ಇನ್ವೆಸ್ಟ್‌ ಕರ್ನಾಟಕ 2025 | ಇಂದಿನಿಂದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ

Date:

Advertisements

ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್‌, ನವೋದ್ಯಮ, ಏರೊಸ್ಪೇಸ್‌ ಆ್ಯಂಡ್‌ ಡಿಫೆನ್ಸ್‌ ಮತ್ತಿತರ ಕ್ಷೇತ್ರಗಳಲ್ಲಿ ವಿಶ್ವದಾದ್ಯಂತ ಪ್ರಖ್ಯಾತಿಯ ಛಾಪು ಮೂಡಿಸಿರುವ ಕರ್ನಾಟಕವು, ʼಪ್ರಗತಿಯ ಮರುಕಲ್ಪನೆʼ (Reimagining Growth) ಧ್ಯೇಯದ ಇನ್ವೆಸ್ಟ್‌ ಕರ್ನಾಟಕ 2025ರ ಮೂಲಕ ವಿಶ್ವದಾದ್ಯಂತದ ಹೂಡಿಕೆದಾರರನ್ನು ರಾಜ್ಯದತ್ತ ಸೆಳೆಯಲು ಸಜ್ಜಾಗಿದೆ.

ಮಂಗಳವಾರದಿಂದ ಶುಕ್ರವಾರದವರೆಗೆ (ಫೆ. 11ರಿಂದ 14) ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲಿರುವ ಉದ್ದಿಮೆ ದಿಗ್ಗಜರು, ಹೂಡಿಕೆದಾರರು, ನವೋದ್ಯಮಗಳ ಕನಸುಗಾರರು, ನೀತಿ ನಿರೂಪಣೆಯ ಚಿಂತಕರಿಗೆ ಸಾಮಾವೇಶ ವೇದಿಕೆ ಕಲ್ಪಿಸಲಿದೆ.

“ಮಂಗಳವಾರ ಮಧ್ಯಾಹ್ನ 4 ಗಂಟೆಗೆ ಬೆಂಗಳೂರು ಅರಮನೆ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರು ಸಮಾವೇಶ ಉದ್ಘಾಟಿಸಲಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಎಚ್.ಡಿ.ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಸೇರಿದಂತೆ ಇತರ ಗಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ” ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌

Advertisements

“ಉದ್ದಿಮೆ, ನೀತಿ ನಿರೂಪಣೆ ಹಾಗೂ ನಾವೀನ್ಯತೆ ಕ್ಷೇತ್ರದ ದಿಗ್ಗಜರ ಸಮಾಗಮಕ್ಕೆ, ಚಿಂತನ ಮಂಥನಕ್ಕೆ ಇದು ವೇದಿಕೆ ಒದಗಿಸಲಿದೆ. ಬುಧವಾರದಿಂದ ಶುಕ್ರವಾರದವರೆಗೆ ನಡೆಯಲಿರುವ ವಿವಿಧ ವಿಚಾರಗೋಷ್ಠಿಗಳಲ್ಲಿ ವಿವಿಧ ಕ್ಷೇತ್ರಗಳ ದಿಗ್ಗಜರು ಉದ್ದಿಮೆ ಲೋಕದ ಭವಿಷ್ಯದ ಬಗೆಗಿನ ತಮ್ಮ ಒಳನೋಟಗಳನ್ನು ಹಂಚಿಕೊಳ್ಳಲಿದ್ದಾರೆ. ಪ್ರಮುಖ ಹೂಡಿಕೆ ಒಪ್ಪಂದಗಳಿಗೆ ಸಹಿ ಹಾಕಲಾಗುವುದು” ಎಂದು ಅವರು‌ ವಿವರಿಸಿದ್ದಾರೆ.

“ಸಮಾವೇಶದಲ್ಲಿ ಇದೇ ಮೊದಲ ಬಾರಿಗೆ ಇನ್ವೆಸ್ಟ್‌ ಕರ್ನಾಟಕ ಪ್ರಶಸ್ತಿ, ಎಸ್‌ಎಂಇ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ʼಎಸ್‌ಎಂಇ ಕನೆಕ್ಟ್‌- 25ʼ, ವೆಂಚುರೈಸ್‌ನ ಎರಡನೆ ಆವೃತ್ತಿ ಇತರ ವಿಶೇಷತೆಗಳಾಗಿವೆ. 60ಕ್ಕೂ ಹೆಚ್ಚು ಕಂಪನಿಗಳು ಮತ್ತು ನವೋದ್ಯಮಗಳು ತಯಾರಿಕೆ, ಸಂಚಾರ ಮತ್ತು ಶುದ್ಧ ಇಂಧನ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗೆ ಕಾರಣವಾಗುವ ತಂತ್ರಜ್ಞಾನಗಳನ್ನು ಪ್ರದರ್ಶಿಸಲಿವೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕ್ವಿನ್‌ ಸಿಟಿ-ನಲ್ಲಿ ಸಹಭಾಗಿತ್ವ ವಿಸ್ತರಿಸಲು ಆದ್ಯತೆ ನೀಡಲಾಗುವುದು” ಎಂದು ಹೇಳಿದ್ದಾರೆ.

“ರಾಜ್ಯಕ್ಕೆ ಭಾರಿ ಪ್ರಮಾಣದಲ್ಲಿ ಬಂಡವಾಳ ಹರಿದು ಬರಲು ಅಗತ್ಯವಾದ ಭೂಮಿಕೆಯನ್ನು ರಾಜ್ಯ ಸರ್ಕಾರವು ಹದಗೊಳಿಸಿದೆ. ಇತ್ತೀಚಿನ ವರ್ಷಗಳಲ್ಲಿ ಹತ್ತಾರು ಪ್ರಥಮಗಳನ್ನು ತನ್ನ ಮುಡಿಗೆ ಏರಿಸಿಕೊಂಡಿರುವ ಕರ್ನಾಟಕವು, ಈ ಸಮಾವೇಶದ ನೆರವಿನಿಂದ ತನ್ನ ಕೈಗಾರಿಕಾ ಪ್ರಗತಿಯ ವೇಗ ಹೆಚ್ಚಿಸಲು ದೃಢ ನಿರ್ಧಾರ ಮಾಡಿದೆ” ಎಂದು ಸಚಿವ ಪಾಟೀಲ್ ವಿವರಿಸಿದ್ದಾರೆ.

ವಿವಿಧ ವಿಚಾರಗೋಷ್ಠಿಗಳು, ಸಂವಾದ, ಸಮೂಹ ಚರ್ಚೆಗಳೂ ನಡೆಯಲಿವೆ

ಫೆ. 12

  1. ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಮತ್ತು ಸರ್ಕಾರ: ಅನಿಶ್ಚಿತ ಜಗತ್ತಿನಲ್ಲಿ ಡಿಜಿಟಲ್ ಕ್ಷಮತೆ ನಿರ್ಮಾಣ
  2. ಕ್ಷಮತೆಯ ಮಾರ್ಗೋಪಾಯಗಳು: ಜಾಗತಿಕ ಸವಾಲುಗಳ ಮಧ್ಯೆ ಭಾರತದ ಆರ್ಥಿಕ ಬೆಳವಣಿಗೆ
  3. ಭವಿಷ್ಯಕ್ಕೆ ನಾವೀನ್ಯತೆ
  4. ಮುಂದಾಳತ್ವ: ಭಾರತದ ಭವಿಷ್ಯ ರೂಪಿಸುತ್ತಿರುವ ಯುವ ನಾವೀನ್ಯಕಾರರು- ಸಂವಾದಗಳಲ್ಲಿ ಪರಿಣತರು ತಮ್ಮ ಚಿಂತನೆಗಳನ್ನು ಮಂಡಿಸಲಿದ್ದಾರೆ.

ಫೆ. 13

  1. ಕೃತಕ ಬುದ್ಧಿಮತ್ತೆ ಸೀಮಾರೇಖೆ: ದೈತ್ಯ ಜಿಗಿತದಿಂದ ನೈಜ-ಪ್ರಪಂಚದ ಪ್ರಭಾವಗಳವರೆಗೆ- ಸಂವಾದ2. ವೈವಿಧ್ಯಮಯ ಪಥಗಳಿಂದ ಸಾಮಾನ್ಯ ಗುರಿಯವರೆಗೆ- ಸಮೂಹ ಚರ್ಚೆ

ಫೆ. 14
ಪ್ರಕ್ಷುಬ್ಧತೆಯಲ್ಲಿ ಅಭಿವೃದ್ಧಿ ಸಾಧಿಸುವುದು: ಶಾಶ್ವತ ಕ್ಷಮತೆ ನಿರ್ಮಿಸುವುದರ ಸವಾಲುಗಳು ಕುರಿತು ಆಡಳಿತ ಪರಿಣತರು ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X