ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: KPSC ಕಚೇರಿ ಮೇಲೆ ಮತ್ತೆ CID ದಾಳಿ

Date:

ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ (KPSC) ಕಚೇರಿ ಮೇಲೆ CID ಪೊಲೀಸರು ಮತ್ತೊಮ್ಮೆ ದಾಳಿ ನಡೆಸಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ತಂಡ ಎಸ್‌ಪಿ ರಾಘವೇಂದ್ರ ಹೆಗ್ಡೆ ನೇತೃತ್ವದಲ್ಲಿ ಇಂದು ಕೆಪಿಎಸ್‌ಸಿ ಕಚೇರಿಗೆ ತೆರಳಿ ಹಲವು ದಾಖಲೆಗಳನ್ನು ಪರಿಶೀಲಿಸುತ್ತಿದೆ. ಇದು ಕೆಪಿಎಸ್‌ಸಿ ಕಚೇರಿ ಮೇಲೆ ಸಿಐಡಿ ನಡೆಸುತ್ತಿರುವ ಎರಡನೇ ದಾಳಿಯಾಗಿದೆ.

- Advertisement -

ಇದೇ ವೇಳೆ, ಪರೀಕ್ಷೆ ಬರೆದಿದ್ದ 329 ಅಭ್ಯರ್ಥಿಗಳಿಗೂ ಸಿಐಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಅಭ್ಯರ್ಥಿಗಳಿಂದ ವಶಪಡಿಸಿಕೊಂಡಿರುವ ಒಎಂಆರ್ ಕಾರ್ಬನ್ ಶೀಟ್‌ಗಳನ್ನು ಈಗಾಗಲೇ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳಿಗೆ ಲಭ್ಯವಾಗಿರುವ ಮಾಹಿತಿ ಹಾಗೂ ಕೆಲವರ ತಪ್ಪೊಪ್ಪಿಗೆ ಹೇಳಿಕೆಗಳ ಆಧಾರದ ಮೇಲೆ ಸಿಐಡಿ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದೆ ಎನ್ನಲಾಗಿದೆ.

ಇನ್ನು ಬೃಹತ್ ಅಕ್ರಮ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ರಾಜ್ಯದ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಪರೀಕ್ಷೆಯ ಉಸ್ತುವಾರಿ ವಹಿಸಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರ ನಿವಾಸದಲ್ಲೂ ಇಡಿ ಅಧಿಕಾರಿಗಳು ಶೋಧ ನಡೆಸಿದ್ದರು. ಅಧಿಕಾರಿಯ ಅನುಪಸ್ಥಿತಿಯಲ್ಲಿ ನಿವಾಸ ಪರಿಶೀಲನೆ ನಡೆಸಿದ್ದ ಇಡಿ ತಂಡ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಅವರ ಮನೆ ಬಾಗಿಲಿಗೆ ನೋಟಿಸ್ ಅಂಟಿಸಿ ತೆರಳಿತ್ತು.

ಇದನ್ನೂ ಓದಿ: 2013ರ ಅತ್ಯಾಚಾರ ಪ್ರಕರಣ: ಎರಡು ವಾರಗಳಲ್ಲಿ ಶರಣಾಗಲು ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್ ನಿರ್ದೇಶನ

ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯ ಅಕ್ರಮದ ತನಿಖೆ ಇದೀಗ ಸಿಐಡಿ ಮತ್ತು ಇಡಿ ಎರಡೂ ಹಂತಗಳಲ್ಲಿ ಮುಂದುವರಿದಿದ್ದು, ಅಭ್ಯರ್ಥಿಗಳ ವಿಚಾರಣೆ ಹಾಗೂ ದಾಖಲೆಗಳ ಪರಿಶೀಲನೆಯ ಮೂಲಕ ಪ್ರಕರಣದ ಮತ್ತಷ್ಟು ಮಾಹಿತಿಯನ್ನು ಪತ್ತೆಹಚ್ಚಲು ತನಿಖಾ ಸಂಸ್ಥೆಗಳು ಮುಂದಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...