ಒಳಮೀಸಲಾತಿ | ಸಂಪುಟ ಸಭೆ ಮುಂದೂಡಿಕೆ; ಮಾದಿಗ ಸಮುದಾಯದ ಆಕ್ರೋಶ

Date:

ಉಪಚುನಾವಣೆ ಮತ್ತು ಮಾದರಿ ನೀತಿ ಸಂಹಿತೆಯ ನೆಪವೊಡ್ಡಿ ಒಳಮೀಸಲಾತಿ ಕುರಿತು ಚರ್ಚಿಸಬೇಕಿದ್ದ ಸಚಿವ ಸಂಪುಟ ಸಭೆಯನ್ನು ರಾಜ್ಯ ಸರ್ಕಾರ ಮುಂದೂಡಿದೆ. ಒಳಮೀಸಲಾತಿ ಜಾರಿಯಲ್ಲಿ ಸರ್ಕಾರದ ಅನಗತ್ಯ ವಿಳಂಬದ ವಿರುದ್ಧ ಮಾದಿಗ ಸಮುದಾಯ ಸೇರಿದಂತೆ ಎಡಗೈ ಸಮುದಾಯಗಳು ಆಕ್ರೋಶ ವ್ಯಕ್ತಪಡಿಸಿವೆ. ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕೆಂದು ಆಗ್ರಹಿಸಿವೆ.

- Advertisement -

ಸಂಪುಟ ಸಭೆಯನ್ನು ಮುಂದೂಡಿರುವ ಕುರಿತು ಆಕ್ರೋಶ ವ್ಯಕ್ತೊಡಿಸಿರುವ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಸಂಚಾಲಕ ಬಿ.ಎ. ಕೇಶವಮೂರ್ತಿ, “50% ಮೀಸಲಾತಿ ಮತ್ತು ಹಳೆಯ ರೋಸ್ಟರ್ ಅನ್ವಯ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಹೊರಡಿಸಿದ್ದ ಅಧಿಸೂಚನೆಯನ್ನು ಉಳಿಸಿಕೊಳ್ಳಲು ಮತ್ತು ನಿರ್ದಿಷ್ಟ ಸಮುದಾಯದ ಓಲೈಕೆಗಾಗಿ ಸರ್ಕಾರವು ಚುನಾವಣಾ ನೀತಿ ಸಂಹಿತೆಯ ಕುಂಟು ನೆಪ ಹೇಳುತ್ತಿದೆ. ನೇಮಕಾತಿ ಅಧಿಸೂಚನೆಯ 30 ದಿನಗಳ ಗಡುವು ಮುಗಿಯುತ್ತಿದ್ದಂತೆಯೇ ಸಂಪುಟ ಸಭೆಯನ್ನು ಮುಂದೂಡಿರುವುದು ಸಮುದಾಯಕ್ಕೆ ಬಗೆದ ದ್ರೋಹ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

“ಸಮಿತಿಯು ಈಗಾಗಲೇ ಕೈಗೊಂಡಿರುವ ನಿರ್ಣಯದಂತೆ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಪ್ರಚಾರ ನಡೆಸಲು ನಿರ್ಧರಿಸಿದೆ. ರಾಜ್ಯ ಸರ್ಕಾರವು ಹಠಮಾರಿ ಧೋರಣೆ ತಳೆದು ಒಳಮೀಸಲಾತಿ ಜಾರಿಯನ್ನು ತಡೆಹಿಡಿದಿರುವುದರಿಂದ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಮತದಾನದ ಮೂಲಕವೇ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲು ಸಮುದಾಯವು ಸಜ್ಜಾಗುತ್ತಿದೆ” ಎಂದು ಹೇಳಿದ್ದಾರೆ.

“ಒಳಮೀಸಲಾತಿ ಮಸೂದೆಗೆ ಈಗಾಗಲೇ ರಾಜ್ಯಪಾಲರು ಅಂಕಿತ ಹಾಕಿರುವುದರಿಂದ ಅದು ಕಾನೂನುಬದ್ಧವಾಗಿದ್ದು, ಇದಕ್ಕೆ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ. ಆದರೆ, ಸರ್ಕಾರವು ಒಳ ಒಪ್ಪಂದಗಳ ಮೂಲಕ ವಿಶೇಷ ಸಂಪುಟ ಸಭೆಯನ್ನು ಮುಂದೂಡುತ್ತಿರುವುದು ರಾಜಕೀಯ ಪ್ರಾತಿನಿಧ್ಯದ ಕೊರತೆಯಿಂದ ಸಮುದಾಯವು ಎದುರಿಸುತ್ತಿರುವ ದುಸ್ಥಿತಿಯನ್ನು ಎತ್ತಿ ತೋರಿಸುತ್ತದೆ. ಈ ಕಾರಣದಿಂದಲೇ ಯಾರು ಒಳಮೀಸಲಾತಿಯ ಪರವಾಗಿ ದೃಢವಾಗಿ ನಿಲ್ಲುತ್ತಾರೋ ಅವರಿಗೆ ಮಾತ್ರ ಸಮುದಾಯದ ಜನರು ಮತ ಚಲಾಯಿಸಬೇಕು” ಎಂದು ಕರೆಕೊಟ್ಟಿದ್ದಾರೆ.

ಈ ಲೇಖನ ಓದಿದ್ದೀರಾ?: ಹಾಸನ ಮಣ್ಣಿನ ಹೆಣ್ಣು ದನಿಗಳು | ಚಂದನವನದ ಬಾನಲ್ಲಿ ಹಾಸನದ ತಾರೆಯರು

“ರಾಜ್ಯ ಸರ್ಕಾರವು ಸುಪ್ರೀಂಕೋರ್ಟ್ ತೀರ್ಪುಗಳನ್ನು ಉಲ್ಲಂಘಿಸುವ ಮೂಲಕ ಅಸಂವಿಧಾನಿಕವಾಗಿ ನಡೆದುಕೊಳ್ಳುತ್ತಿದೆ. ಕೂಡಲೇ ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು. ಗೃಹ ಮತ್ತು ಸಮಾಜ ಕಲ್ಯಾಣ ಇಲಾಖೆಗಳನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಇದು ವಿವಿಧ ಸಮುದಾಯಗಳ ನಡುವೆ ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತಿದೆ” ಎಂದು ಕಿಡಿಕಾರಿದ್ದಾರೆ.

“ಅಸ್ಪೃಶ್ಯರಲ್ಲಿ ಅಸ್ಪೃಶ್ಯರಾಗಿರುವ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...