ಅಲೆಮಾರಿಗಳನ್ನು ತಾಯ್ತನದಿಂದ ಪೊರೆದವರು ಮಾದಿಗರು: ಗೋಸಂಗಿ ಲೋಕೇಶ್

Date:

"ನಮ್ಮ ಅನ್ನದ ತಟ್ಟೆಗಳು ಎಲ್ಲಿ ಕಳೆದು ಹೋಗಿವೆ ಎಂಬುದು ಗೊತ್ತಿತ್ತು. ಅವುಗಳನ್ನು ನ್ಯಾಯಬದ್ಧವಾಗಿ ವಾಪಸ್ ಪಡೆದು ನಮಗೆ ದೊರಕಿಸುವ ಕೆಲಸವನ್ನು ಮಾದಿಗ ಸಮುದಾಯ ಮಾಡುತ್ತಿದೆ. ಅಲೆಮಾರಿಗಳು ಮಾದಿಗರಿಗೆ ಆಭಾರಿಯಾಗಿರುತ್ತೇವೆ."

“ಕಳೆದ 70 ವರ್ಷಗಳಿಂದಲೂ ದಿಕ್ಕಿಲ್ಲದೆ ಬದುಕುತ್ತಿರುವ ಅಲೆಮಾರಿಗಳನ್ನು ತಮ್ಮೊಂದಿಗೆ ಕರೆದುಕೊಂಡು ಹೆಜ್ಜೆ ಹಾಕಿದವರು ಮಾದಿಗರು. ಒಳಮೀಸಲಾತಿ ಹೋರಾಟ ನಮಗೂ ನ್ಯಾಯ ದೊರಕಿಸಿ ಕೊಟ್ಟಿದೆ. ಮಾದಿಗ ಸಮುದಾಯವು ತಾಯ್ತನದಿಂದ ನಮ್ಮನ್ನು ಪೊರೆದಿದೆ” ಎಂದು ‘ಅಲೆಮಾರಿ, ಅರೆಅಲೆಮಾರಿ ವಿಮುಕ್ತ ಬುಡಕಟ್ಟು ಒಕ್ಕೂಟ’ದ ಕಾರ್ಯಾಧ್ಯಕ್ಷ ಹಾಗೂ ಗೋಸಂಗಿ ಸಮುದಾಯದ ಚಾವಡಿ ಲೋಕೇಶ್ ಹೇಳಿದರು.

- Advertisement -

ಜಸ್ಟಿಸ್ ನಾಗಮೋಹನ ದಾಸ್ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಹೋರಾಟದ ಸ್ಥಳದಲ್ಲಿ ಇಂದು (ಮಂಗಳವಾರ) ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಮಾದಿಗ ಸಹೋದರರು ನಮ್ಮನ್ನು (ಅಲೆಮಾರಿಗಳನ್ನು) ಅಪ್ಪಿಕೊಂಡಿದ್ದಾರೆ. ಸಂವಿಧಾನ ಜಾರಿಯಾಗಿ ಎಪ್ಪತ್ತು ವರ್ಷಗಳಾಯಿತು. ಇಷ್ಟು ಕಾಲ ಬೀದಿಯಲ್ಲಿ ಬಿದ್ದಿದ್ದ ನಮ್ಮನ್ನು ಕೈ ಹಿಡಿದು ನಡೆಸುವ ಕೆಲಸ ಮಾಡಿದ್ದು ಮಾದಿಗ ಸಹೋದರರು” ಎಂದು ಮಾರ್ಮಿಕವಾಗಿ ನುಡಿದರು.

“ನಾವು ಕಾಡಲ್ಲಿ ಇರಲಿಕ್ಕೂ ಬಿಡಲಿಲ್ಲ, ನಾಡಲ್ಲಿ ಇರಲಿಕ್ಕೂ ಬಿಡಲಿಲ್ಲ. ನಮ್ಮ ಮಕ್ಕಳ ಮೇಲೆ ಅತ್ಯಾಚಾರಗಳಾಗಿವೆ. ನಮ್ಮ ಮೇಲೆ ಕೇಸ್‌ಗಳನ್ನು ಹಾಕಿದ್ದಾರೆ. ಅಂತಹ ಅನಿಷ್ಟ ಜೀವನ ನಮ್ಮದು. ಹೀಗಿರುವಾಗ ಒಳಮೀಸಲಾತಿ ಚಳವಳಿಗಾರರು ನಮ್ಮನ್ನು ಮಡಿಲಿಗೆ ಹಾಕಿಕೊಂಡು ತಾಯಿ ರೀತಿಯಲ್ಲಿ ಪೋಷಣೆ ಮಾಡಿದ್ದಾರೆ” ಎಂದರು.

“ನಮ್ಮ ಅನ್ನದ ತಟ್ಟೆಗಳು ಎಲ್ಲಿ ಕಳೆದು ಹೋಗಿವೆ ಎಂಬುದು ಗೊತ್ತಿತ್ತು. ಅವುಗಳನ್ನು ನ್ಯಾಯಬದ್ಧವಾಗಿ ವಾಪಸ್ ಪಡೆದು ನಮಗೆ ದೊರಕಿಸುವ ಕೆಲಸ ಮಾಡುತ್ತಿದ್ದಾರೆ. ಮಾದಿಗ ಸಮುದಾಯಕ್ಕೆ ಅಲೆಮಾರಿಗಳು ಆಭಾರಿಯಾಗಿರುತ್ತೇವೆ” ಎಂದು ಕೃತಜ್ಞತೆ ಸಲ್ಲಿಸಿದರು.

ಇದನ್ನೂ ಓದಿರಿ: ‘ನೆಪಗಳನ್ನಿಟ್ಟು ಒಳಮೀಸಲಾತಿ ಜಾರಿ ತಡಮಾಡದಿರಿ’; ಅನಿರ್ದಿಷ್ಟಾವಧಿ ಹೋರಾಟ ಆರಂಭ

“ಎಪ್ಪತ್ತು ವರ್ಷಗಳಿಂದಲೂ ಬೀದಿಯಲ್ಲಿದ್ದ ನಮ್ಮನ್ನು, 35 ವರ್ಷಗಳ ಹಿಂದೆ ಜೊತೆಯಲ್ಲಿ ಕರೆದುಕೊಂಡು ಹೊರಟವರು ಮಾದಿಗರು. 49 ಜಾತಿಗಳನ್ನೆಲ್ಲ ಒಟ್ಟುಗೂಡಿಸಿದರೂ ನಮ್ಮ ಸಂಖ್ಯೆ 4 ಲಕ್ಷ ದಾಟುವುದಿಲ್ಲ. ನಮಗೆ ಒಳಮೀಸಲಾತಿ ಬೇಕಾಗಿದೆ. ಸರ್ಕಾರದ ಆದೇಶ ಪ್ರತಿ ಸಿಗುವವರೆಗೂ ಹಿಂತಿರುಗಿ ಹೋಗುವುದಿಲ್ಲ. 70 ವರ್ಷಗಳಿಂದಲೂ ನಾವು ಬೀದಿಯಲ್ಲೇ ಇದ್ದೇವೆ. ಹೋರಾಟ ಮಾಡುವುದು ನಮಗೆ ಹೊಸದಲ್ಲ” ಎಂದು ತಿಳಿಸಿದರು.

ಒಳಮೀಸಲಾತಿ ಹೋರಾಟಗಾರರಾದ ಎಸ್.ಮಾರೆಪ್ಪ, ಅಂಬಣ್ಣ ಅರೋಲಿಕರ್, ಬಸವರಾಜ್ ಕೌತಾಳ್, ಕರಿಯಪ್ಪ ಗುಡಿಮನಿ, ಶಿವರಾಯ ಅಕ್ಕರಕಿ ಮೊದಲಾದ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...