ಒಳ ಮೀಸಲಾತಿ | ಜಾತಿರಹಿತ ಬೌದ್ಧರಿಗೆ ಸಮೀಕ್ಷೆಯಲ್ಲಿ ಪ್ರತ್ಯೇಕ ಧರ್ಮದ ಕಾಲಂ ರಚಿಸಿ: ಮಹಾಸಭಾ ಆಗ್ರಹ

Date:

ರಾಜ್ಯದಲ್ಲಿ ಮೇ 5 ರಿಂದ 17 ರವರೆಗೆ ಒಳ ಮೀಸಲಾತಿ ವರ್ಗೀಕರಣ ಮಾಡುತ್ತಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿ ಸಮೀಕ್ಷೆ ದತ್ತಾಂಶದಲ್ಲಿ ಬೌದ್ಧ ಧರ್ಮದ ಕಾಲಂ ಸೃಷ್ಟಿಸಿಲ್ಲ ಹಾಗೂ ಜಾತಿರಹಿತ ಬೌದ್ಧರೆಂದು ಸೇರಿಸಲು ಯಾವುದೇ ದತ್ತಾಂಶ ಇಲ್ಲ. ಕೂಡಲೇ ಈ ಸಮಸ್ಯೆ ಬಗೆಹರಿಸಬೇಕು ಎಂದು ಭಾರತೀಯ ಬೌದ್ಧ ಮಹಾಸಭಾ ಯುವ ಘಟಕದ ರಾಜ್ಯಾಧ್ಯಕ್ಷ ದರ್ಶನ ಸೋಮಶೇಖರ್ ಒತ್ತಾಯಿಸಿದ್ದಾರೆ.

- Advertisement -

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಅಂಬೇಡ್ಕರ್ ಬುದ್ಧರ ಅನುಯಾಯಿಗಳಾಗಿದ್ದು, ನಾವೆಲ್ಲರೂ ಬೌದ್ಧ ಧರ್ಮವನ್ನು ಪರಿಪಾಲನೆ ಮಾಡುತ್ತಿದ್ದೇವೆ. ಜಾತಿರಹಿತವಾದ ಬೌದ್ಧ ಧರ್ಮವನ್ನು ಅನುಸರಿಸುತ್ತಿದ್ದೇವೆ. ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳು, ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರಿಗೆ ಈಗಾಗಲೇ ಮನವಿ ಮಾಡಿದ್ದರೂ ಸಹ ಬೌದ್ಧ ಧರ್ಮದ ಕಾಲಂ ಹಾಗೂ ಜಾತಿರಹಿತ ಬೌಧರೆಂದು ಸೇರಿಸಲು ದತ್ತಾಂಶದಲ್ಲಿ ಹೊಸ ವಿಭಾಗ ರಚಿಸಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಈಗಾಗಲೇ ಒಳಮೀಸಲಾತಿಯ ಜನಗಣತಿಯ ಸಮೀಕ್ಷೆಯಲ್ಲಿ ಜಾತಿ ಹೆಸರನ್ನು ಬರಸದೇ ಇರುವವರನ್ನು ಬೌದ್ದರೆಂದು ಪರಿಗಣಿಸಬೇಕು ಹಾಗೂ ಬೌದ್ಧರಾದವರಿಗೆ ದತ್ತಾಂಶದಲ್ಲಿ ಸರಳೀಕರಣದ ದಾಖಲೆಗಳನ್ನು ಪಡೆಯುವಂತೆ ಕ್ರಮಕೈಗೊಳ್ಳಬೇಕು. ಬೌದ್ಧರಾದವರಿಗೆ ದತ್ತಾಂಶದಲ್ಲಿ ಸರಳೀಕರಣದ ದಾಖಲೆಗಳನ್ನು ಪಡೆಯಲು ಕ್ರಮ ತೆಗೆದುಕೊಳ್ಳಬೇಕು. ಇನ್ನು ಮುಂದೆ ನಮೂದಿಸಲ್ಪಟ್ಟ ಜಾತಿರಹಿತ ಬೌದ್ಧ ಧರ್ಮೀಯರಿಗೆ ಜನಸಂಖ್ಯೆ ಗಾತ್ರಕ್ಕೆ ಅನುಗುಣವಾಗಿ ಅವರ ಸಾಂವಿಧಾನಿಕ ಹಕ್ಕನ್ನು ನೀಡಬೇಕು” ಎಂದು ಆಗ್ರಹಿಸಿದರು.

“ಒಳಮೀಸಲಾತಿ ಸಮೀಕ್ಷೆಯಲ್ಲಿ ದ್ರಾವಿಡ, ಆದಿ ದ್ರಾವಿಡ ಸೇರಿದಂತೆ ಒಳ ಪಂಗಡಗಳಿಗೆ ಪ್ರತ್ಯೇಕ ಕಾಲಂ ಇದೆ. ರಾಜ್ಯದಾದ್ಯಂತ ಅಂಬೇಡ್ಕರ್ ಮತ್ತು ಬೌದ್ಧರ ಅನುಯಾಯಿಗಳನ್ನು ಸಂಘಟಿಸುವ ಜವಾಬ್ದಾರಿಯನ್ನು ಭಾರತೀಯ ಬೌದ್ಧ ಮಹಾಸಭಾ ಯುವ ಘಟಕ ಹೊಂದಿದೆ. ಡಾ.ಬಿ.ಆರ್. ಅಂಬೇಡ್ಕರ್‌ ಅವರ ಆಶಯಗಳನ್ನು ಪೂರೈಸಲು ನಮ್ಮ ಸಂಘಟನೆಗೆ ಪೂರಕವಾಗಿ ಒಳ ಮೀಸಲಾತಿಯಲ್ಲಿ ವ್ಯವಸ್ಥೆ ಕಲ್ಪಿಸಿಕೊಡಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...