ಒಳಮೀಸಲಾತಿ: ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

Date:

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇ.17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಇಂದು ಸಂಜೆ (ಡಿಸೆಂಬರ್ 6) ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣದಲ್ಲಿ ಸಿದ್ದರಾಮಯ್ಯನವರು ಸಭೆ ನಡೆಸಿದ್ದು, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಆಹಾರ ಸಚಿವರಾದ ಕೆ.ಎಚ್. ಮುನಿಯಪ್ಪ ಭಾಗಿಯಾಗಿದ್ದರೆಂದು ಮೂಲಗಳು ಹೇಳಿವೆ.

- Advertisement -

‘ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸೀಟುಗಳು ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ, 2022’ರ ಅಡಿಯಲ್ಲಿ ಒಳ ಮೀಸಲಾತಿ ಹೆಚ್ಚಳವನ್ನು ಜಾರಿಗೊಳಿಸದಂತೆ ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ತಡೆ ನೀಡಿತ್ತು. ಕಾಯ್ದೆಯ ನಿಬಂಧನೆಗಳನ್ನು ಪ್ರಶ್ನಿಸಿ ಮಹೇಂದ್ರ ಕುಮಾರ್ ಮಿತ್ರ ಎಂಬವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸೇರಿದಂತೆ ಹಲವಾರು ಅರ್ಜಿಗಳನ್ನು ಆಲಿಸಿದ ನಂತರ, “ಅರ್ಜಿಗಳು ಇತ್ಯರ್ಥವಾಗುವವರೆಗೆ ನೇಮಕಾತಿ ಅಥವಾ ಹೆಚ್ಚಿದ ಮೀಸಲಾತಿ ಆಧಾರದ ಮೇಲೆ ನೇಮಕಾತಿಗಳಿಗೆ ಯಾವುದೇ ಅಧಿಸೂಚನೆಗಳನ್ನು ಹೊರಡಿಸಬಾರದು. ಈಗಾಗಲೇ ಪ್ರಾರಂಭವಾಗಿರುವ ನೇಮಕಾತಿಗಳನ್ನು ಮುಂದುವರಿಸಬಹುದು, ಆದರೆ ಈ ನೇಮಕಾತಿಗಳು ಸದ್ಯ ಸಲ್ಲಿಸಲಾಗಿರುವ ಅರ್ಜಿಗಳ ಅಂತಿಮ ತೀರ್ಪಿಗೆ ಒಳಪಟ್ಟಿರಬೇಕು” ಎಂದು ಕೋರ್ಟ್ ಹೇಳಿತ್ತು. ಶೇ.15ರ ಬದಲಿಗೆ ಶೇ.17ರ ಪ್ರಮಾಣದಲ್ಲಿ ಮೀಸಲಾತಿಯನ್ನು ಸರ್ಕಾರ ಹಂಚಿಕೆ ಮಾಡಿದ್ದು, ಅದನ್ನು ಸಮರ್ಥಿಸಲು ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಶೇ.17ರ ಮೀಸಲಾತಿಯನ್ನು ಸಮರ್ಥನೆ ಮಾಡಲು ಆಯೋಗದ ಅಂಕಿ-ಅಂಶಗಳಿವೆ. ಈಗಾಗಲೇ ಛತ್ತೀಸ್‌ಗಡದಲ್ಲಿ ಶೇ.58ರಷ್ಟು ಮೀಸಲಾತಿಯನ್ನು ಜಾರಿಗೆ ತರಲಾಗಿದೆ ಎಂದು ಸಭೆಯಲ್ಲಿ ಚರ್ಚಿಸಿರುವುದಾಗಿ ತಿಳಿದುಬಂದಿದೆ.

ಇದರ ಜೊತೆಗೆ “ಒಳಮೀಸಲಾತಿಗೆ ಸಂಬಂಧಿಸಿದಂತೆ ಕಾಯ್ದೆಯನ್ನು ತರಬೇಕು ಮತ್ತು ಸೂಕ್ತ ನಿಯಮಾವಳಿಗಳನ್ನೂ ರೂಪಿಸಬೇಕು. ಬಡ್ತಿ ಮೀಸಲಾತಿಯಲ್ಲೂ ಒಳಮೀಸಲಾತಿ ಜಾರಿಗೆ ತರಲು ಈಗಾಗಲೇ ಇರುವ ಕಾಯ್ದೆಗೆ ತಿದ್ದುಪಡಿ ಮಾಡಲು ಸರ್ಕಾರ ನಿರ್ಧರಿಸಿದೆ” ಎಂದು ಮೂಲಗಳು ‘ಈದಿನ’ಕ್ಕೆ ಮಾಹಿತಿ ನೀಡಿವೆ.

ಸಿದ್ದರಾಮಯನ ಹುಂಡಿಯಲ್ಲಿ ಪಾದಯಾತ್ರೆ ಶುರು ಮಾಡದಂತೆ ಹೋರಾಟಗಾರರಿಗೆ ತೊಂದರೆ ಕೊಟ್ಟ ಬಗ್ಗೆಯೂ ಮುಖ್ಯಮಂತ್ರಿಗಳ ಗಮನಕ್ಕೆ ಹೋರಾಟಗಾರರು ತಂದಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿಯವರು ತುರ್ತು ಸಭೆ ಕರೆಯಲು ಹೋರಾಟದ ಒತ್ತಡವೂ ಕಾರಣ ಎಂದು ಮೂಲಗಳು ಹೇಳಿವೆ. ಅಡ್ವೊಕೇಟ್ ಜನರಲ್ ಸಭೆಯಲ್ಲಿ ಇದ್ದರೆಂದು ತಿಳಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಗೆಲುವು

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ...

ಕನ್ನಡಿಗರ ಉದ್ಯೋಗ ಹಕ್ಕುಗಳ ರಕ್ಷಣೆಗೆ ʼನಮ್ಮ ನಾಡು ನಮ್ಮ ಉದ್ಯೋಗʼ ಚಳವಳಿ ಆರಂಭ

ಕರ್ನಾಟಕದಲ್ಲಿ ಕನ್ನಡಿಗರ ಉದ್ಯೋಗಾವಕಾಶಗಳ ರಕ್ಷಣೆ ಹಾಗೂ ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ನ್ಯಾಯಯುತ...

ಸೌಜನ್ಯ ಪ್ರಕರಣ ಮರು ತನಿಖೆಗೆ ವೇಗ: ಹಿಂದಿನ ತನಿಖಾಧಿಕಾರಿಗಳಿಗೆ SIT ನೋಟಿಸ್, 15ಕ್ಕೂ ಹೆಚ್ಚು ಮಂದಿಗೆ ಬುಲಾವ್

ರಾಜ್ಯಾದ್ಯಂತ ತೀವ್ರ ಗಮನ ಸೆಳೆದಿರುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ...

ಕರ್ನಾಟಕ SIR | ಅಂತಿಮ ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರಿದೆಯೇ ಪರಿಶೀಲಿಸಿ

ರಾಜ್ಯದಲ್ಲಿ ಗ್ಯಾನೇಶ್‌ ಕುಮಾರ್‌/ಚುನಾವಣಾ ಆಯೋಗ ಹೇರಿದ್ದ ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ...