ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುತ್ತಿರುವುದು ದುರದೃಷ್ಟಕರ: ಸಿದ್ದರಾಮಯ್ಯ ವಿಷಾದ

Date:

ದೇಶದಲ್ಲಿ ಜಾತಿ ವ್ಯವಸ್ಥೆ ಹಾಗೂ ಮೌಢ್ಯಗಳು ಇಂದಿಗೂ ಜೀವಂತವಾಗಿರಲು ವಿದ್ಯಾವಂತರ ಪಾಲು ದೊಡ್ಡದಿದ್ದು, ಅವರು ಜಾತಿ ವ್ಯವಸ್ಥೆಯನ್ನು ಮೈಗೂಡಿಸಿಕೊಳ್ಳುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಬೇಸರ ವ್ಯಕ್ತಪಡಿಸಿದರು.

- Advertisement -

​ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿದ್ದ ‘ಶೂದ್ರ ಸೇವಾ ಸಂಘ’ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

​”ಜಾತಿ ವ್ಯವಸ್ಥೆಯ ಮೂಲಕ ಸಮಾಜದಲ್ಲಿ ಯಾರನ್ನೂ ಕೀಳಾಗಿ ಕಾಣಬಾರದು. ಆದರೆ, ಚಾತುರ್ವರ್ಣ ವ್ಯವಸ್ಥೆಯನ್ನು ಮನುವಾದಿಗಳು ಈ ದೇಶದಲ್ಲಿ ಉದ್ದೇಶಪೂರ್ವಕವಾಗಿಯೇ ಸೃಷ್ಟಿ ಮಾಡಿದರು. ಇದರ ಪರಿಣಾಮವಾಗಿ ಶೂದ್ರ ವರ್ಗವು ಅನೇಕ ವರ್ಷಗಳ ಕಾಲ ಅಕ್ಷರ ಸಂಸ್ಕೃತಿ ಹಾಗೂ ಅವಕಾಶಗಳಿಂದ ವಂಚಿತವಾಗಿತ್ತು. ಹೀಗಾಗಿ, ಶೂದ್ರ ವರ್ಗದವರು ಮೇಲ್ವರ್ಗದವರ ಜೊತೆ ಸ್ಪರ್ಧೆ ಮಾಡುವುದು ಅಸಾಧ್ಯವಾಯಿತು. ಅಕ್ಷರ ವಂಚಿತರಿಗೆ, ಅಕ್ಷರ ಕಲಿತವರಿಂದ ಸೋಲಾಗುವುದು ಸಾಮಾನ್ಯ ನಿಯಮವಾಗಿದೆ. ಈ ಜಾತಿ ವ್ಯವಸ್ಥೆ ಸಂಪೂರ್ಣವಾಗಿ ತೊಲಗಬೇಕಾದರೆ ಸಮಾನತೆಯ ಸಮಾಜ ನಿರ್ಮಾಣವಾಗುವುದು ಅತ್ಯಗತ್ಯ,” ಎಂದು ಪ್ರತಿಪಾದಿಸಿದರು.

​ಮೌಢ್ಯ ಬಿಡದ ವಿದ್ಯಾವಂತರು:

“ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ‘ಮೌಢ್ಯ ಪ್ರತಿಬಂಧಕ ಕಾಯ್ದೆ’ಯನ್ನು ಜಾರಿಗೆ ತರಲಾಯಿತು. ಆದರೆ, ಅದು ನಿರೀಕ್ಷಿತ ಮಟ್ಟದಲ್ಲಿ ಸಮರ್ಪಕವಾಗಿ ಜಾರಿಗೆ ಬಂದಿಲ್ಲ. ಇದಕ್ಕೆ ಅಕ್ಷರಸ್ಥರೇ ಪ್ರಮುಖ ಕಾರಣ. ಏಕೆಂದರೆ, ವಿದ್ಯಾವಂತರಲ್ಲಿಯೇ ಬಹುಪಾಲು ಮಂದಿ ಈಗಲೂ ಮೌಢ್ಯ ಹಾಗೂ ಕಂದಾಚಾರಗಳನ್ನು ಪಾಲನೆ ಮಾಡುತ್ತಿದ್ದಾರೆ. ಜಾತಿ ವ್ಯವಸ್ಥೆ ಹೋಗಬೇಕಾದರೆ ಮೊದಲು ವಿದ್ಯಾವಂತರು ವೈಜ್ಞಾನಿಕವಾಗಿ ಆಲೋಚನೆ ಮಾಡುವುದನ್ನು ಕಲಿಯಬೇಕು,” ಎಂದು ಕಿವಿಮಾತು ಹೇಳಿದರು.

​ಭಿನ್ನಾಭಿಪ್ರಾಯ ಮರೆತು ಒಂದಾಗಿ:

“ನಮ್ಮೊಳಗಿನ ಭಿನ್ನಾಭಿಪ್ರಾಯಗಳನ್ನೇ ಬಂಡವಾಳ ಮಾಡಿಕೊಂಡ ಬ್ರಿಟಿಷರು ನಮ್ಮನ್ನು ಆಳಿದರು. ಆದ್ದರಿಂದ ಭಿನ್ನಾಭಿಪ್ರಾಯಗಳನ್ನು ಮರೆತು ಎಲ್ಲ ವರ್ಗದವರೂ ಒಂದಾಗಬೇಕು. ಆದರೆ, ಪಟ್ಟಭದ್ರ ಹಿತಾಸಕ್ತಿಗಳು ನಮ್ಮನ್ನು ಒಂದಾಗಲು ಬಿಡುವುದಿಲ್ಲ. ಅಸಮಾನತೆ ತೊಲಗಿ ಸಮಸಮಾಜ ನಿರ್ಮಾಣವಾಗಬೇಕು ಎಂಬುದು ಸಂವಿಧಾನದ ಮೂಲ ಆಶಯವಾಗಿದೆ. ಬುದ್ಧ, ಬಸವ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿದ್ದೂ ಇದನ್ನೇ. ಇಂದಿನ ಯುವ ಪೀಳಿಗೆಯು ವೈಜ್ಞಾನಿಕತೆ ಹಾಗೂ ವೈಚಾರಿಕತೆಯನ್ನು ಬೆಳೆಸಿಕೊಳ್ಳದಿದ್ದರೆ ಸಮಾನತೆಯ ಸಮಾಜ ನಿರ್ಮಾಣ ಸಾಧ್ಯವಿಲ್ಲ; ಜೊತೆಗೆ ಜಾತಿ ವ್ಯವಸ್ಥೆಯೂ ಹೋಗುವುದಿಲ್ಲ,” ಎಂದು ಎಚ್ಚರಿಸಿದರು.

​ಗ್ಯಾರಂಟಿಗಳಿಂದ ಅಸಮಾನತೆ ನಿವಾರಣೆ:

“ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಮಾಜದಲ್ಲಿನ ಅಸಮಾನತೆ ನಿವಾರಣೆಗೆ ಸಹಾಯಕವಾಗಿವೆ. ವ್ಯವಸ್ಥೆಯಲ್ಲಿ ಬದಲಾವಣೆ ತರಲು ಕೇವಲ ಸರ್ಕಾರವೊಂದೇ ಅಲ್ಲ, ಎಲ್ಲರ ನಿರಂತರ ಪ್ರಯತ್ನವೂ ಅಗತ್ಯವಿದೆ. ಇದಕ್ಕೆ ಸಾಕಷ್ಟು ಸಮಯವೂ ಬೇಕಾಗುತ್ತದೆ. ಸರಿಯಾದ ಮಾರ್ಗದಲ್ಲಿ ಸಾಗಿದಾಗ ಮಾತ್ರ ನಮ್ಮ ಪ್ರಯತ್ನಗಳಿಗೆ ಯಶಸ್ಸು ಸಿಗುತ್ತದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.

​ವೇದಿಕೆಯಲ್ಲಿ ಶೂದ್ರ ಸೇವಾ ಸಂಘದ ಅಧ್ಯಕ್ಷ ಹಾಗೂ ‘ಶೂದ್ರ’ ಪತ್ರಿಕೆಯ ಸಂಪಾದಕ ರಾಮೇಗೌಡ ಮತ್ತು ಸಂಘದ ಸಂಚಾಲಕ ಮುರಳೀಧರ ಹಾಲಪ್ಪ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾಲ್ಕಿ | ಬಸವಣ್ಣನವರ ಅವಹೇಳನ : ರವಿ ಹಂಜ್, ವಿಶ್ವೇಶ್ವರ ಭಟ್ ಪ್ರತಿಕೃತಿ ದಹಿಸಿ ಆಕ್ರೋಶ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹ ಹಾಗೂ...

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

ಮಂಗಳೂರು | ಪ್ರತಿಭಟನಾಕಾರರ ಅಹವಾಲು ಆಲಿಸಲು ಸಚಿವರ ನಿಯೋಜನೆ: ಸಲೀಂ ಅಹ್ಮದ್

ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ...