ಸಮೀಕ್ಷೆಯಿಂದ ಮತಾಂತರವಾಗುವಷ್ಟು ಹಿಂದೂ ಧರ್ಮ ದುರ್ಬಲವೇ? ಜೋಶಿಗೆ ಕುಟುಕಿದ ಖರ್ಗೆ

Date:

Advertisements

ಪ್ರಲ್ಹಾದ ಜೋಶಿಯವರೇ, ಸಮೀಕ್ಷೆಯಿಂದ ಮತಾಂತರವಾಗಲು ಸಾಧ್ಯವೇ? ನಿಮ್ಮ ಪ್ರಕಾರ ಹಿಂದೂ ಧರ್ಮ ಅಷ್ಟೊಂದು ದುರ್ಬಲವೇ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಲೇವಡಿ ಮಾಡಿದ್ದಾರೆ.

ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯು ಮತಾಂತರಕ್ಕೆ ಪ್ರೋತ್ಸಾಹಿಸುತ್ತದೆ ಎಂದಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ತಿರುಗೇಟು ನೀಡಿದ್ದಾರೆ.

“ನಿಮ್ಮ ಪಕ್ಷದ ನಾಯಕರು ಕುಟುಂಬ ಸಮೇತ ಮತಾಂತರವಾಗಿದ್ದಾರೆ ಎಂದು ನಿಮ್ಮದೇ ಪಕ್ಷದವರು ತಿಳಿಸಿದ್ದರು. ಇವರ ಮತಾಂತರಕ್ಕೆ ಪ್ರೇರಣೆಯಾದ ಸಂಗತಿ ಯಾವುದು? ನಿಮ್ಮ ಪಕ್ಷದವರಿಗಾಗಿ “ಘರ್ ವಾಪಸಿ“ ಕಾರ್ಯಕ್ರಮ ಹಮ್ಮಿಕೊಳ್ಳುವರಾ, ಚಿಂತಿಸಿ!” ಎಂದು ಕುಟುಕಿದ್ದಾರೆ.

“ಜೋಶಿಯವರಿಗೆ ತಿಳಿದಿರಲಿ, ಜನರಿಗೆ ಬೇಕಿರುವುದು ಮ್ಯಾಜಿಕ್ ಮಾತುಗಳಲ್ಲ, ಲಾಜಿಕ್ ಮಾತುಗಳು!” ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ದಶಕದ ಹಿಂದಿನ ಯಲ್ಲಾಲಿಂಗನ ಕೊಲೆ ಪ್ರಕರಣ: 9 ಆರೋಪಿಗಳ ಖುಲಾಸೆ

ರಾಜ್ಯ ರಾಜಕಾರಣದಲ್ಲಿ ಕೋಲಾಹಲಕ್ಕೆ ಕಾರಣವಾಗಿದ್ದ ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣದ ತೀರ್ಪು...

ಕಲ್ಯಾಣದಲ್ಲಿ ನೆರೆ | ಪರಿಹಾರದ ವಿವರ ನೀಡುವಂತೆ ಸರಕಾರಕ್ಕೆ ಹೆಚ್.ಡಿ.ದೇವೇಗೌಡ ಗಡುವು

ಕಲ್ಯಾಣ ಕರ್ನಾಟಕದ ನೆರೆಪೀಡಿತ ಜಿಲ್ಲೆಗಳಿಗೆ ಈವರೆಗೆ ಏನೆಲ್ಲಾ ಪರಿಹಾರ ಒದಗಿಸಲಾಗಿದೆ ಎಂಬ...

ಜನರಿಂದ ಪಡೆದ ಹೆಚ್ಚಿನ ಜಿಎಸ್ ಟಿಯನ್ನು ಕೇಂದ್ರ ಸರ್ಕಾರ ಮರಳಿ ನೀಡುವುದೇ: ಸಿಎಂ ಪ್ರಶ್ನೆ

ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ...

Download Eedina App Android / iOS

X