ಹೂಡಿಕೆದಾರರ ಸಮಾವೇಶ | ಸಾಮಾಜಿಕ ಜವಾಬ್ದಾರಿ ನೆನಪಿಸಿದ ಕರವೇ

Date:

“ಇವತ್ತಿನಿಂದ ವಿಶ್ವ ಹೂಡಿಕೆದಾರರ ಸಮಾವೇಶ, ಇನ್ವೆಸ್ಟ್ ಕರ್ನಾಟಕ ಆರಂಭಗೊಳ್ಳುತ್ತಿದೆ. 10 ಲಕ್ಷ ಕೋಟಿ ಹೂಡಿಕೆಯ ನಿರೀಕ್ಷೆಯನ್ನು ರಾಜ್ಯ ಸರ್ಕಾರ ಇಟ್ಟುಕೊಂಡಿದೆ. ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಉತ್ತೇಜನ ನೀಡುವುದು ಸರಿಯಾದ ಕ್ರಮ. ಇದನ್ನು ಸ್ವಾಗತಿಸುತ್ತೇವೆ. ಆದರೆ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮತ್ತು ಹೂಡಿಕೆದಾರರಿಗೆ ಇರಬೇಕಾದ ಸಾಮಾಜಿಕ ಜವಾಬ್ದಾರಿಗಳನ್ನು ಮರೆಯುವಂತಿಲ್ಲ” ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ಎಚ್ಚರಿಸಿದ್ದಾರೆ.

- Advertisement -

“ಬಂಡವಾಳ ಹೂಡಿಕೆ, ಉದ್ಯಮಶೀಲತೆಗೆ ಪ್ರೋತ್ಸಾಹ ಎಲ್ಲವೂ ಸರಿಯೇ. ಆದರೆ ಅದು ಈ ನಾಡಿನ ಜನರನ್ನು ಒಳಗೊಳ್ಳದಿದ್ದರೆ ಅದಕ್ಕೆ ಅರ್ಥವಿಲ್ಲ. ಇನ್ವೆಸ್ಟ್ ಕರ್ನಾಟಕದ ಬಹುಪಾಲು ಲಾಭ ಕನ್ನಡಿಗರಿಗೆ ದೊರೆಯುವಂತಾಗಬೇಕು. ಇಲ್ಲವಾದಲ್ಲಿ ಉದ್ಯಮಿಗಳಿಗೆ ರತ್ನಗಂಬಳಿ ಹಾಸಿ ಕರೆಯುವುದರಲ್ಲಿ ಯಾವುದೇ ಪ್ರಯೋಜನವೂ ಇರುವುದಿಲ್ಲ. ಇನ್ವೆಸ್ಟ್ ಕರ್ನಾಟಕದ ಮೂಲಕ ರಾಜ್ಯ, ಹೊರರಾಜ್ಯಗಳಲ್ಲಿ ಇರುವ ಕನ್ನಡಿಗ ಉದ್ಯಮಿಗಳಿಗೆ ಹೆಚ್ಚಿನ ಆದ್ಯತೆ ದೊರೆಯುವಂತಾಗಬೇಕು. ಯಾವುದೇ ಉದ್ಯಮ ಕರ್ನಾಟಕಕ್ಕೆ ಬಂದರೂ ಸಿ ಮತ್ತು ಡಿ ದರ್ಜೆಯ ಎಲ್ಲ ಹುದ್ದೆಗಳು ಕನ್ನಡದ ಮಕ್ಕಳಿಗೆ ದೊರೆಯುವಂತಾಗಬೇಕು. ಇತರ ಹುದ್ದೆಗಳಲ್ಲಿ ಶೇ. 60ರಷ್ಟು ಕನ್ನಡಿಗರಿಗೇ ದೊರೆಯಬೇಕು. ಆಗ ಇಂಥ ಸಮಾವೇಶ ನಿಜವಾದ ಅರ್ಥದಲ್ಲಿ ಯಶಸ್ವಿಯಾಗುತ್ತದೆ. ಕರ್ನಾಟಕ ಎಂದರೆ ಕೇವಲ ಒಂದು ಭೂಭಾಗವಲ್ಲ, ಕರ್ನಾಟಕವೆಂದರೆ ಇಲ್ಲಿನ ಜನರು, ಅವರ ಬದುಕು. ಅದನ್ನು ಸರ್ಕಾರ, ಉದ್ಯಮಿಗಳು ಮರೆಯಬಾರದು” ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಹಿಂದೆ ಕರ್ನಾಟಕದಲ್ಲಿ ಬಂಡವಾಳ ಹೂಡಿದವರು ಸರ್ಕಾರ ನೀಡಿದ ಎಲ್ಲ ಸಹಾಯವನ್ನು ಪಡೆದು, ರಿಯಾಯಿತಿ ದರದಲ್ಲಿ ಭೂಮಿ, ತೆರಿಗೆ ರಜೆ, ಕಡಿಮೆ ದರದಲ್ಲಿ ವಿದ್ಯುತ್, ನೀರಿನ ಸೌಲಭ್ಯ ಇತ್ಯಾದಿಗಳನ್ನು ಪಡೆದು ಬೆಳೆದು ನಿಂತವು. ಆದರೆ ಕನ್ನಡಿಗರಿಗೆ ಉದ್ಯೋಗ ಕೊಡಿ ಎಂದು ಕೇಳಿದಾಗ “ನಾವು ಅರ್ಹತೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುತ್ತೇವೆ” ಎಂದು ದುರಂಹಕಾರದ ಹೇಳಿಕೆಗಳನ್ನು ನೀಡಿದವು. ಇದು ಕೃತಘ್ನತೆಯ ಪರಮಾವಧಿ ಮಾತ್ರವಲ್ಲ, ಹತ್ತಿದ ಏಣಿಯನ್ನು ಒದೆಯುವ ಅಹಂಕಾರ. ಸ್ಥಳೀಯರಿಗೆ ಉದ್ಯೋಗ ನೀಡುತ್ತೇವೆ ಎಂದು ಲಿಖಿತ ಒಪ್ಪಂದ ಮಾಡಿಕೊಂಡ ಉದ್ಯಮಿಗಳೂ ಕೂಡ ಅದನ್ನು ಪಾಲಿಸಲಿಲ್ಲ.

ಕರ್ನಾಟಕದಲ್ಲಿ ಹೊರರಾಜ್ಯದ ವಲಸೆ ಪ್ರಮಾಣ ಮಿತಿಮೀರಿ ಹೋಗಿರುವ ಈ ಸಂದರ್ಭದಲ್ಲಿ ಹೊಸ ಉದ್ಯಮಗಳಲ್ಲೂ ಹೊರರಾಜ್ಯದವರನ್ನೇ ತುಂಬಿದರೆ ಕರ್ನಾಟಕದ ಚಹರೆಯೇ ಬದಲಾಗುವ ಅಪಾಯವಿದೆ. ಈ ಹಿನ್ನೆಲೆಯಲ್ಲಿ ಹೊಸ ಉದ್ಯಮಿಗಳ ಜೊತೆಯಲ್ಲಿ ಬರುವ ಹೊಸ ವಲಸಿಗರ ಸಮಸ್ಯೆಯನ್ನು ನಾವು ಎದುರಿಸಬೇಕಾಗುತ್ತದೆ.

ಉದ್ಯಮಗಳು ಬರಲಿ, ಅದಕ್ಕೆ ನಮ್ಮ ಆಕ್ಷೇಪಣೆಯಿಲ್ಲ. ಆದರೆ ಕರ್ನಾಟಕದ ಸುಂದರ ಪರಿಸರದಲ್ಲಿ, ಎಲ್ಲ ಸವಲತ್ತುಗಳನ್ನು ಪಡೆದು ಉದ್ಯಮ ಕಟ್ಟುವವರು ಕನ್ನಡಿಗರಿಗೇ ಉದ್ಯೋಗ ನೀಡಬೇಕೆಂಬ ಸಾಮಾಜಿಕ ಜವಾಬ್ದಾರಿ ಹೊಂದಿರಬೇಕು. ಈ ಜವಾಬ್ದಾರಿಯನ್ನು ಕಾನೂನುಬದ್ಧವಾಗಿ ಸರ್ಕಾರ ಜಾರಿಗೆ ತರಬೇಕು. ಕರ್ನಾಟಕದ ಅಭಿವೃದ್ಧಿ ಎಂದರೆ ಕನ್ನಡಿಗರ ಅಭಿವೃದ್ಧಿ ಎಂಬುದನ್ನು ಯಾರೂ ಮರೆಯಬಾರದು.

ಕನ್ನಡ, ಕರ್ನಾಟಕ, ಕನ್ನಡಿಗರ ಕುರಿತಾಗಿ ಅಪಾರ ಕಾಳಜಿ ಹೊಂದಿರುವ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಈ ಸೂಕ್ಷ್ಮಗಳನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂಬುದು ನನ್ನ ನಂಬಿಕೆ. ಕನ್ನಡಿಗರ ಪಾಲಿಗೆ ‘ಇನ್ವೆಸ್ಟ್ ಕರ್ನಾಟಕ’ ಭಾಗ್ಯದ ಬಾಗಿಲು ತೆರೆಯಬೇಕೇ ಹೊರತು ಕನ್ನಡಿಗರನ್ನು ಕರ್ನಾಟಕದಲ್ಲಿ ಅತಂತ್ರರನ್ನಾಗಿ ಮಾಡಬಾರದು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...