ಅಮೂಲ್ಯ ವೃಕ್ಷಗಳ ಸಂರಕ್ಷಣೆಗೆ ಕ್ರಮ: ಜಿಯೋ ಟ್ಯಾಗ್‌ಗೆ ಸೂಚನೆ ನೀಡಿದ ಸಚಿವ ಈಶ್ವರ ಖಂಡ್ರೆ

Date:

ಮರಗಳ ಅಕ್ರಮ ಕಡಿತಲೆ ತಡೆಯಲು ಮತ್ತು ಅಮೂಲ್ಯ ವೃಕ್ಷ ಸಂಪತ್ತು ಉಳಿವಿಗಾಗಿ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿರುವ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಬೀಟೆ, ಶ್ರೀಗಂಧ, ತೇಗದ ಮರಗಳ ಜಿಯೋ ಟ್ಯಾಗ್ ಮಾಡಲು ಸೂಚನೆ ನೀಡಿದ್ದಾರೆ.

ಕಾಡನಂಚಿನಲ್ಲಿರುವ ಎಲ್ಲ ಜಮೀನಿನಲ್ಲಿ ಅಂದರೆ ಗ್ರಾಮಗಳಿಗೆ ಹೊಂದಿಕೊಂಡ ವನಪ್ರದೇಶ, ಪಟ್ಟಾಭೂಮಿ ಮತ್ತು ಸರ್ಕಾರಿ ಜಮೀನಿನಲ್ಲಿರುವ ಬೀಟೆ (ರೋಸ್ ವುಡ್), ತೇಗ (ಟೀಕ್) ಮತ್ತು ಶ್ರೀಗಂಧ (ರಕ್ತ ಚಂದನ) ಮರಗಳಿಗೆ 3 ತಿಂಗಳ ಅವಧಿಯೊಳಗೆ ಜಿಯೋ ಟ್ಯಾಗ್ ಮಾಡಿ ಇಲಾಖೆಗೆ ವಲಯವಾರು ಪಟ್ಟಿ ಸಲ್ಲಿಸುವಂತೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ಇತ್ತೀಚೆಗೆ ಹಾಸನ ಜಿಲ್ಲೆ ಬೇಲೂರು ತಾಲೂಕು, ನಂದಗೋಡನಹಳ್ಳಿ, ಸಕಲೇಶಪುರದ ಕೌಡಳ್ಳಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಇಡಗುಂದಿ ಸೇರಿದಂತೆ ಕೆಲವು ಕಡೆಗಳಲ್ಲಿ ಅಕ್ರಮವಾಗಿ ನೂರಾರು ಅಮೂಲ್ಯ ಮನ್ನಾ ಜಾತಿಯ ವೃಕ್ಷಗಳನ್ನು ಕಡಿದ ಪ್ರಕರಣಗಳು ಬೆಳಕಿಗೆ ಬಂದಿದ್ದು, ಶುಂಠಿ ಬೆಳೆಯ ಹೆಸರಲ್ಲಿ ಮರಗಳ ಹನನ ಆಗುತ್ತಿರುವುದನ್ನು ತಪ್ಪಿಸಲು ಶ್ರೀಗಂಧ, ತೇಗ ಮತ್ತು ಬೀಟೆ ಮರಗಳ ಜಿಯೋ ಟ್ಯಾಗ್ ಮಾಡಿಸುವಂತೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಟಿಪ್ಪಣಿಯಲ್ಲಿ ಸೂಚನೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಸ್ಪೃಶ್ಯತೆ, ಮೌಢ್ಯ, ಜಾತೀಯತೆ ತೊಲಗಿಸಿ ಬಸವಣ್ಣನಿಗೆ ನಿಜ ಗೌರವ ಸಲ್ಲಿಸೋಣ

“ಅರಣ್ಯದೊಳಗೆ ಬೆಲೆ ಬಾಳುವ ಮರ ಕಡಿದು ಸಾಗಾಟ ಮಾಡಲು ಸಾಧ್ಯವಾಗದಂತೆ ಕಳ್ಳಬೇಟೆ ನಿಗ್ರಹ ತಂಡಗಳನ್ನು ನಿಯೋಜಿಸಲಾಗಿದೆ. ಆದರೆ ಕಾಡಿನಂಚಿನಲ್ಲಿ ಮತ್ತು ಸರ್ಕಾರಿ ಭೂಮಿಯಲ್ಲಿ, ಅರಣ್ಯ ಇಲಾಖೆ ಗುತ್ತಿಗೆ ನೀಡಿರುವ ಎಸ್ಟೇಟ್ ಹಾಗೂ ಪಟ್ಟಾ ಜಮೀನಿನಲ್ಲಿರುವ ಬೆಲೆಬಾಳುವ ವೃಕ್ಷಗಳ ಸಂರಕ್ಷಣೆ ಇಲಾಖೆಗೆ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಜಿಯೋ ಟ್ಯಾಗ್ ಮಾಡಿದರೆ ವೃಕ್ಷ ಸಂರಕ್ಷಣಾ ಕಾಯಿದೆ ಅಡಿ ಪೂರ್ವಾನುಮತಿ ಪಡೆಯದೆ ಮರ ಕಡಿಯಲು ಸಾಧ್ಯವಾಗುವುದಿಲ್ಲ” ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ತಮಿಳುನಾಡಿನಲ್ಲಿ ಬಿಜೆಪಿಗೆ ನೆಲೆಯಾಗುವರೇ ಅಣ್ಣಾಮಲೈ?

ಲೋಕಸಭಾ ಚುನಾವಣೆಗೆ ಕೆಲವು ವಾರಗಳು ಬಾಕಿ ಇವೆ. ತನ್ನ ನೆಲೆಯೇ ಇಲ್ಲದ...

‌ಪಾಕಿಸ್ತಾನ ಜಿಂದಾಬಾದ್‌ | ಮಾಧ್ಯಮಗಳ ವಿಡಿಯೋ ಎಫ್‌ಎಸ್‌ಎಲ್‌ನವರು ಪಡೆಯಲಿದ್ದಾರೆ: ಡಾ. ಜಿ.ಪರಮೇಶ್ವರ್

‌ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ ಎನ್ನಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವಯಂ...

ಬಿಜೆಪಿ & ಗೋದಿ ಮೀಡಿಯಾ ʼಪಾಕಿಸ್ತಾನ್‌ ಜಿಂದಾಬಾದ್‌ ಎಂದರುʼ ಎಂಬ ಸುಳ್ಳನ್ನು ಹಬ್ಬಿಸಿದ 22 ಪ್ರಕರಣಗಳು

'ಪಾಕಿಸ್ತಾನ್‌ ಜಿಂದಾಬಾದ್’ ಎಂದು ಕೂಗಿರುವುದಾಗಿ ಮಾಧ್ಯಮ ಮತ್ತು ಬಿಜೆಪಿ ಸುಳ್ಳು ಹಬ್ಬಿಸುವುದು...

ಆಂಧ್ರ ಪ್ರದೇಶ | ವಿಧಾನಸಭೆಯಿಂದ 8 ಶಾಸಕರು ಅನರ್ಹ

ಆಂಧ್ರಪ್ರದೇಶದ ಎಂಟು ಹಾಲಿ ಶಾಸಕರನ್ನು ವಿಧಾನಸಭಾ ಸ್ಪೀಕರ್ ತಮ್ಮಿನೇನಿ ಸೀತಾರಾಮ್ ಅವರು ...