ಒಳಮೀಸಲಾತಿ ಹೋರಾಟಕ್ಕೆ ಮಣಿದ ಸರ್ಕಾರ; ಮಣಿವಣ್ಣನ್ ಎತ್ತಂಗಡಿ

Date:

ಒಳಮೀಸಲಾತಿ ಹೋರಾಟಗಾರರ ಒತ್ತಾಯಕ್ಕೆ ಮಣಿದಿರುವ ರಾಜ್ಯ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮೇಜರ್ ಪಿ.ಮಣಿವಣ್ಣನ್ ಅವರನ್ನು ಎತ್ತಂಗಡಿ ಮಾಡಿದೆ. ಒಳಮೀಸಲಾತಿ ಜಾರಿಯಲ್ಲಿ ಗೊಂದಲಗಳು ಏರ್ಪಟ್ಟಿದ್ದು, ಇದರಲ್ಲಿ ಮಣಿಮಣ್ಣನ್‌ ಪಾತ್ರ ದೊಡ್ಡದಿದೆ ಎಂದು ಹೋರಾಟಗಾರರು ಆರೋಪಿಸಿದ್ದರು.

- Advertisement -

ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ‘ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಹೋರಾಟ ಸಮಿತಿ’ಯು ಹಲವು ಬೇಡಿಕೆಯನ್ನು ಸರ್ಕಾರದ ಮುಂದೆ ಇಟ್ಟಿತ್ತು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಲವು ವರ್ಷಗಳಿಂದ ಬೇರುಬಿಟ್ಟಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂಬ ಆಗ್ರಹ ಪ್ರಮುಖವಾಗಿತ್ತು. ಹೋರಾಟದ ಫಲವಾಗಿ ಮಣಿವಣ್ಣನ್ ಅವರನ್ನು ಅಂತಿಮವಾಗಿ ಎತ್ತಂಗಡಿ ಮಾಡಲಾಗಿದೆ. ಮಣಿಮಣ್ಣನ್ ಸ್ಥಾನಕ್ಕೆ ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಡಿ. ರಂದೀಪ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಇದರ ಜೊತೆಗೆ ಇನ್ನು ಕೆಲವು ಐಎಎಸ್‌ ಅಧಿಕಾರಿಗಳ ಸ್ಥಾನಪಲ್ಲಟ ಮಾಡಲಾಗಿದೆ. ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮಗಳು, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ನಿರ್ದೇಶಕ ನಿತೇಶ್ ಪಾಟೀಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನಾಗಿ ನಿಯೋಜಿಸಲಾಗಿದೆ. ವೆಂಕಟ್ ರಾಜಾ ಅವರನ್ನು ತೆರವು ಮಾಡಲಾಗಿದೆ.

ಪೋಸ್ಟಿಂಗ್‌ಗಾಗಿ ಕಾಯುತ್ತಿರುವ ಆರ್. ರಾಮಚಂದ್ರನ್ ಅವರನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ನಿಯೋಜಿಸಲಾಗಿದೆ. ಉಜ್ವಲ್ ಕುಮಾರ್ ಘೋಷ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಡಾ. ಬಿ.ಸಿ.ಸತೀಶ ಅವರನ್ನು ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮಗಳು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ನಿರ್ದೇಶಕರನ್ನಾಗಿ ನಿಯೋಜಿಸಲಾಗಿದೆ. ಎಂ.ಎಸ್.ದಿವಾಕರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರದ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಎಂ.ಪಿ.ಮುಲ್ಲೈ ಮುಹಿಲನ್ ಅವರನ್ನು ಬಿಡುಗಡೆ ಮಾಡಲಾಗಿದೆ. ದಿವಾಕರ ಅವರಿಗೆ ಬೆಂಗಳೂರಿನ ಅಟಲ್ ಜನ ಸ್ನೇಹಿ ಕೇಂದ್ರದ ನಿರ್ದೇಶಕ ಹುದ್ದೆಯ ಜವಾಬ್ದಾರಿಯನ್ನೂ ವಹಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...