ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಸಂಬಂಧ ನಾಗಮೋಹನ್ ದಾಸ್ ಆಯೋಗ ಸಲ್ಲಿಸಿರುವ ವರದಿ ಬಗ್ಗೆ ತೀರ್ಮಾನ ಕೈಗೊಳ್ಳಲು ಕರೆಯಲಾಗಿದ್ದ ಆ.16ರ ವಿಶೇಷ ಸಂಪುಟ ಸಭೆಯನ್ನು ಸರ್ಕಾರ ಮುಂದೂಡಿದೆ.
ಒಳಮೀಸಲಾತಿ ಬಗ್ಗೆ ಆ.16ಕ್ಕೆ ವಿಶೇಷ ಸಂಪುಟ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದರು. ಈಗ ಮುಖ್ಯಮಂತ್ರಿ ಅವರ ಮಾಧ್ಯಮ ನಿರ್ವಾಹಕರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಸಚಿವ ಸಂಪುಟದ ವಿಶೇಷ ಸಭೆಯನ್ನು ಮಂಗಳವಾರ ಸಂಜೆ ಐದು ಗಂಟೆಗೆ ಮುಂದೂಡಲಾಗಿದೆ” ಎಂದು ತಿಳಿಸಿದ್ದಾರೆ.
“ಒಳಮೀಸಲಾತಿ ಸಂಬಂಧ ನಾಗಮೋಹನ್ ದಾಸ್ ಆಯೋಗ ವರದಿಯನ್ನು ಸಲ್ಲಿಸಿದ್ದಾರೆ. ಶ್ರಮವಹಿಸಿ ಕಡಿಮೆ ಸಮಯದಲ್ಲಿ ವೈಜ್ಞಾನಿಕವಾಗಿರುವ ಅಧ್ಯಯನವನ್ನು ಮಾಡಲಾಗಿದೆ. ಶೇ.92 ರಷ್ಟು ಎಸ್ಸಿ ಸಮುದಾಯದವರನ್ನು ಸಮೀಕ್ಷೆ ಮಾಡಲಾಗಿದೆ. ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಸ್ವೀಕರಿಸಲಾಗಿದೆ. ಈ ವರದಿಯನ್ನು ಎಲ್ಲಾ ಸಚಿವರಿಗೆ ಅಧ್ಯಯನ ಮಾಡಲು ನೀಡಲಾಗಿದೆ. ಈ ಬಗ್ಗೆ ಆ.16ರಂದು ವಿಶೇಷ ಸಂಪುಟ ಸಭೆ ಕರೆದಿದ್ದು, ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಎಚ್ ಕೆ ಪಾಟೀಲ್ ಹಿಂದೆ ತಿಳಿಸಿದ್ದರು.