ರಸ್ತೆಯೋ, ಕೆಸರುಗದ್ದೆಯೋ? ಗುಂಡಿ ಬಿದ್ದ ರಸ್ತೆಯಲ್ಲಿ ಕುಚಿಗೇರಿ ಗ್ರಾಮಸ್ಥರ ನಿತ್ಯ ಯಾತನೆ

Date:

ಮಲೆನಾಡಿನ ಹಸಿರು ಸೌಂದರ್ಯಕ್ಕೆ ಮನಸೋತು ಪ್ರವಾಸಿಗರು ತಂಡೋಪತಂಡವಾಗಿ ಹರಿದುಬರುತ್ತಿದ್ದರೆ, ಇತ್ತ ಸೌಂದರ್ಯದ ಮಡಿಲಲ್ಲೇ ವಾಸಿಸುತ್ತಿರುವ ಕಳಸ ತಾಲೂಕಿನ ನಿವಾಸಿಗಳು ಮಾತ್ರ ಕನಿಷ್ಠ ಮೂಲಭೂತ ಸೌಕರ್ಯಗಳೂ ಇಲ್ಲದೆ ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಬಸರಿಕಲ್ಲು ಪ್ರದೇಶದಿಂದ ಕುಚಿಗೇರಿ, ಬೊಮ್ಮನಮಕ್ಕಿ, ಮುತ್ತಿನಕೊಂಡ ಹಾಗೂ ದಂಟಗನಕೊಂಡ ಗ್ರಾಮಗಳನ್ನು ಸಂಪರ್ಕಿಸುವ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟು, ಬೃಹತ್ ಹೊಂಡ-ಗುಂಡಿಗಳಿಂದ ಕೂಡಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.

- Advertisement -

ಸಂಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಚಿಗೇರಿ ಗ್ರಾಮ ಒಂದರಲ್ಲೇ 130ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿವೆ. ಈ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ 2 ರಿಂದ 3 ಅಡಿಗಳಷ್ಟು ಆಳದ ಬೃಹತ್ ಗುಂಡಿಗಳು ಬಿದ್ದಿದ್ದು, ರಸ್ತೆಯೋ ಅಥವಾ ಕೆಸರುಗದ್ದೆಯೋ ಎಂದು ತಿಳಿಯದಂತಾಗಿದೆ. ಪ್ರತಿದಿನ ಶಾಲೆ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಮಳೆಗಾಲದಲ್ಲಿ ಮೈಮೇಲೆ ಕೆಸರು ಎರಚಿಸಿಕೊಂಡೇ ವಿದ್ಯಾಭ್ಯಾಸಕ್ಕೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ. ವೃದ್ಧರು ನಡೆದಾಡಲೂ ಅಂಜುವಂತಾಗಿದ್ದು, ಅನಾರೋಗ್ಯ ಪೀಡಿತರನ್ನು ಆಸ್ಪತ್ರೆಗೆ ಕರೆದೊಯ್ಯುವುದು ಅಗ್ನಿಪರೀಕ್ಷೆಯಾಗಿದೆ ಎಂದು ಪತ್ರಿಕೋದ್ಯಮ ವಿದ್ಯಾರ್ಥಿನಿ ಆತ್ಮಿಕಾ ಹಾಗೂ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...
Screenshot 2026 10 30 13 43 26 84 7352322957d4404136654ef4adb64504

ʼಈ ದಿನʼದ ಜೊತೆ ಮಾಹಿತಿ ಹಂಚಿಕೊಂಡ ಅದೇ ಗ್ರಾಮದ ಪತ್ರಿಕೋದ್ಯಮ ವಿದ್ಯಾರ್ಥಿನಿ ಆತ್ಮಿಕಾ, “ಕುಚಿಗೇರಿ ಗ್ರಾಮದಲ್ಲಿ ಸುಮಾರು 130ಕ್ಕೂ ಹೆಚ್ಚು ಕುಟುಂಬಸ್ಥರು ವಾಸ ಮಾಡುತ್ತಿದ್ದಾರೆ. ಅಲ್ಲಿ ವಾಸಿಸುತ್ತಿರುವ ಮನೆಗಳಿಗೆ ಸಂಪರ್ಕಿಸುವ ರಸ್ತೆಗಳು 2 ರಿಂದ 3 ಅಡಿಗಳಷ್ಟು ಗುಂಡಿ ಬಿದ್ದಿದೆ. ರಸ್ತೆಯ ಸಮಸ್ಯೆಯಿಂದಾಗಿ ಪ್ರತಿದಿನ ಶಾಲಾ- ಕಾಲೇಜಿಗೆ ಹೋಗುವ ಮಕ್ಕಳಿಗೆ ತುಂಬ ಸಮಸ್ಯೆ ಎದುರಾಗುವ ಜೊತೆಗೆ ಮಳೆಗಾಲ ಬಂದರೆ ಸಾಕು ಮೈಮೇಲೆ ಹಾಕಿರುವ ಬಟ್ಟೆ ಕೆಸರಿಂದ ಕೂಡಿರುತ್ತೆ. ವಯಸ್ಸಾದ ವೃದ್ಧರಿಗೆ ನಡೆದಾಡಲು ಆಗುತ್ತಿಲ್ಲ ಎಂದರು.

ಸಂಪೂರ್ಣ ಕೆಸರುಮಯವಾಗಿರುವ ಈ ರಸ್ತೆಯಲ್ಲಿ ಅನೇಕ ವಾಹನ ಸವಾರರು ಹಾಗೂ ಹಾದಿಹೋಕರು ಜಾರಿ ಬಿದ್ದು ಗಾಯಗೊಂಡ ಉದಾಹರಣೆಗಳಿವೆ. ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಹರಸಾಹಸ ಪಡುತ್ತಿದ್ದು, ವಾಹನಗಳನ್ನು ಚಲಾಯಿಸಲಾಗದೆ ಕೈಯಲ್ಲೇ ತಳ್ಳಿಕೊಂಡು ಹೋಗುವ ದೃಶ್ಯಗಳು ಇಲ್ಲಿ ಸಾಮಾನ್ಯವಾಗಿದೆ. ದಶಕಗಳಿಂದ ರಸ್ತೆಯ ಗುಂಡಿ ಮುಚ್ಚುವ ಕನಿಷ್ಠ ಕೆಲಸವನ್ನೂ ಸ್ಥಳೀಯ ಆಡಳಿತ ಮಾಡದಿರುವುದು ಗ್ರಾಮಸ್ಥರ ಕೆಂಗಣ್ಣಿಗೆ ಕಾರಣವಾಗಿದೆ.

Screenshot 2026 10 30 13 44 05 40 7352322957d4404136654ef4adb64504

ರಸ್ತೆ ದುರಸ್ತಿ ಕೋರಿ ಸಂಸೆ ಗ್ರಾಮ ಪಂಚಾಯಿತಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಚುನಾವಣೆ ಬಂದಾಗ ಮನೆಬಾಗಿಲಿಗೆ ಬಂದು ಅಕ್ಕ-ಅಣ್ಣ ಎಂದು ಕೈಮುಗಿಯುವ ಜನಪ್ರತಿನಿಧಿಗಳು, ಗೆದ್ದ ನಂತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ನಮಗೆ ಓಡಾಡಲು ಯೋಗ್ಯವಾದ ರಸ್ತೆ ಕಲ್ಪಿಸದಿದ್ದರೆ ಮುಂಬರುವ ಚುನಾವಣೆಗಳನ್ನು ಸಂಪೂರ್ಣವಾಗಿ ಬಹಿಷ್ಕರಿಸುವುದಾಗಿ ಸಂಬಂಧಪಟ್ಟ ಶಾಸಕರಿಗೆ ಹಾಗೂ ಅಧಿಕಾರಿಗಳಿಗೆ ಗ್ರಾಮಸ್ಥರು ಬೇಸರ ವ್ಯಕ್ತಪಡಿಸುವ ಮೂಲಕ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.

Screenshot 2026 10 30 13 43 55 95 7352322957d4404136654ef4adb64504

ಸಾಮಾನ್ಯ ನಾಗರಿಕರಿಗೆ ಬೇಕಾದ ಕನಿಷ್ಠ ಮೂಲಭೂತ ಸೌಕರ್ಯವಾದ ರಸ್ತೆಯನ್ನೇ ಕಳೆದುಕೊಂಡು ಪರದಾಡುತ್ತಿರುವ ಕುಚಿಗೇರಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರ ಕೂಗು ಈಗಲಾದರೂ ಶಾಸಕರ ಹಾಗೂ ಜನಪ್ರತಿನಿಧಿಗಳ ಕಿವಿಗೆ ಬೀಳುವುದೇ ಎಂಬುದನ್ನು ಕಾಯ್ದು ನೋಡಬೇಕಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ರಸ್ತೆ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಭದ್ರಾ ಉಪಕಣಿವೆ ಯೋಜನೆ: ತುರ್ತಾಗಿ ತುಂಬಿಸಿ; ರೈತ ಸಂಘ ಗುರುಶಾಂತಪ್ಪ

ಹದಗೆಟ್ಟ ರಸ್ತೆಯಿಂದಾಗಿ ತುರ್ತು ಸಂದರ್ಭಗಳಲ್ಲಿ 108 ಆಂಬ್ಯುಲೆನ್ಸ್ ಹಾಗೂ ಇತರೆ ವಾಹನಗಳು ಗ್ರಾಮದ ಒಳಗೆ ಬರಲು ನಿರಾಕರಿಸುತ್ತಿದ್ದು, ಗರ್ಭಿಣಿಯರು ಮತ್ತು ತೀವ್ರ ಅಸ್ವಸ್ಥರನ್ನು ಗ್ರಾಮಸ್ಥರೇ ಹೆಗಲ ಮೇಲೆ ಅಥವಾ ಡೋಲಿಯಲ್ಲಿ ಹೊತ್ತು ತರಬೇಕಾದ ಭೀಕರ ವಾತಾವರಣ ಸೃಷ್ಟಿಯಾಗಿದೆ. ಇದರ ಜೊತೆಗೆ ಸರಿಯಾದ ಸಾರಿಗೆ ಸಂಪರ್ಕವಿಲ್ಲದೆ ಮಳೆಗಾಲದಲ್ಲಿ ಮಕ್ಕಳು ಶಾಲೆ ತಪ್ಪಿಸುವಂತಾಗಿದ್ದು, ಇದು ಗ್ರಾಮೀಣ ಮಕ್ಕಳ ಶೈಕ್ಷಣಿಕ ಹಿನ್ನಡೆಗೂ ನೇರ ಕಾರಣವಾಗುತ್ತಿದೆ.

Screenshot 2026 10 30 13 44 19 67 7352322957d4404136654ef4adb64504

ಕಳಸ ಮತ್ತು ಕುದುರೆಮುಖ ಭಾಗಕ್ಕೆ ಪ್ರವಾಸೋದ್ಯಮದಿಂದ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಆದಾಯ ಹರಿದುಬರುತ್ತಿದ್ದರೂ, ಅದೇ ನೆಲದ ಮೂಲ ನಿವಾಸಿಗಳಿಗೆ ಕನಿಷ್ಠ ಸಂಚಾರ ಭಾಗ್ಯವೂ ಇಲ್ಲದಿರುವುದು ಆಡಳಿತ ವ್ಯವಸ್ಥೆಯ ದ್ವಂದ್ವ ನೀತಿಯನ್ನು ಎತ್ತಿ ತೋರಿಸುತ್ತದೆ. ಸಂಸೆ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಅನುದಾನ ಎಲ್ಲಿಗೆ ಹೋಗುತ್ತಿದೆ ಎಂಬ ಪ್ರಶ್ನೆ ಮೂಡಿದ್ದು, ಕೇವಲ ಭರವಸೆ ನೀಡುವುದನ್ನು ಬಿಟ್ಟು ಶಾಸಕರು ಮತ್ತು ಜಿಲ್ಲಾಡಳಿತ ತಕ್ಷಣವೇ ಈ ಭಾಗಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಿ ಶಾಶ್ವತ ರಸ್ತೆ ನಿರ್ಮಾಣಕ್ಕೆ ಮುಂದಾಗಬೇಕಿದೆ.

WhatsApp Image 2024 10 24 at 12.02.30
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನ ಪಂಚತಾರಾ ಹೋಟೆಲ್ ಈಜುಕೊಳದಲ್ಲಿ ವಿದ್ಯುತ್ ಸ್ಪರ್ಶ: ಇಬ್ಬರು ವಿದೇಶಿ ಪ್ರಜೆಗಳ ಸಾವು

ಬೆಂಗಳೂರಿನ ಹಲಸೂರಿನಲ್ಲಿರುವ ಪಂಚತಾರಾ ಹೋಟೆಲ್‌ನ ಈಜುಕೊಳದಲ್ಲಿ ಶುಕ್ರವಾರ ಸಂಜೆ ಈಜುತ್ತಿದ್ದ ವೇಳೆ...

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದ 18 ಜಿಲ್ಲೆಗಳಲ್ಲಿ ಮುಂದಿನ 7 ದಿನ ಭಾರೀ ಮಳೆ

ಅರಬ್ಬಿ ಸುಮದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಪರಿಣಾಮ, ಕರಾವಳಿ, ಮಲೆನಾಡು ಹಾಗೂ...

ಜವಳಿ ಉತ್ಪನ್ನಗಳ ರಫ್ತು ಹೆಚ್ಚಿಸಲು ಕೊಡಗಿನಲ್ಲಿ ಕಾರ್ಯಾಗಾರ

ಸ್ಥಳೀಯ ಉತ್ಪನ್ನಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟದೊಂದಿಗೆ ಉತ್ಪಾದಿಸಿ ವಿದೇಶಗಳಿಗೆ ರಫ್ತು ಮಾಡುವ...