ಮೊಸರಿನ ಬೆಲೆ ಕಡಿಮೆ ಮಾಡಲು ಸೂಚನೆ: ಸಿಎಂ ಡಿ ಕೆ ಶಿವಕುಮಾರ್

Date:

“ಕೆಎಂಎಫ್ ವತಿಯಿಂದ ಅಭಿನಂದನೆ ಸಲ್ಲಿಸಲು ಬಂದಿದ್ದ ಪದಾಧಿಕಾರಿಗಳಿಗೆ ಮೊಸರಿನ ಬೆಲೆ ಕಡಿಮೆ ಮಾಡಲು ಸೂಚನೆ ನೀಡಿದ್ದೇನೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

- Advertisement -

ನ್ಯಾಷನಲ್ ಗ್ಯಾಲರಿ ಆಫ್ ಮಾರ್ಡನ್ ಆರ್ಟ್ಸ್ ಬಳಿ ಮಾಧ್ಯಮದವರಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ವಿವಿದ ಬಣ್ಣಗಳ ಹಾಲಿನ ದರದಲ್ಲಿನ ವ್ಯತ್ಯಾಸದ ಬಗ್ಗೆ ಕೇಳಿದಾಗ, “ಕೊಬ್ಬಿನಾಂಶ ಹೆಚ್ಚು ಇರುವ ಹಾಲಿನ ದರ ಹೆಚ್ಚಾಗಿದೆ. ಈ ಬಗ್ಗೆ ಅಧಿಕಾರಿಗಳು ಸಂಪೂರ್ಣವಾಗಿ ವಿವರಿಸಲಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

“ನೀರಿನ ಬಾಟಲಿ ಬೆಲೆ ಹೆಚ್ಚಾದರೆ ಒಬ್ಬರೂ ಮಾತನಾಡುವುದಿಲ್ಲ. ಏಕೆಂದರೆ ಕೇಂದ್ರ ಸರ್ಕಾರಕ್ಕೆ ಜಿಎಸ್ ಟಿ ಹೋಗುತ್ತದೆ. ಹಾಲಿನ ದರ ಹೆಚ್ಚಳ ಮಾಡಿದ್ದರಿಂದ 11 ಲಕ್ಷ ರೈತ ಕುಟುಂಬಗಳಿಗೆ ನೆರವಾಗಲಿದೆ” ಎಂದರು.

Advertisements

“ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಳದಿಂದಾಗಿ ಪ್ರತಿದಿನ ಡೀಸೆಲ್ ಮೊತ್ತ ಭರಿಸಲು ಕಷ್ಟವಾಗಿದ್ದು, ವಿಶೇಷ ಅನುದಾನ ನೀಡಿ ಸಾರಿಗೆ ವ್ಯವಸ್ಥೆಯನ್ನು ಮುಂದುವರಿಸಲು ನಿರ್ಧರಿಸಲಾಗಿದೆ. ಬಸ್ ಸಂಚಾರ ಕಡಿಮೆ ಇರುವ ಕಡೆಗಳಲ್ಲಿ ಹೊಸ ಲೆಕ್ಕಾಚಾರದ ಮೂಲಕ ಬಸ್ ಓಡಿಸಲು ತೀರ್ಮಾನ ಮಾಡಲಾಗಿದೆ. ದರ ಏರಿಕೆ ಬಗ್ಗೆ ಸಾರಿಗೆ ಇಲಾಖೆಯೇ ನಿರ್ಧಾರ ಕೈಗೊಳ್ಳಲು ಸೂಚಿಸಲಾಗಿದೆ” ಎಂದರು.

ಗುತ್ತಿಗೆದಾರರ ಪದಾಧಿಕಾರಿಗಳು ಮೂರು ಬೇಡಿಕೆಗಳನ್ನು ಇಟ್ಟಿರುವ ಬಗ್ಗೆ ಕೇಳಿದಾಗ, “ಈ ಬಗ್ಗೆ ಗುತ್ತಿಗೆದಾರರೊಂದಿಗೆ ಚರ್ಚಿಸಿದ್ದು 38 ಸಾವಿರ ಕೋಟಿ ರೂ ಬಾಕಿ ಇದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲದಲ್ಲಿ ಕೊನೆ 6 ತಿಂಗಳ ಕೆಲಸಗಳು ಬಾಕಿ ಉಳಿದಿದೆ. ಈಗ ನಾವು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದೇವೆ. ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆಯ ಬಿಲ್ಲುಗಳು ಸರಿಮಾಡಲಾಗುತ್ತಿದೆ.

ಕಾವೇರಿ ನೀರಾವರಿ ಯೋಜನೆಯ ಕೆಲಸಗಳ ಬಾಕಿ ಬಿಲ್ಲುಗಳು ಬಹಳಷ್ಟಿವೆ. ಗುತ್ತಿಗೆದಾರರ ಸಂಘದ ಕೆಲವು ಬೇಡಿಕೆಗಳನ್ನು ಒಪ್ಪಿಕೊಳ್ಳಲಾಗಿದೆ” ಎಂದರು.

ಉಪಚುನಾವಣೆಯ ಸಿದ್ಧತೆಗಳ ಬಗ್ಗೆ ಕೇಳಿದಾಗ, “ಉಪಚುನಾವಣೆಗೆ ಸಿದ್ಧತೆ ಕೈಗೊಳ್ಳುವುದು ನನ್ನ ಕರ್ತವ್ಯ. ಹಿರಿಯೂರಿನಲ್ಲಿ ಸಾಕಷ್ಟು ಕಾಮಗಾರಿಗಳನ್ನು ಕೈಗೊಂಡಿದ್ದು, ಮಂಗಳವಾರ ಅಲ್ಲಿಗೆ ತೆರಳಿ, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು” ಎಂದರು.

11 ಲಕ್ಷ ರೈತ ಕುಟುಂಬಗಳು, 25 ಲಕ್ಷ ಹಾಲು ಮಾರಾಟಗಾರರಿಗೆ ಅನುಕೂಲ: ಡಿ‌ ಕೆ ಸುರೇಶ್
ಇದಕ್ಕೂ ಮುನ್ನ, ಸೋಮವಾರ ಮಧ್ಯಾಹ್ನ ಕರ್ನಾಟಕ ಹಾಲು ಮಹಾ ಮಂಡಲ ಮತ್ತು ಜಿಲ್ಲಾ ಹಾಲು ಒಕ್ಕೂಟಗಳ ಪದಾಧಿಕಾರಿಗಳು ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ಮಾತನಾಡಿ “ರಾಜ್ಯದಲ್ಲಿ ಪ್ರತಿನಿತ್ಯ 1 ಕೋಟಿ.15 ಲಕ್ಷ ಲೀ ಉತ್ಪಾದನೆ ಆಗುತ್ತಿದ್ದು. ಖಾಸಗಿ ಹಾಲಿನ ಖರೀದಿಯೂ ಉತ್ತರ ಕರ್ನಾಟಕದಲ್ಲಿ ಹೆಚ್ಚಿದೆ. ಹಾಲಿನ ದರ ಏರಿಕೆಯಿಂದ 11 ಲಕ್ಷ ರೈತ ಕುಟುಂಬಗಳು ಮಾತ್ರವಲ್ಲ 25 ಲಕ್ಷ ಹಾಲು ಮಾರಾಟಗಾರರಿಗೆ ಕೂಡ ಕುಟುಂಬಗಳಿಗೆ ನೆರವಾಗಲಿದೆ ಎಂದು ವಿವರಿಸಿದರು.

ತಮಿಳುನಾಡು ಸರ್ಕಾರ 12 ರೂ. ಹೆಚ್ಚಿಸಿದೆ. ನಂದಿನಿ ಉತ್ಪನ್ನಗಳು ತಮಿಳುನಾಡು, ಕೇರಳ, ಆಂಧ್ರ ಮಹಾರಾಷ್ಟ್ರ ರಾಜ್ಯಗಳಿಗೆ ಹೋಗುತ್ತಿದೆ. ಆ ರಾಜ್ಯಗಳಲ್ಲಿ ಹಾಲಿನ ಬೆಲೆ ನಮ್ಮ ರಾಜ್ಯಕ್ಕಿಂತಲೂ ಹೆಚ್ಚಿದೆ. ಹಾಲಿನ ಪುಡಿ ರಾಷ್ಟ್ರೀಯ ಮಾರುಕಟ್ಟೆಗೆ ತಲುಪುತ್ತದೆ. ಅಮೂಲ್ ಅವರು ಕೂಡ ದರ ಹೆಚ್ಚಿಸಿದ್ದಾರೆ” ಎಂದು ಮಾಹಿತಿ ನೀಡಿದರು.
“ಹಾಲಿನ ದರ ಏರಿಕೆಯಿಂದ ಬಹುಪಾಲು ರೈತರಿಗೆ ನೆರವಾಗಲಿದ್ದು, ಒಕ್ಕೂಟಕ್ಕೆ ಉಳಿಯುವುದು 60 ಪೈಸೆ ಮಾತ್ರ. 20 ಲಕ್ಷ ಲೀ. ಹಾಲು ಹೊರರಾಜ್ಯಗಳಿಗೆ ಹೋಗುತ್ತಿದ್ದು, ನಂದಿನಿ ಹಾಲಿನ ಗುಣಮಟ್ಟ ಅತ್ಯುತ್ತಮವಾಗಿದೆ ಎಂದು ಪ್ರಮಾಣ ಪತ್ರವೂ ದೊರೆತಿದೆ. 5 ಲಕ್ಷ ಯುವಕರಿಗೆ ಉದ್ಯೋಗ ಸೃಷ್ಟಿಯಾಗುವ ಅವಕಾಶವಿದೆ” ಎಂದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ಅವೈಜ್ಞಾನಿಕ ಚರಂಡಿ: ರಸ್ತೆ ಮೇಲೆ ಕೊಳಚೆ ನೀರು, ಜನರ ಆಕ್ರೋಶ

ಬೀದರ್ ನಗರದ ಶಹಾಪುರ ಗೇಟ್ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ಚರಂಡಿಯಿಂದಾಗಿ ಕೊಳಚೆ...

20 ವರ್ಷಗಳಲ್ಲಿ 171 ಐಐಟಿ ವಿದ್ಯಾರ್ಥಿಗಳ ಸಾವು; ಎಸ್‌ಟಿ-ಎಸ್‌ಸಿ ವಿದ್ಯಾರ್ಥಿಗಳೇ ಹೆಚ್ಚು: ಆರ್‌ಟಿಐ ವರದಿ ಬಹಿರಂಗ

ದೇಶದ ಅತ್ಯಂತ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐಐಟಿಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ...

ಬೀದರ್‌ | ಪ್ರತಿ ಟನ್‌ ಕಬ್ಬಿಗೆ ₹5,500 ದರ ನಿಗದಿಗೆ ಆಗ್ರಹ: ನಾಳೆ ಡಿಸಿ ಕಚೇರಿ ಮುತ್ತಿಗೆ

ಪ್ರತಿ ಟನ್‌ ಕಬ್ಬಿಗೆ ₹5,500 ದರ ನಿಗದಿಪಡಿಸುವುದು, ಸಕ್ಕರೆ ಕಾರ್ಖಾನೆಗಳಲ್ಲಿ ತಕ್ಷಣ...

ಬಾಗಲಕೋಟೆ | ಜನಗಣತಿ-2027ಕ್ಕೆ ಸಿದ್ಧತೆ: ಜಿಲ್ಲೆಯ 120 ಅಧಿಕಾರಿಗಳಿಗೆ ತರಬೇತಿ

ಜಿಲ್ಲೆಯಾದ್ಯಂತ ಜನಗಣತಿ-2027ರ ಕಾರ್ಯವನ್ನು ಯಶಸ್ವಿಯಾಗಿ ಹಾಗೂ ವ್ಯವಸ್ಥಿತವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಜಿಲ್ಲೆಯ...