ಖರ್ಗೆ ಕುಟುಂಬಕ್ಕೆ ಕೊಲ್ಲುವ ಬೆದರಿಕೆ ತಾಲಿಬಾನ್ ಮನಃಸ್ಥಿತಿಯಲ್ಲವೇ: ದಿನೇಶ್ ಗುಂಡೂರಾವ್ ಪ್ರಶ್ನೆ

Date:

ಪ್ರಿಯಾಂಕ್‌ ಖರ್ಗೆ ಹಾಗೂ ಅವರ ಕುಟುಂಬದವರನ್ನು ಕೊಲ್ಲುವ ಬೆದರಿಕೆ ಹಾಕುತ್ತಿರುವ ಅಂಧಭಕ್ತರ ಮನಸ್ಥಿತಿ ತಾಲಿಬಾನ್ ಮನಃಸ್ಥಿತಿಯಲ್ಲವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

- Advertisement -

ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಶಾಲಾ ಕಾಲೇಜು ಹಾಗೂ ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗೆ ಅವಕಾಶ ಕೊಡಬಾರದು ಎಂಬ ನನ್ನ ಸಹದ್ಯೋಗಿ ಮಿತ್ರ ಪ್ರಿಯಾಂಕ್‌ ಖರ್ಗೆ ಪತ್ರಕ್ಕೆ ಅಂಧ ಭಕ್ತರು ಜೀವ ಬೆದರಿಕೆ ಒಡ್ಡಿದ್ದಾರೆ. ಪ್ರಿಯಾಂಕ್ ಖರ್ಗೆ ಹಾಗೂ ಅವರ ಕುಟುಂಬದವರನ್ನು ಕೊಲ್ಲುವುದಾಗಿ ಹೇಳಿದ್ದಾರೆ. ಖರ್ಗೆ ಹಾಗೂ ಅವರ ಕುಟುಂಬದವರನ್ನು ಕೊಲ್ಲುವ ಬೆದರಿಕೆ ಹಾಕುತ್ತಿರುವ ಅಂಧಭಕ್ತರ ಮನಸ್ಥಿತಿ ಯಾವುದು.? ಅದು ತಾಲಿಬಾನ್ ಮನಃಸ್ಥಿತಿಯಲ್ಲವೆ? ಎಂದು ಸಚಿವರು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ತಂಡ ಸಿದ್ದ; ಶುಭಮನ್ ಗಿಲ್‌ಗೆ ನಾಯಕತ್ವ – ತಂಡಕ್ಕೆ ಮರಳಿದ ಕೊಹ್ಲಿ, ರೋಹಿತ್

ಆರ್‌ಎಸ್‌ಎಸ್‌ ಒಂದು ಜೀವ ಮುಖಿ ಸಂಘಟನೆಯಾಗಿದ್ದರೆ ಯಾಕೆ ಆ ಸಂಘಟನೆಯ ಕಾರ್ಯಕರ್ತರು ಕೇವಲ ಜೀವ ತೆಗೆಯುವ ಮಾತಾಡುತ್ತಾರೆ? ಪಾನ್ಸೋರೆ, ಗೌರಿ ಲಂಕೇಶ್, ಕಲಬುರಗಿಯವರ ಹತ್ಯೆಯಲ್ಲಿ ಯಾಕೆ ನೇರವಾಗಿ ಭಾಗಿಯಾಗುತ್ತಾರೆ? ಗಾಂಧಿ ಕೊಂದ ಗೂಡ್ಸೆಯನ್ನು ಯಾಕೆ ಆರಾಧಿಸುತ್ತಾರೆ..? ಎಂದು ದಿನೇಶ್ ಗುಂಡೂರಾವ್‌ ಆಕ್ರೋಶ ವ್ಯಕ್ತಪಡಿಸಿದರು.

ಆರ್‌ಎಸ್‌ಎಸ್‌ನವರು ಗಾಂಧಿ ಕೊಂದ ಗೂಡ್ಸೆಯ ಪರ ನಿಂತಿದ್ದಾರೆ. ಹಾಗಂದ ಮಾತ್ರಕ್ಕೆ ಗಾಂಧಿ ತತ್ವಕ್ಕೆ ಸಾವು ಬಂದಿಲ್ಲ. ‌ಅದೇ ರೀತಿ ಗೌರಿ ಲಂಕೇಶ್, ಕಲಬುರಗಿ, ಪಾನ್ಸೋರೆ ಹತ್ಯೆಯಾದರು. ಆದರೆ ಅವರು ಪ್ರತಿಪಾದಿಸಿದ ತತ್ವ ಸಿದ್ದಾಂತಕ್ಕೆ ಸಾವು ಬಂದಿಲ್ಲ. ಸೈದಾಂತಿಕವಾಗಿ ಗಟ್ಟಿಯಿದ್ದಾಗ ಯಾವ ಗೊಡ್ಡು ಬೆದರಿಕೆಗಳು ಅಡ್ಡಿಯಾಗುವುದಿಲ್ಲ. ತಾವು ಪ್ರಿಯಾಂಕ್‌ ಖರ್ಗೆ ಪರವಾಗಿ ನಿಲ್ಲುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....