ಬಸವಣ್ಣನವರ ವಿರುದ್ಧ ಅವಹೇಳನಕಾರಿ ಹೇಳಿಕೆ: ಜಮಾಅತೆ ಇಸ್ಲಾಮೀ ಹಿಂದ್ ತೀವ್ರ ಖಂಡನೆ

Date:

12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ವಿರುದ್ಧ ಇತ್ತೀಚೆಗೆ ಆಡಿರುವ ಅವಹೇಳನಕಾರಿ ಮಾತುಗಳು ಹಾಗೂ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನವನ್ನು ಜಮಾಅತೆ ಇಸ್ಲಾಮೀ ಹಿಂದ್ (ಜೆಐಎಚ್) ಕರ್ನಾಟಕ ರಾಜ್ಯಾಧ್ಯಕ್ಷ ಡಾ. ಮುಹಮ್ಮದ್ ಸಾದ್ ಬೆಳಗಾಮಿ ತೀವ್ರವಾಗಿ ಖಂಡಿಸಿದ್ದಾರೆ.

- Advertisement -

​ಶುಕ್ರವಾರ ಪ್ರಕಟಣೆ ನೀಡಿರುವ ಅವರು, ‘ವಿವಿಧ ಸಂಸ್ಕೃತಿ, ಧರ್ಮ ಮತ್ತು ಸಮುದಾಯಗಳನ್ನು ಪರಸ್ಪರ ಗೌರವದಿಂದ ಕಾಣುವುದೇ ಭಾರತದ ನೈಜ ಪರಂಪರೆಯಾಗಿದೆ. ವಾಕ್ ಸ್ವಾತಂತ್ರ್ಯವನ್ನು ಜವಾಬ್ದಾರಿಯಿಂದ ಬಳಸಬೇಕು. ಬೇರೆಯವರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಲು ಅಥವಾ ಗೌರವಾನ್ವಿತ ಮಹನೀಯರಿಗೆ ಅವಮಾನ ಮಾಡಲು ಅದನ್ನು ಬಳಸಬಾರದು’ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಸ್ಕೃತದ ಗೋಡೆ ಕೆಡವಿ ಕನ್ನಡ ಕಟ್ಟಿದ ಕವಿ ಕನಕದಾಸ!

ಕೇವಲ ಭಕ್ತರಾಗಿ ಮಾತ್ರವಲ್ಲದೆ, ಅಡುಗೆಮನೆಯ ಬೀಸುವ ಕಲ್ಲಿನಿಂದ ಹಿಡಿದು ಹೊಲದ ರಾಗಿಯವರೆಗೆ ನಮ್ಮದೇ ನೆಲದ ಉದಾಹರಣೆಗಳ ಮೂಲಕ ಕನ್ನಡ ಭಾಷೆಗೆ ಆಧ್ಯಾತ್ಮಿಕ ಮತ್ತು ಸಾಹಿತ್ಯಿಕ ಘನತೆಯನ್ನು ತಂದುಕೊಟ್ಟ ಮಹಾನ್ ಕ್ರಾಂತಿಕಾರಿ ಕವಿ ಕನಕದಾಸರು. ಭಾಷೆಯೊಂದು...

ಕೊರೆಯುವ ಚಳಿಯಲ್ಲೂ ಮೊಳಗಿದ ಗುಲಾಬಿ ಧ್ವನಿ, ಆಶಾ ಕಾರ್ಯಕರ್ತೆಯರ...

ಒಂದೆಡೆ ಭೋರ್ಗರೆಯುವ ಮಳೆ, ಮತ್ತೊಂದೆಡೆ ಮೈಕೊರೆಯುವ ಚಳಿ. ಪ್ರಕೃತಿಯ ಈ ಪ್ರತಿಕೂಲ ಪರಿಸ್ಥಿತಿಯನ್ನೂ ಲೆಕ್ಕಿಸದೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಗುಲಾಬಿ ಸೀರೆಧಾರಿ ಮಹಿಳೆಯರು ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿದ್ದಾರೆ. ಅವರ ಹೋರಾಟವನ್ನು ನೋಡಿದಾಗ...

ಬಿರುಕು ಬಿಟ್ಟಿದ್ದ ‘ಕೈ’ ಕೋಟೆಗೆ ಒಗ್ಗಟ್ಟಿನ ಶಕ್ತಿ: ರಾಜಸ್ಥಾನ...

ಗೋವಿಂದ್ ಡೋಟಸರ ಮತ್ತು ಟೀಕಾರಾಮ್ ಜುಲ್ಲಿ ಅವರ ನಡುವಣ ಬಾಂಧವ್ಯ ಕೇವಲ ರಾಜಕೀಯ ಅನಿವಾರ್ಯತೆಯಲ್ಲ; ಅದು ಪರಸ್ಪರ ನಂಬಿಕೆ ಮತ್ತು ಪೂರಕ ಸಾಮರ್ಥ್ಯಗಳ ಸಮ್ಮಿಲನವಾಗಿದೆ. ಡೋಟಸರ ಅವರಲ್ಲಿರುವ ಆಕ್ರಮಣಕಾರಿ ಸಂಘಟನಾ ಶೈಲಿ, ಪ್ರಖರ...

​‘ಪ್ರತಿಯೊಬ್ಬ ಮನುಷ್ಯನಿಗೂ ಗೌರವ ನೀಡಬೇಕೆಂದು ಇಸ್ಲಾಂ ಧರ್ಮ ಬೋಧಿಸುತ್ತದೆ. ಅಲ್ಲದೆ, ಇತರರು ಪೂಜಿಸುವ ದೇವರು, ನಂಬಿಕೆ ಮತ್ತು ಗೌರವಾನ್ವಿತ ವ್ಯಕ್ತಿಗಳನ್ನು ನಿಂದಿಸುವುದನ್ನು ಇಸ್ಲಾಂ ಸಂಪೂರ್ಣವಾಗಿ ವಿರೋಧಿಸುತ್ತದೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

​ಸಮಾಜಕ್ಕೆ ಬಸವಣ್ಣನವರ ಕೊಡುಗೆ ಅಪಾರವಾದುದು ಎಂದು ಸ್ಮರಿಸಿರುವ ಅವರು, ಸಮಾನತೆ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಬಸವಣ್ಣನವರು ಜಾತಿ ಭೇದವನ್ನು ಹೋಗಲಾಡಿಸಿ ಸಮ ಸಮಾಜ ಕಟ್ಟಲು ಶ್ರಮಿಸಿದ್ದರು ಎಂದು ತಿಳಿಸಿದ್ದಾರೆ.

​‘ಭಾರತದಂತಹ ದೊಡ್ಡ ದೇಶದಲ್ಲಿ ಭಿನ್ನಾಭಿಪ್ರಾಯಗಳಿರುವುದು ಸಹಜ. ಆದರೆ ಅವುಗಳನ್ನು ಪರಸ್ಪರ ಗೌರವ ಮತ್ತು ಚರ್ಚೆಯ ಮೂಲಕ ಬಗೆಹರಿಸಿಕೊಳ್ಳಬೇಕೇ ಹೊರತು, ಅವಮಾನ ಅಥವಾ ಅಪಹಾಸ್ಯದ ಮೂಲಕವಲ್ಲ. ಜನರು ಸಮಾಜ ಒಡೆಯುವ ಮಾತುಗಳಿಗೆ ಕಿವಿಗೊಡದೆ, ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಬೇಕು’ ಎಂದು ಡಾ. ಬೆಳಗಾಮಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ವಿಮಾನ ಅಪಘಾತದ ಅಣಕು ಕಾರ್ಯಾಚರಣೆ: 117 ಪ್ರಯಾಣಿಕರ ರಕ್ಷಣೆಗೆ ವಿವಿಧ ಇಲಾಖೆಗಳ ಸಮನ್ವಯ

ವಿಮಾನ ಅಪಘಾತದ ಸಂದರ್ಭದಲ್ಲಿ ತುರ್ತು ರಕ್ಷಣಾ ಕಾರ್ಯಾಚರಣೆ ಹಾಗೂ ವಿವಿಧ ಇಲಾಖೆಗಳ...

ಬೀದರ್‌ | ಸಮಾನತೆ ಸಂದೇಶ ಸಾರಿದ ಕನಕದಾಸರು: ಸಂಸದ ಸಾಗರ ಖಂಡ್ರೆ

ಜಾತಿ, ಮತ, ಧರ್ಮಗಳ ಭೇದಭಾವಗಳನ್ನು ಮೀರಿ ತಮ್ಮ ಕೀರ್ತನೆಗಳು, ಮುಂಡಿಗೆಗಳು ಹಾಗೂ...

ತಮಿಳುನಾಡು | ಮಹಿಳಾ ಜಿಲ್ಲಾಧಿಕಾರಿಗೆ ಲೈಂಗಿಕ ಕಿರುಕುಳ ಆರೋಪ: ಟಿವಿಕೆ ಶಾಸಕ ಅರುಳ್ ವಿಘ್ನೇಶ್ ಬಂಧನ

ಮಹಿಳಾ ಜಿಲ್ಲಾಧಿಕಾರಿಗೆ (ಐಎಎಸ್ ಅಧಿಕಾರಿ) ಲೈಂಗಿಕ ಕಿರುಕುಳ ನೀಡಿದ ಮತ್ತು ಅನುಚಿತವಾಗಿ...