ಹೈಕಮಾಂಡ್ ತೀರ್ಮಾನವೇ ಅಂತಿಮ; ಇಂದಿನ ಸಭೆಯ ನಂತರ ಎಲ್ಲವೂ ತಿಳಿಯಲಿದೆ: ಡಾ. ಪರಮೇಶ್ವರ್

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ. ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಪ್ರಸ್ತಾಪವನ್ನು ಕಾಂಗ್ರೆಸ್‌ ಹೈಕಮಾಂಡ್‌ ಸಿದ್ದರಾಮಯ್ಯ ಅವರ ಮುಂದಿಟ್ಟಿದೆ ಎಂದು ಕಾಂಗ್ರೆಸ್‌ನ ವಿಶ್ವಾಸಾರ್ಹ ಮೂಲಗಳು ತಿಳಿಸಿವೆ. ಆದಾಗ್ಯೂ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆ ತೊರೆಯಲು ಒಪ್ಪಿದ್ದಾರೆ ಎಂಬುದು ಅಪ್ರಸ್ತುತವೆಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ.

- Advertisement -

ಸಿದ್ದರಾಮಯ್ಯ ಅವರೊಂದಿಗೆ ದೆಹಲಿಗೆ ತೆರಳಿದ್ದ ಪರಮೇಶ್ವರ್, “ಏನೇ ತೀರ್ಮಾನ ಇದ್ದರೂ ಹೈಕಮಾಂಡ್ ನಿರ್ಣಯ ಮಾಡುತ್ತದೆ. ಒಳಗೆ ನಡೆದ ಸಭೆಯಲ್ಲಿ ಏನು ಚರ್ಚೆ ಆಗಿದೆ ಎಂಬುದು ನಮಗೆ ತಿಳಿದಿಲ್ಲ. ಹೈಕಮಾಂಡ್‌ ಜೊತೆಗಿನ ಸಭೆಯ ಬಳಿಕ, ಜಾರ್ಜ್‌ ಅವರ ಮನೆಯಲ್ಲಿ ಯಾವುದೇ ಸಭೆ ಅಥವಾ ಚರ್ಚೆ ನಡೆದಿಲ್ಲ. ವಿಧಾನ ಪರಿಷತ್ ಮತ್ತು ರಾಜ್ಯಸಭೆ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗಿರಬಹುದು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

“ಬುಧವಾರ, ಪಕ್ಷದ ಕರ್ನಾಟಕ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಮತ್ತು ವೇಣುಗೋಪಾಲ್ ಅವರು ಬೆಂಗಳೂರಿಗೆ ಬರುತ್ತಿದ್ದಾರೆ. ಅವರು ಹೈಕಮಾಂಡ್ ಅನ್ನು ಪ್ರತಿನಿಧಿಸುವುದರಿಂದ ಅವರು ಏನು ಹೇಳುತ್ತಾರೋ ಅದನ್ನು ನಾವೆಲ್ಲರೂ ಅನುಸರಿಸುತ್ತೇವೆ. ಸುರ್ಜೆವಾಲಾ ಅವರು ಬಂದಾಗ ಮಾತ್ರ ನಮಗೆ ವಿವರಗಳು ತಿಳಿಯುತ್ತವೆ. ಹೈಕಮಾಂಡ್ ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂಬುದನ್ನು ಅವರು ಪ್ರಕಟಿಸುತ್ತಾರೆ” ಎಂದು ಪರಮೇಶ್ವರ ಹೇಳಿದ್ದಾರೆ.

ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಚಿವ ಸತೀಶ್‌ ಜಾರಕಿಹೊಳಿ, “ನಿನ್ನೆ (ಮಂಗಳವಾರ) ಚರ್ಚೆಗಳು ನಡೆದಿವೆ. ಆದರೆ, ಇನ್ನೂ ಅಧಿಕೃತವಾಗಿ ಏನನ್ನೂ ತಿಳಿಸಲಾಗಿಲ್ಲ. ಸಿಎಂ ನಾಳೆ ಬೆಂಗಳೂರಿನಲ್ಲಿ ಉಪಾಹಾರ ಸಭೆ ಕರೆದಿದ್ದಾರೆ. ನಾವು ಅದರಲ್ಲಿ ಭಾಗವಹಿಸುತ್ತೇವೆ… ಅವರು ಮಾತನಾಡಿದ ನಂತರವೇ ನಮಗೆ ತಿಳಿಯುತ್ತದೆ” ಎಂದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಸಂಭಾವ್ಯ ಅಭ್ಯರ್ಥಿಯಾಗಿ ತಮ್ಮ ಹೆಸರು ಇರಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನನಗೆ ಗೊತ್ತಿಲ್ಲ; ಆ ಬಗ್ಗೆ ಇನ್ನೂ ಯಾವುದೇ ನಿರ್ದಿಷ್ಟ ಚರ್ಚೆ ನಡೆದಿಲ್ಲ. ಸಾಮಾನ್ಯ ಚರ್ಚೆಗಳು ನಡೆಯುತ್ತಿವೆ. ಆದರೆ, ಹಿರಿಯ ನಾಯಕರು ಇಲ್ಲಿಯವರೆಗೆ ನನಗೆ ವೈಯಕ್ತಿಕವಾಗಿ ಕರೆ ಮಾಡಿ ಚರ್ಚಿಸಿಲ್ಲ. ಅವರು ಕರೆ ಮಾಡಿದರೆ, ಪರಿಸ್ಥಿತಿ ಏನು ಮತ್ತು ನಾವು ಹೇಗೆ ಮುಂದುವರಿಯುತ್ತೇವೆ ಎಂಬದನ್ನು ನಾವೂ ಹೇಳಬಹುದು. ಪಕ್ಷದ ನಿರ್ಧಾರ ಎಲ್ಲರಿಗೂ ಅಂತಿಮವಾಗಿರುತ್ತದೆ. ಪಕ್ಷ ಯಾವುದೇ ನಿರ್ಧಾರ ತೆಗೆದುಕೊಂಡರೂ, ಎಲ್ಲರೂ ಅದಕ್ಕೆ ಬದ್ಧರಾಗಿರಬೇಕು. ಅದು ನಾಳೆ ಅಧಿಕೃತವಾಗುತ್ತದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಮಂತ್ರಿ ಅಂಬಾನಿ ಕ್ಷಮಿಸಿ: ಭಾರತದಲ್ಲಿ ಸ್ಟಾರ್‌ಲಿಂಕ್ ವಿಳಂಬಕ್ಕೆ ಮುಕೇಶ್ ಅಂಬಾನಿ ವಿರುದ್ಧ ಎಲಾನ್ ಮಸ್ಕ್ ವ್ಯಂಗ್ಯ

ಭಾರತದಲ್ಲಿ ತಮ್ಮ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆ ‘ಸ್ಟಾರ್‌ಲಿಂಕ್’ ಮಾರುಕಟ್ಟೆಗೆ ಪ್ರವೇಶಿಸುವುದನ್ನು...

CJP ಪ್ರೊಟೆಸ್ಟ್‌ | ಮಮತಾ ಬ್ಯಾನರ್ಜಿ, ಕೇಜ್ರಿವಾಲ್‌, ಯೋಗೇಂದ್ರ ಯಾದವ್ ವಶಕ್ಕೆ; ಮಾರುಕಟ್ಟೆಗಳು ಬಂದ್‌

CJP ಕರೆ ನೀಡಿದ್ದ ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ತೃಣಮೂಲ ಕಾಂಗ್ರೆಸ್ (TMC)...

ಸಿಜೆಪಿಯ ಶಾಂತಿಯುತ ಪ್ರತಿಭಟನೆ ಹತೋಟಿಗೆ ಕೇಂದ್ರದ ಸರ್ವಾಧಿಕಾರ ಧೋರಣೆ: ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಆಕ್ರೋಶ

ಶಾಂತಿಯುತವಾಗಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಹತೋಟಿಗೆ ತರಲು ಮತ್ತು ಜನರ ಧ್ವನಿಯನ್ನು ಅಡಗಿಸಲು...

ಶಿವಮೊಗ್ಗ | ಅಹಿಂದ ಒಕ್ಕೂಟದ ಮಹಿಳಾ ಘಟಕದ ಅಧ್ಯಕ್ಷರಾಗಿ ಸ್ಟೆಲ್ಲಾ ಮಾರ್ಟಿನ್ ನೇಮಕ

ಕರ್ನಾಟಕ ರಾಜ್ಯ ಒಕ್ಕೂಟ (ರಿ.), ಬೆಂಗಳೂರು, ಅಹಿಂದ ಕರ್ನಾಟಕ ರಾಜ್ಯ ಒಕ್ಕೂಟದ...