‘ಮೀಸಲಾತಿ ಸಂವಿಧಾನ ವಿರೋಧಿ’ ಹೇಳಿಕೆ: ನ್ಯಾ. ಸಂತೋಷ್ ಹೆಗ್ಡೆ ತೀರ್ಪುಗಳ ಮರುಪರಿಶೀಲನೆ, ಪಿಂಚಣಿ ರದ್ದತಿಗೆ ರಾಷ್ಟ್ರಪತಿಗೆ ‘ಜಾಗೃತ ಕರ್ನಾಟಕ’ ದೂರು

Date:

ಮೀಸಲಾತಿಯನ್ನು ಸಂವಿಧಾನ ವಿರೋಧಿ ಎಂದು ಹೇಳುವ ಮೂಲಕ, ಸಂವಿಧಾನದ ಬಗ್ಗೆ ತಮಗಿರುವ ಅಜ್ಞಾನವನ್ನು ಸಾರ್ವಜನಿಕವಾಗಿ ಪ್ರದರ್ಶಿಸುತ್ತಿರುವ ನಿವೃತ್ತ ನ್ಯಾಯಮೂರ್ತಿ ಎನ್‌.ಸಂತೋಷ್‌ ಹೆಗಡೆ ಅವರ ನೇಮಕಾತಿಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು, ಅವರು ನೀಡಿದ ಎಲ್ಲಾ ತೀರ್ಪುಗಳನ್ನು ಮರುಪರಿಶೀಲನೆಗೆ ಒಳಪಡಿಸಬೇಕು ಹಾಗೂ ಅವರ ಪಿಂಚಣಿಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ‘ಜಾಗೃತ ಕರ್ನಾಟಕ’ ಸಂಘಟನೆಯು ರಾಷ್ಟ್ರಪತಿಯವರಿಗೆ ಪತ್ರ ಬರೆದಿದೆ.

- Advertisement -

​ಭಾರತದ ಸಂವಿಧಾನವು ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಆಶಯದೊಂದಿಗೆ ಅವಕಾಶವಂಚಿತ ಸಮುದಾಯಗಳಿಗೆ ಮೀಸಲಾತಿಯನ್ನು ಸಾಂವಿಧಾನಿಕ ಹಕ್ಕಾಗಿ ಕಲ್ಪಿಸಿದೆ. ಸುಪ್ರೀಂ ಕೋರ್ಟ್ ಹಾಗೂ ದೇಶದ ವಿವಿಧ ಹೈಕೋರ್ಟ್‌ಗಳು ಇದನ್ನು ಎತ್ತಿಹಿಡಿದಿವೆ. ಆದರೆ, ಇಂತಹ ಮಹತ್ವದ ಸಾಂವಿಧಾನಿಕ ತತ್ವದ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಸಾರ್ವಜನಿಕವಾಗಿ ಆಕ್ಷೇಪಾರ್ಹ ಹಾಗೂ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡಿದ್ದಾರೆ. ಈ ಹಿಂದೆ ಅವರು ಸಂವಿಧಾನದ ಮೂಲ ಸ್ವರೂಪದ ಭಾಗವಾಗಿರುವ ‘ಜಾತ್ಯತೀತತೆ’ (ಸೆಕ್ಯುಲರಿಸಂ) ಬಗ್ಗೆಯೂ ಟಿವಿ ಸಂದರ್ಶನವೊಂದರಲ್ಲಿ ಕೀಳಾಗಿ ಮಾತನಾಡಿದ್ದರು ಎಂದು ಸಂಘಟನೆಯು ತನ್ನ ದೂರಿನಲ್ಲಿ ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

​ಇವರ ಈ ಹೇಳಿಕೆಗಳು ಸಂವಿಧಾನದ ಬಗೆಗಿನ ಅವರ ಅಜ್ಞಾನ ಮತ್ತು ಅಸಹನೆಯನ್ನು ತೋರುವುದಲ್ಲದೆ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಸಂವಿಧಾನ ನಿರ್ಮಾತೃಗಳಾದ ಸಂವಿಧಾನ ಸಭೆಯ ಎಲ್ಲಾ ಸದಸ್ಯರಿಗೆ ಮಾಡಿದ ಘೋರ ಅವಮಾನವಾಗಿದೆ ಎಂದು ಪತ್ರದಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

​ಸಂತೋಷ್ ಹೆಗ್ಡೆ ಅವರು ಕೇವಲ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಮಾತ್ರವಲ್ಲದೆ, ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಲಿಸಿಟರ್ ಜನರಲ್ ಆಗಿ ಮತ್ತು ರಾಜ್ಯದಲ್ಲಿ ಜನತಾ ಪಕ್ಷದ ಸರ್ಕಾರದ ಅವಧಿಯಲ್ಲಿ ಅಡ್ವೋಕೇಟ್ ಜನರಲ್ ಆಗಿ ಕಾರ್ಯನಿರ್ವಹಿಸಿದ್ದರು. ಸಂವಿಧಾನದ ಬಗ್ಗೆ ಇಷ್ಟೊಂದು ಅಜ್ಞಾನ ಹಾಗೂ ಆಳವಾದ ಅಸಹನೆ ಹೊಂದಿರುವ ವ್ಯಕ್ತಿಯೊಬ್ಬರು ಇಂತಹ ಉನ್ನತ ಸಾಂವಿಧಾನಿಕ ಹುದ್ದೆಗಳನ್ನು ಅಲಂಕರಿಸಿದ್ದು ಹೇಗೆ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಇದೊಂದು ದೊಡ್ಡ ಹಗರಣದಂತೆ ಕಾಣುತ್ತಿದ್ದು, ಸಂವಿಧಾನ ವಿರೋಧಿಗಳು ಮತ್ತು ಅಜ್ಞಾನಿಗಳು ನ್ಯಾಯಾಂಗ ವ್ಯವಸ್ಥೆಗೆ ಪ್ರವೇಶಿಸುವುದನ್ನು ತಡೆಯುವ ನಿಟ್ಟಿನಲ್ಲಿ, ಸಂತೋಷ್ ಹೆಗ್ಡೆ ಅವರ ನೇಮಕಾತಿಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ದೇಶಕ್ಕೆ ಸತ್ಯ ತಿಳಿಸಬೇಕು ಎಂದು ರಾಷ್ಟ್ರಪತಿಯವರನ್ನು ಒತ್ತಾಯಿಸಲಾಗಿದೆ.

​ಎರಡನೆಯ ಬೇಡಿಕೆಯಾಗಿ, ಸಂತೋಷ್ ಹೆಗ್ಡೆ ಅವರು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಅವರು ಭಾಗಿಯಾಗಿದ್ದ ಎಲ್ಲಾ ತೀರ್ಪುಗಳು ಮತ್ತು ಆದೇಶಗಳನ್ನು ಸಮಗ್ರವಾಗಿ ಪರಿಶೀಲನೆಗೆ ಒಳಪಡಿಸಬೇಕು ಎಂದು ಆಗ್ರಹಿಸಲಾಗಿದೆ. ಅದರಲ್ಲೂ ವಿಶೇಷವಾಗಿ, ಸಂವಿಧಾನದ ಆಶಯಗಳು, ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಅವರ ನ್ಯಾಯಾಂಗ ದೃಷ್ಟಿಕೋನದ ಬಗ್ಗೆ ಸೂಕ್ತ ಕಾನೂನು ಪರಿಶೀಲನೆ ನಡೆಸಿ ಸಾರ್ವಜನಿಕ ಹಿತಾಸಕ್ತಿಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

​ಅಡಿಗಡಿಗೆ ಸಂವಿಧಾನವನ್ನು ಅವಮಾನಿಸುತ್ತಿರುವ ಸಂತೋಷ್ ಹೆಗ್ಡೆ ಅವರು, ಸಾಮಾನ್ಯ ಜನರ ಬೆವರಿನ ಹಣದಿಂದ ನೀಡಲಾಗುತ್ತಿರುವ ಪಿಂಚಣಿ ಪಡೆಯಲು ನೈತಿಕವಾಗಿ ಹಾಗೂ ಸಾಂವಿಧಾನಿಕವಾಗಿ ಅನರ್ಹರು. ಅವರು ತಕ್ಷಣವೇ ತಮ್ಮ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನಿಲ್ಲಿಸಿ ದೇಶದ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಅವರಿಗೆ ನೀಡಲಾಗುವ ಪಿಂಚಣಿಯನ್ನು ಶಾಶ್ವತವಾಗಿ ರದ್ದುಪಡಿಸಬೇಕು ಎಂದು ಆಗ್ರಹಿಸಿರುವ ‘ಜಾಗೃತ ಕರ್ನಾಟಕ’ ಸಂಘಟನೆಯು, ಈ ಮನವಿ ಪತ್ರದ ಪ್ರತಿಯನ್ನು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೂ ರವಾನಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...