ಧರ್ಮಸ್ಥಳ ದೂರು ಪ್ರಕರಣ: ಮಂಗಳೂರಿನ ಎಸ್.ಐ.ಟಿ ಕಚೇರಿಗೆ ಆಗಮಿಸಿದ ತನಿಖಾ ತಂಡ

Date:

Advertisements

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಸರಣಿ ಕೊಲೆ, ನೂರಾರು ಮೃತದೇಹಗಳ ಹೂತು ಹಾಕುವಿಕೆ ಪ್ರಕರಣದ ತನಿಖೆಗಾಗಿ ರಾಜ್ಯ ಸರಕಾರ ರಚಿಸಿದ ವಿಶೇಷ ತನಿಖಾ ತಂಡ ಎರಡನೇ ದಿನವೂ ತನಿಖೆ ಚುರುಕುಗೊಳಿಸಿದೆ. ಎಸ್‌ಐಟಿ ತಂಡದ ಮುಖ್ಯಸ್ಥ ಪ್ರಣಬ್ ಮೊಹಾಂತಿ ನೇತೃತ್ವದಲ್ಲಿ ಭಾನುವಾರ ಎಸ್‌ಐಟಿ ತಂಡವು ದೂರುದಾರನ ವಿಚಾರಣೆ ನಡೆಸುತ್ತಿದೆ.

ಭಾನುವಾರ ಬೆಳಗ್ಗೆ 10.30ರ ಸುಮಾರಿಗೆ ದೂರುದಾರ ತನ್ನ ವಕೀಲರೊಂದಿಗೆ ಮಂಗಳೂರಿನ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ ಎನ್ನಲಾಗಿದ್ದು, ಮಧ್ಯಾಹ್ನ 12 ಗಂಟೆಯ ವೇಳೆಗೆ ಪ್ರಣಬ್ ಮೊಹಾಂತಿ ಎಸ್.ಐ.ಟಿ ಕಚೇರಿಗೆ ಆಗಮಿಸಿ, ದೂರುದಾರನ ವಿಚಾರಣೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

Advertisements

ಜುಲೈ 26ರಂದು ದೂರುದಾರನನ್ನು ಪೊಲೀಸ್ ಅಧಿಕಾರಿಗಳಾದ ಅನುಚೇತ್, ಜಿತೇಂದ್ರ ಕುಮಾರ್ ದಯಾಮ ಸಹಿತ ಇತರ ಸಿಬ್ಬಂದಿ ಸತತ 8 ಗಂಟೆಗಳ ಕಾಲ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದ ಬಳಿಕ ಸಂಜೆ ವೇಳೆ ಅವರ ವಕೀಲರ ಜೊತೆ ಕಳುಹಿಸಿ ಕೊಟ್ಟಿದ್ದರು. ರವಿವಾರ ಮತ್ತೆ ದೂರುದಾರನನ್ನು ಎಸ್‌.ಐ.ಟಿ ಕಚೇರಿಗೆ ಕರೆಸಿದ್ದು, ಪ್ರಣಬ್ ಮೊಹಾಂತಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಈಗಾಗಲೇ ಡಿಜಿಪಿ ಪ್ರಣವ್ ಮೊಹಾಂತಿ ಅವರು ಡಿಐಜಿ ಅನುಚೇತ್ ಅವರಿಂದ ಶನಿವಾರ ನಡೆದ ವಿಚಾರಣೆ ವೇಳೆ ದೂರುದಾರ ನೀಡಿದ ಹೇಳಿಕೆ, ಆತ ನೀಡಿದ ದೂರು, ಎಫ್‌ಐಆರ್ ಸೇರಿದಂತೆ ಎಲ್ಲ ಮಾಹಿತಿಯನ್ನು ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X