ಪ್ರಕಾಶ್ ರಾಜ್ ಬಹುಭಾಷಾ ನಟರಲ್ವಾ? ಬೇರೆ ರಾಜ್ಯಗಳಲ್ಲೂ ಹೋರಾಟ ಮಾಡಲಿ: ಎಂ ಬಿ ಪಾಟೀಲ್

Date:

Advertisements

ನಟ ಪ್ರಕಾಶ್ ರಾಜ್ ಅವರ ಹೋರಾಟ ಕೇವಲ ಕರ್ನಾಟಕದಲ್ಲಿ ಏಕೆ? ಪ್ರಕಾಶ್ ರಾಜ್ ಬಹುಭಾಷಾ ನಟರಲ್ವಾ? ಬೇರೆ ರಾಜ್ಯಗಳಲ್ಲೂ ಅವರು ಹೋರಾಟ ಮಾಡಲಿ ಎಂದು ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಟೀಕಿಸಿದರು.

ಬೆಂಗಳೂರಲ್ಲಿ ಶನಿವಾರ ಮಾಧ್ಯಮದವರೊಂದಿಗೆ ರೈತರ ಭೂಸ್ವಾಧೀನಕ್ಕೆ ಪ್ರಕಾಶ್ ರೈ ವಿರೋಧ ವಿಚಾರವಾಗಿ ಪ್ರತಿಕ್ರಿಯಿಸಿ, “ಕೇವಲ ಕರ್ನಾಟಕದಲ್ಲಿ ಮಾತ್ರ ಪ್ರಕಾಶ್ ಹೋರಾಟ ಯಾಕೆ? ಅವರು ಕರ್ನಾಟಕದಲ್ಲಿ ಮಾತ್ರವಲ್ಲ.‌ ಯುಪಿಯಲ್ಲೂ ಹೋರಾಟ ಮಾಡಲಿ, ಅ‌ಸ್ಸಾಂನಲ್ಲೂ, ಅಷ್ಟೇ ಯಾಕೆ ಗುಜರಾತ್​ನಲ್ಲೂ ಹೋರಾಟ ಮಾಡಲಿ” ಎಂದರು.

“ದೇವನಹಳ್ಳಿಯಲ್ಲಿ ಕೆಐಎಡಿಬಿ ಭೂಸ್ವಾಧೀನದ ಫೈನಲ್ ನೋಟಿಫಿಕೇಷನ್ ಆಗಿದೆ. ಈಗ ಡಿನೋಟಿಫಿಕೇಷನ್ ಮಾಡಬೇಕಾಗುತ್ತದೆ. ಅದಕ್ಕಾಗಿ ಒಂದಷ್ಟು ಕಾನೂನು ತೊಡಕುಗಳಿವೆ. ಅವುಗಳ ಬಗ್ಗೆ ಎಜಿ ಬಳಿ ಚರ್ಚೆ ಮಾಡುತ್ತೇವೆ. ಕಾನೂನಾತ್ಮಕ ಅಂಶಗಳ ಬಗ್ಗೆ ಈಗ ಹೇಳುವುದಿಲ್ಲ. ಆದರೆ, ಯಾರಿಗೂ ಕೂಡ ಅನ್ಯಾಯ ಆಗಬಾರದು” ಎಂದು ಹೇಳಿದರು.

Advertisements

“ಕೃಷಿ ಮತ್ತು ಕೈಗಾರಿಕೆ ಎರಡನ್ನೂ ನಾವು ಸರಿದೂಗಿಸಿಕೊಂಡು ಹೋಗಬೇಕಾಗಿದೆ. ಈ ಸಂಬಂಧ ಈಗಾಗಲೇ ನಾಲ್ಕೈದು ಮಹತ್ವದ ಸಭೆಗಳು ನಡೆದಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಶುಕ್ರವಾರ ಸಭೆ ನಡೆಸಿ, ಹತ್ತು ದಿನಗಳ ಕಾಲಾವಕಾಶ ಕೇಳಿದ್ದಾರೆ. ಇದರಲ್ಲಿ ಕಾನೂನು ತೊಡಕಿನ ಸಂಗತಿಗಳಿವೆ. ಇವುಗಳನ್ನು ಬಗೆಹರಿಸಿಕೊಳ್ಳಬೇಕಾಗಿದೆ. ಜೊತೆಗೆ ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರ ಕೊಡುವ ಅಗತ್ಯವಿದೆ. ಮುಂದಿನ ಕೆಲವೇ ದಿನಗಳಲ್ಲಿ ಇದೆಲ್ಲ ಇತ್ಯರ್ಥಗೊಳ್ಳಲಿದೆ” ಎಂದು ತಿಳಿಸಿದರು.

ಮೇಕೆದಾಟು : ಕುಮಾರಸ್ವಾಮಿ ನಿಲುವು ಸರಿಯಲ್ಲ

“ಮೇಕೆದಾಟು ಅಣೆಕಟ್ಟು ಯೋಜನೆ ಜಾರಿಗೆ ಬಂದರೆ ಸಂಕಷ್ಟದ ಸಮಯದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಹೀಗೆ ಎರಡು ರಾಜ್ಯಗಳಿಗೂ ಅನುಕೂಲವಾಗಲಿದೆ. ಈ ಸತ್ಯ ಎಲ್ಲರಿಗೂ ಗೊತ್ತಿದೆ. ಇದರಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಅಂತ ರಾಜಕೀಯ ಮಾಡಿಕೊಂಡು ಕೂರಬಾರದು. ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಕೂಡ ಇದನ್ನು ಮನಗಂಡು, ರಚನಾತ್ಮಕವಾಗಿ ಕೆಲಸ ಮಾಡಲಿ” ಎಂದರು.

ʻಕುಮಾರಸ್ವಾಮಿಯವರು ಮೇಕೆದಾಟು ಯೋಜನೆ ತಮ್ಮ ಕುಟುಂಬದಿಂದ ಮಾತ್ರ ಸಾಧ್ಯ ಎಂದಿದ್ದಾರೆ. ಇದು ಸರಿಯಲ್ಲ. ಈ ಯೋಜನೆ ಜಾರಿಯಿಂದ ಸಂಕಷ್ಟದ ಸಮಯದಲ್ಲಿ ನೀರು ಸಿಗುತ್ತದೆ ಎನ್ನುವುದು ತಮಿಳುನಾಡಿನ ರಾಜಕೀಯ ಪಕ್ಷಗಳಿಗೂ ಗೊತ್ತು. ಆದರೆ ಅವರು ಸಹ ರಾಜಕೀಯಕ್ಕೋಸ್ಕರ ಮೇಕೆದಾಟು ಯೋಜನೆಯನ್ನು ವೃಥಾ ವಿರೋಧಿಸುತಿದ್ದಾರೆ. ಇಂತಹ ಧೋರಣೆಗಳನ್ನು ಎಲ್ಲರೂ ಬಿಟ್ಟರೆ ಜನರಿಗೆ ಒಳ್ಳೆಯದಾಗುತ್ತದೆʼ ಎಂದು ಹೇಳಿದರು.

“ಹಿಂದೆ ಕಾವೇರಿ ವಿವಾದವು ಸುಪ್ರೀಂಕೋರ್ಟ್‌ ಮುಂದೆ ಬಂದಾಗ ನಾನು ನೀರಾವರಿ ಸಚಿವನಾಗಿದ್ದೆ. ನಮ್ಮ ಪ್ರಯತ್ನದಿಂದ ರಾಜ್ಯಕ್ಕೆ 14 ಟಿಎಂಸಿ ಅಡಿ ನೀರು ಹೆಚ್ಚು ಸಿಕ್ಕಿತು. ಜೊತೆಗೆ, ಬೆಂಗಳೂರಿಗೂ ಕುಡಿಯುವ ನೀರು ಪೂರೈಸಲು ಕಾವೇರಿ ನೀರನ್ನು ಬಳಸಿಕೊಳ್ಳಲು ಅವಕಾಶ ಸಿಕ್ಕಿತು. ನಮ್ಮ ರಾಜಧಾನಿಯ ಮೂರನೇ ಎರಡರಷ್ಟು ಭಾಗ ಕಾವೇರಿ ಕೊಳ್ಳದಿಂದ ಹೊರಗಿದೆ ಎಂದು ತಮಿಳುನಾಡಿನವರು ತಕರಾರು ತೆಗೆದಿದ್ದರು. ಆಗ ನಾವು ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರಗಳು ಚೆನ್ನೈನ ಕುಡಿಯುವ ನೀರಿನ ಅಗತ್ಯಕ್ಕೆ ಕೃಷ್ಣಾ ಕೊಳ್ಳದಲ್ಲಿನ ತಮ್ಮ ಪಾಲಿನ ತಲಾ 5 ಟಿಎಂಸಿಯಂತೆ ಒಟ್ಟು 15 ಟಿಎಂಸಿ ನೀರನ್ನು ಬಿಟ್ಟುಕೊಟ್ಟಿದ್ದನ್ನು ನೆನಪಿಸಬೇಕಾಯಿತು. ಈ ವಿಚಾರದಲ್ಲಿ ನಮ್ಮ ಪರ ವಕೀಲ ಎಫ್‌ ಎಸ್‌ ನಾರಿಮನ್‌ ಪರಿಣಾಮಕಾರಿಯಾಗಿ ವಾದ ಮಂಡಿಸಿದರು” ಎಂದು ತಿಳಿಸಿದರು.

“ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಹೋರಾಟದ ಪ್ರಶ್ನೆಯೇನೂ ಇಲ್ಲ. ಕುಮಾರಸ್ವಾಮಿಯವರು ಈಗ ಕೇಂದ್ರ ಸಂಪುಟದಲ್ಲಿದ್ದಾರೆ. ಅವರು ರಾಜ್ಯಕ್ಕೆ ಸಹಾಯ ಮಾಡಲು ಅವಕಾಶವಿದೆ. ಇದರತ್ತ ನಮ್ಮ ಗಮನವಿರಬೇಕಷ್ಟೆ. ಕ್ಷುಲ್ಲಕ ರಾಜಕಾರಣ ಮಾಡುವುದರಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X