ಕಾಂಗ್ರೆಸ್‌ನಲ್ಲಿ ತೀವ್ರ ಲಾಬಿ: ರಾಯಚೂರು ಸಚಿವ ಸ್ಥಾನ ಯಾರಿಗೆ?

Date:

ರಾಜ್ಯ ಕಾಂಗ್ರೆಸ್‌ನಲ್ಲಿ ಸಂಭವನೀಯ ಸಂಪುಟ ಪುನರ್‌ರಚನೆ ಹಾಗೂ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ರಾಯಚೂರು ಜಿಲ್ಲೆಯಲ್ಲಿ ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ ಆರಂಭವಾಗಿದೆ. ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರು ತಮ್ಮ ರಾಜಕೀಯ ಪ್ರಭಾವ ಬಳಸಿಕೊಂಡು ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸುತ್ತಿರುವುದು ಪಕ್ಷದ ವಲಯಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

- Advertisement -

ಜಿಲ್ಲೆಯಲ್ಲಿ ಈಗಾಗಲೇ ಹಿರಿಯ ಕಾಂಗ್ರೆಸ್ ನಾಯಕ ಎನ್ ಎಸ್ ಬೋಸರಾಜು ಸಚಿವರಾಗಿ ಮೂರು ವರ್ಷ ಸೇವೆ ಸಲ್ಲಿಸಿದ್ದಾರೆ. ಆದರೆ ಬದಲಾವಣೆಗಳ ಹಿನ್ನೆಲೆಯಲ್ಲಿ ಮತ್ತೊಮ್ಮೆ ಜಿಲ್ಲೆಯ ಪ್ರತಿನಿಧಿತ್ವದ ಪ್ರಶ್ನೆ ಮುನ್ನೆಲೆಗೆ ಬಂದಿದ್ದು, ಹಲವು ಪ್ರಭಾವಿ ನಾಯಕರು ಸಚಿವ ಸ್ಥಾನಕ್ಕಾಗಿ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ರಾಯಚೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಹಲವು ಪ್ರಭಾವಿ ನಾಯಕರು ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ನಾಲ್ವರು ಶಾಸಕರು, ಮೂವರು ವಿಧಾನ ಪರಿಷತ್ ಸದಸ್ಯರು ಹಾಗೂ ಹಲವಾರು ಹಿರಿಯ ಮುಖಂಡರು ತಮ್ಮ ತಮ್ಮ ರಾಜಕೀಯ ಪ್ರಭಾವ ಬಳಸಿಕೊಂಡು ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.

ಎರಡು ಬಣಗಳ ನಡುವೆ ರಾಜಕೀಯ ಕಸರತ್ತು

ರಾಯಚೂರು ಜಿಲ್ಲಾ ಕಾಂಗ್ರೆಸ್‌ನಲ್ಲಿ ಎರಡು ಪ್ರಮುಖ ಬಣಗಳ ನಡುವೆ ಒಳಪೈಪೋಟಿ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಸಚಿವ ಸ್ಥಾನಕ್ಕಾಗಿ ಹಂಪನಗೌಡ ಬಾದರ್ಲಿ, ಹಂಪಯ್ಯ ನಾಯಕ ಹಾಗೂ ಎ. ವಸಂತ್ ಕುಮಾರ್ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ.

ಇನ್ನೊಂದೆಡೆ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಮಸ್ಕಿ ಶಾಸಕ ಬಸನಗೌಡ ತುರುವಿಹಾಳ ಹಾಗೂ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಕೂಡ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ.

ಹಿರಿಯತೆಗೆ ಮನ್ನಣೆ ಸಿಗುತ್ತದೆಯೇ?

ಸಿಂಧನೂರು ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹಂಪನಗೌಡ ಬಾದರ್ಲಿ ಜಿಲ್ಲೆಯ ಅತ್ಯಂತ ಹಿರಿಯ ಹಾಗೂ ಅನುಭವಿ ನಾಯಕರಲ್ಲಿ ಒಬ್ಬರು. ಕ್ಷೇತ್ರದ ಅಭಿವೃದ್ಧಿ, ಜನಪರ ಕಾರ್ಯಕ್ರಮಗಳು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷದ ಸಂಘಟನೆಗೆ ನೀಡಿರುವ ಕೊಡುಗೆಗಳನ್ನು ಆಧಾರವಾಗಿಟ್ಟುಕೊಂಡು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯ ಬೆಂಬಲಿಗರಿಂದ ಕೇಳಿಬರುತ್ತಿದೆ.

ಎರಡು ವರ್ಷಗಳ ಹಿಂದೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನವನ್ನು ಪರೋಕ್ಷವಾಗಿ ತಿರಸ್ಕರಿಸಿ, ತಮ್ಮ ಹಿರಿಯತೆಗೆ ತಕ್ಕ ಗೌರವವಾಗಿ ಸಚಿವ ಸ್ಥಾನ ನೀಡುವಂತೆ ಅವರು ಮನವಿ ಮಾಡಿದ್ದರು ಎನ್ನಲಾಗಿದೆ.

ಬೋಸರಾಜು ಮುಂದುವರೆಯುವರೇ,

ಹಾಲಿ ಸಚಿವ ಎನ್ ಎಸ್ ಬೋಸರಾಜು ಅವರಿಗೆ ಹೈಕಮಾಂಡ್ ರಾಹುಲ್ ಗಾಂಧಿ ಜತೆಗೆ ನೇರ ಸಂಪರ್ಕ ಹಾಗೂ ಉತ್ತಮ ರಾಜಕೀಯ ಸಂಬಂಧಗಳಿವೆ ಎಂಬ ಮಾತುಗಳಿವೆ. ಹೀಗಾಗಿ ಅವರು ಇನ್ನೂ ಎರಡು ವರ್ಷ ಸಚಿವ ಸ್ಥಾನ ಮುಂದುವರಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಪಕ್ಷದ ಇನ್ನೊಂದು ಬಣ ಹೊಸ ಮುಖಗಳಿಗೆ ಅವಕಾಶ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದೆ.

ಹೈ ಕಮಾಂಡ್ ಹೊಸಬರಿಗೆ ಅವಕಾಶ ನೀಡಬಹುದಾ?

ವಿಧಾನ ಪರಿಷತ್ ಸದಸ್ಯ ಎ. ವಸಂತ್ ಕುಮಾರ್ ಅವರು ಪಕ್ಷ ಸಂಘಟನೆಯಲ್ಲಿ ತೋರಿದ ಸಾಮರ್ಥ್ಯ ಹಾಗೂ ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ವಹಿಸಿದ ಜವಾಬ್ದಾರಿಗಳಿಂದ ಗಮನ ಸೆಳೆದಿದ್ದಾರೆ. ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಎರಡು ಬಾರಿ ಕಾರ್ಯನಿರ್ವಹಿಸಿರುವ ಅವರು ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ ಎನ್ನಲಾಗುತ್ತಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಉತ್ತಮ ಒಡನಾಟ ಹೊಂದಿರುವುದು ಅವರ ಪರವಾಗಬಹುದು ಎಂಬ ರಾಜಕೀಯ ವಿಶ್ಲೇಷಣೆಗಳು ಕೇಳಿಬರುತ್ತಿವೆ ಹಾಗೂ ಹೊಸಬರಿಗೆ ಅವಕಾಶ ನೀಡಬೇಕು ಎಂದು ಹೇಳಲಾಗಿದೆ.

ಡಿ ಕೆ ಬಣದ ನಾಯಕರಿಗೆ ಲಾಭವಾಗುತ್ತದೆಯೇ?

ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರು ಡಿ ಕೆ ಶಿವಕುಮಾರ್ ಅವರ ಆಪ್ತ ವಲಯದಲ್ಲಿರುವ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಸಂಭವನೀಯ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಅವಕಾಶ ದೊರೆಯಬಹುದು ಎಂಬ ನಿರೀಕ್ಷೆ ಅವರ ಬೆಂಬಲಿಗರಲ್ಲಿ ಇದೆ.

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಪಕ್ಷದ ಇಬ್ಬರು ಪ್ರಮುಖ ನಾಯಕರು ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಕಾರಣದಿಂದ ಅವರ ಹೆಸರು ಕೂಡ ಪ್ರಬಲವಾಗಿ ಕೇಳಿಬರುತ್ತಿದೆ. ಈ ಬಾರಿ ಯುವ ನಾಯಕರಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ ಅಭಿಮಾನಿಗಳಿಂದ ವ್ಯಕ್ತವಾಗುತ್ತಿದೆ.

ಇದನ್ನೂ ಓದಿದ್ದೀರಾ? BIG BREAKING | ಪರಮೇಶ್ವರ್ ಏಕೈಕ ಡಿಸಿಎಂ; ನೂತನ ಸಚಿವ ಸಂಪುಟದ ಅಧಿಕೃತ ಪಟ್ಟಿ!

ರಾಯಚೂರು ಜಿಲ್ಲೆಯಿಂದ ಹಿರಿಯತೆ, ಸಂಘಟನಾ ಸಾಮರ್ಥ್ಯ, ಸಾಮಾಜಿಕ ಸಮೀಕರಣ, ಪ್ರಾದೇಶಿಕ ಪ್ರತಿನಿಧಿತ್ವ ಹಾಗೂ ಬಣ ರಾಜಕಾರಣದ ಲೆಕ್ಕಾಚಾರಗಳು ಒಂದೆಡೆ ಸೇರುವುದರಿಂದ ಸಚಿವ ಸ್ಥಾನಕ್ಕಾಗಿ ಪೈಪೋಟಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಆದರೆ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಯಾವ ಮಾನದಂಡದ ಆಧಾರದಲ್ಲಿ ನಿರ್ಧಾರ ಕೈಗೊಳ್ಳುತ್ತದೆ? ಹಿರಿಯ ನಾಯಕರಿಗೆ ಮನ್ನಣೆ ಸಿಗುತ್ತದೆಯೇ, ಯುವ ಮುಖಗಳಿಗೆ ಅವಕಾಶ ದೊರೆಯುತ್ತದೆಯೇ ಅಥವಾ ಹಾಲಿ ಸಚಿವರೇ ಮುಂದುವರೆಯುತ್ತಾರೆಯೇ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.

ರಾಯಚೂರು ಜಿಲ್ಲೆಯ ರಾಜಕೀಯ ವಲಯದಲ್ಲಿ ʼಸಚಿವ ಸ್ಥಾನ ಯಾರಿಗೆ?ʼ ಎಂಬ ಪ್ರಶ್ನೆ ಈಗ ಕುತೂಹಲದ ಕೇಂದ್ರಬಿಂದುವಾಗಿದ್ದು, ಹೈಕಮಾಂಡ್ ತೀರ್ಮಾನಕ್ಕಾಗಿ ನಾಯಕರು ಹಾಗೂ ಕಾರ್ಯಕರ್ತರು ಕಾತರದಿಂದ ಕಾಯುತ್ತಿದ್ದಾರೆ.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿಗೆ ಎರಡು ಪತ್ರಗಳನ್ನು ಬರೆದು, ಮೂರು ಮುಖ್ಯ ಕಳವಳ ವ್ಯಕ್ತಪಡಿಸಿದ ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಮಾತನಾಡುತ್ತಾ, ಚುನಾವಣಾ ಪಟ್ಟಿಯಲ್ಲಿ...

CJP ಮುಖಂಡರ ಬಂಧನ ʼಸರ್ಕಾರ ಪ್ರಾಯೋಜಿತ ಭಯೋತ್ಪಾದನೆʼ: ಮಾಜಿ ಸಿಎಂ ಮಮತಾ ಬ್ಯಾನರ್ಜಿ

CJP ಸಹ ಸಂಚಾಲಕರಾದ ಆಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರನ್ನು...

ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಎಲ್ಲರ ಜವಾಬ್ದಾರಿ: ಡಿ.ಕೆ. ಶಿವಕುಮಾರ್

ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇವಲ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ ಸಂಚೇ?

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು...