹಿಂದಿದೆ ಶಿಕ್ಷಣದ ಅಧಃಪತನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಅವರು ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರೊಂದಿಗೆ ಸಭೆ ನಡೆಸಿ, ಕೇಂದ್ರದ ವಿರುದ್ಧ ಕಾನೂನು ಸಮರ ಸಾರುವ ನಿರ್ಧಾರ ಪ್ರಕಟಿಸಿದ್ದಾರೆ.

2025-26ನೇ ಸಾಲಿನಲ್ಲಿ ರಾಜ್ಯದ 5,927 ಗ್ರಾಮ ಪಂಚಾಯಿತಿಗಳಿಗೆ 15ನೇ ಹಣಕಾಸು ಆಯೋಗದಡಿ ₹2,186.20 ಕೋಟಿ ಅನುದಾನ ಬಿಡುಗಡೆಯಾಗಬೇಕಿದೆ. ಆದರೆ, 2024-25ನೇ ಸಾಲಿನಲ್ಲಿ ಕೇಂದ್ರ ಬಿಡುಗಡೆ ಮಾಡಿದ್ದ ₹2,133.25 ಕೋಟಿ ಪೈಕಿ ‘ಇ-ಗ್ರಾಮ ಸ್ವರಾಜ್ ಪೋರ್ಟಲ್’ನಲ್ಲಿ ₹1,907 ಕೋಟಿಗಳ ಸ್ವೀಕೃತಿ ಮಾತ್ರ ದಾಖಲಾಗಿದೆ ಎಂದು ಕೇಂದ್ರ ಸರ್ಕಾರ ಆಕ್ಷೇಪ ಎತ್ತಿದೆ. ಉಳಿದ ₹225 ಕೋಟಿ ಹಣವು ಭೌತಿಕವಾಗಿ ಗ್ರಾಮ ಪಂಚಾಯಿತಿಗಳನ್ನು ತಲುಪಿದ್ದರೂ, ಕೇವಲ ತಾಂತ್ರಿಕ ದೋಷದಿಂದ ಪೋರ್ಟಲ್‌ನಲ್ಲಿ ಪ್ರತಿಬಿಂಬಿತವಾಗಿಲ್ಲ ಎಂಬ ನೆಪವೊಡ್ಡಿ ಕೇಂದ್ರವು ಪ್ರಸಕ್ತ ಸಾಲಿನ ಸಂಪೂರ್ಣ ಅನುದಾನವನ್ನು ತಡೆಹಿಡಿದಿದೆ ಎಂದು ಸಚಿವರು ವಿವರಿಸಿದ್ದಾರೆ.

ಕೇಂದ್ರ ಸರ್ಕಾರವು ಕೇವಲ ಕರ್ನಾಟಕ ಮತ್ತು ಬಿಜೆಪಿಯೇತರ ಸರ್ಕಾರಗಳಿರುವ ಕೆಲವೇ ರಾಜ್ಯಗಳಿಗೆ ಮಾತ್ರ ಕಠಿಣ ಷರತ್ತುಗಳನ್ನು ವಿಧಿಸುತ್ತಿದೆ ಎಂಬ ಗಂಭೀರ ಆರೋಪ ವರ್ಷಗಳಿಂದ ಕೇಳಿಬರುತ್ತಿದೆ, ಅದಕ್ಕೆ ಪುಷ್ಠಿ ನೀಡುವ ಘಟನೆಗಳೂ ನಡೆದಿವೆ. ಸಚಿವ ಈಶ್ವರ ಖಂಡ್ರೆ ಅವರು ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಪೋರ್ಟಲ್‌ನಲ್ಲಿ ಭಾರಿ ವ್ಯತ್ಯಾಸವಿದ್ದರೂ ಇತರ ರಾಜ್ಯಗಳಿಗೆ ಕೇಂದ್ರ ಸರ್ಕಾರ ಪೂರ್ಣ ಅನುದಾನ ನೀಡಿದೆ. ಉತ್ತರಾಖಂಡ, ಗುಜರಾತ್, ಅಸ್ಸಾಂ, ಬಿಹಾರಕ್ಕೆ ಪೂರ್ತಿ ಅನುದಾನ ಬಿಡುಗಡೆ ಮಾಡಲಾಗಿದೆ. ಆದರೆ ಕರ್ನಾಟಕಕ್ಕೆ ಮಾತ್ರ 2,186.20 ಕೋಟಿ ತಡೆ ಹಿಡಿಯಲಾಗಿದೆ.

ಬರದ ನಡುವೆ ಬರೆ: ಬರ ಪರಿಹಾರದಲ್ಲೂ ವಿಳಂಬ ಧೋರಣೆ

ಒಂದೆಡೆ ಪಂಚಾಯಿತಿ ಅನುದಾನ ತಡೆಹಿಡಿಯಲಾಗಿದ್ದರೆ, ಮತ್ತೊಂದೆಡೆ ರಾಜ್ಯದಲ್ಲಿ ಎಲ್ ನಿನೋ ಪ್ರಭಾವದಿಂದ ತೀವ್ರ ಬರಗಾಲ ಆವರಿಸಿದೆ. ರಾಜ್ಯದ 240 ತಾಲೂಕುಗಳ ಪೈಕಿ 226 ತಾಲೂಕುಗಳು ಬರಪೀಡಿತವಾಗಿದ್ದು, ಸುಮಾರು 58 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ₹62,000 ಕೋಟಿ ಮೌಲ್ಯದ ಬೆಳೆ ಹಾನಿಯಾಗಿದೆ. ಈ ಸಂಬಂಧ ಎನ್‌ಡಿಆರ್‌ಎಫ್ ಮಾನದಂಡದಡಿ ₹22,400 ಕೋಟಿ ಪರಿಹಾರ ಕೋರಿ ರಾಜ್ಯ ಸರ್ಕಾರ ಈಗಾಗಲೇ ಮೂರು ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಉಪಮುಖ್ಯಮಂತ್ರಿ, ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸ್ಟೆಲ್‌ನಿಂದ ಪರಾರಿ ಪ್ರಯತ್ನ: ವಿದ್ಯುತ್ ತಂತಿ ತಗುಲಿ 11ರ ಬಾಲಕಿ ದುರ್ಮರಣ

ಸರ್ಕಾರಿ ಶಾಲಾ ಆವರಣದಲ್ಲಿರುವ ಬಾಲಕಿಯರ ಹಾಸ್ಟೆಲ್‌ನಿಂದ ವಿದ್ಯಾರ್ಥಿನಿಯರು ತಪ್ಪಿಸಿಕೊಂಡು ಹೊರಗೆ ಹೋಗಲು...

‘ರೀಲ್ಸ್ ಮಾಡುವವರಿಗೆ ಪತ್ರಕರ್ತರ ರಕ್ಷಣೆ ಅನ್ವಯಿಸದು’: ಸುಪ್ರೀಂ ಕೋರ್ಟ್‌ಗೆ ದೆಹಲಿ ಪೊಲೀಸ್ ಅಫಿಡವಿಟ್‌!

 ಪ್ರತಿಭಟನೆಗಳನ್ನು ವರದಿ ಮಾಡಲು ಪತ್ರಕರ್ತರಿಗೆ ಯಾವುದೇ ಅಡ್ಡಿಯಾಗದಂತೆ ಸುಪ್ರೀಂ ಕೋರ್ಟ್ ನೀಡಿರುವ...

ಈ ದಿನ ಸಂಪಾದಕೀಯ | ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಲಿ

ಪ್ರತಿಯೊಂದು ಬೇಡಿಕೆಯನ್ನೂ ಹೋರಾಟದ ಮೂಲಕವೇ ಪಡೆಯಿರಿ ಎನ್ನುವ ಸರ್ಕಾರಗಳ ಧೋರಣೆಯು ಸರಿಯಲ್ಲ....