ಕನಿಷ್ಠ ವೇತನದ ಅಂತಿಮ ಅಧಿಸೂಚನೆ ಮರುಪರಿಶೀಲನೆ ಬೇಡ: ಸಿಎಂಗೆ ಜೆಸಿಟಿಯು ಮನವಿ

Date:

“ರಾಜ್ಯದಲ್ಲಿ ಕನಿಷ್ಠ ವೇತನದ ಅಂತಿಮ ಅಧಿಸೂಚನೆಯನ್ನು ಮರುಪರಿಶೀಲಿಸಬಾರದು” ಎಂದು ಟ್ರೇಡ್ ಯೂನಿಯನ್‌ಗಳ ಜಂಟಿ ಸಮಿತಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಶನಿವಾರ ಮನವಿ ಪತ್ರ ಸಲ್ಲಿಸಿದೆದೆ. ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್ ವರಲಕ್ಷ್ಮಿ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿ ಅವರರನ್ನು ಗೃಹಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಈ ವಿಚಾರವಾಗಿ ಚರ್ಚೆ ನಡೆಸಿದೆ.

- Advertisement -

ಇತ್ತೀಚೆಗೆ ನಡೆದ ಸಚಿವ ಸಂಪುಟದಲ್ಲಿ ಕನಿಷ್ಠ ವೇತನ ಪರಿಷ್ಕೃರಣೆಯನ್ನು ನಡೆಸಲು ಮುಂದಾಗಿರುವುದು ಆಘಾತ ಉಂಟು ಮಾಡಿದೆ. ಕನಿಷ್ಠ ವೇತನದ ಅಂತಿಮ ಅಧಿಸೂಚನೆಯನ್ನು ಮರುಪರಿಶೀಲಿಸುವ ಅಥವಾ ಹಿಂಪಡೆಯುವ ಯಾವುದೇ ಕ್ರಮವನ್ನು ನಿಲ್ಲಿಸಿ ಕಾರ್ಮಿಕರ ಪರವಾಗಿ ಸರ್ಕಾರ ನಿಲ್ಲಬೇಕು ಎಂದು ಮುಖ್ಯಮಂತ್ರಿಗಳಿಗೆ ನೀಡಿರುವ ಮನವಿ ಪತ್ರದಲ್ಲಿ ಕೋರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನೂ ಓದಿ: ಮಂಗಳೂರು | ಪಿಎಂ ಸ್ವನಿಧಿ ಸಾಲ ಯೋಜನೆ ಮುಂದುವರಿಸಲು ಒತ್ತಾಯಿಸಿ ಸಿಐಟಿಯು ಪ್ರತಿಭಟನೆ

ದಶಕದ ಬಳಿಕ ಪರಿಷ್ಕರಣೆ:

“ರಾಜ್ಯದಲ್ಲಿ 2017-18 ರಿಂದಲೇ ಕನಿಷ್ಠ ವೇತನ ಪರಿಷ್ಕರಣೆಯು ಬಾಕಿ ಉಳಿದಿತ್ತು. ದೀರ್ಘಕಾಲದ ಬಳಿಕ 39 ನಿಗದಿಪಡಿತ ಉದ್ಯೋಗಗಳ ವೇತನವನ್ನು ಸುಮಾರು 8 ವರ್ಷಗಳ ನಂತರ ಪರಿಷ್ಕರಿಸಲಾಗಿದೆ. ಈ ವಿಳಂಬವು ಕನಿಷ್ಠ ವೇತನ ಕಾಯ್ದೆ ಮತ್ತು ಸುಪ್ರೀಂ ಕೋರ್ಟ್ ನಿರ್ದೇಶನಗಳ ಉಲ್ಲಂಘನೆಯಾಗಿದೆ. ಅಲ್ಲದೆ, ಮಾಲೀಕರು ವಾದಿಸುತ್ತಿರುವಂತೆ ವೇತನದ ಹೆಚ್ಚಳವು ಶೇ. 60ರಷ್ಟಿಲ್ಲ, ಬದಲಿಗೆ ಕೇವಲ ಶೇ. 40 ರಷ್ಟಿದೆ” ಎಂದು ಪತ್ರದಲ್ಲಿ ಸ್ಪಷ್ಟಪಡಿಸಲಾಗಿದೆ.

ಕನಿಷ್ಠ ವೇತನ

“ಈ ವೇತನ ಪರಿಷ್ಕರಣೆಯನ್ನು ಅತ್ಯಂತ ವೈಜ್ಞಾನಿಕವಾಗಿ ಮಾಡಲಾಗಿದೆ ಎಂದು ಸಂಘಟನೆಗಳು ತಿಳಿಸಿವೆ. ಏಪ್ರಿಲ್ 2025ರಲ್ಲಿ ಕರಡು ಅಧಿಸೂಚನೆ ಹೊರಡಿಸಿ (ಪ್ರಸ್ತಾವಿತ ದರಗಳು: ರೂ. 19,300 ರಿಂದ ರೂ. 31,114) ಆಕ್ಷೇಪಣೆಗಳಿಗೆ ಅವಕಾಶ ನೀಡಲಾಗಿತ್ತು. 15ನೇ ಭಾರತೀಯ ಕಾರ್ಮಿಕ ಸಮ್ಮೇಳನದ (1956) ಮಾನದಂಡಗಳ ಆಧಾರದ ಮೇಲೆ ಬೆಲೆಗಳನ್ನು ಲೆಕ್ಕಹಾಕಲಾಗಿದ್ದು, ಇದಕ್ಕೆ ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್‌ನ ಮಾನ್ಯತೆಯೂ ಇದೆ. ವೇತನ ಸಂಹಿತೆ 2019 ರ ಸೆಕ್ಷನ್ 69 ರ ಅಡಿಯಲ್ಲಿ ಇದನ್ನು ಕಾನೂನುಬದ್ಧವಾಗಿ ಜಾರಿಗೊಳಿಸಲಾಗಿದೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

citu1

1 ಕೋಟಿಗೂ ಹೆಚ್ಚು ಕುಟುಂಬಗಳಿಗೆ ಅನುಕೂಲ

“ಈ ಪರಿಷ್ಕರಣೆಯಿಂದಾಗಿ ಕೆಪಿಟಿಸಿಎಲ್‌ನಂತಹ ಪ್ರಮುಖ ಸಂಸ್ಥೆಗಳು, ಮಂಡಳಿಗಳು ಹಾಗೂ ಖಾಸಗಿ ಉದ್ಯೋಗದಾತರು ಈಗಾಗಲೇ ಹೊಸ ದರಗಳನ್ನು ಜಾರಿಗೆ ತಂದಿದ್ದಾರೆ. ಇದರಿಂದಾಗಿ ರಾಜ್ಯದ 1 ಕೋಟಿಗೂ ಹೆಚ್ಚು ಶ್ರಮಿಕ ವರ್ಗದ ಕುಟುಂಬಗಳ ಆದಾಯ ನೇರವಾಗಿ ಹೆಚ್ಚಲಿದ್ದು, ಜನರ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕತೆ ಸುಧಾರಿಸಲಿದೆ. ಸುಮಾರು 3.8 ಲಕ್ಷ ಗುತ್ತಿಗೆ/ಹೊರಗುತ್ತಿಗೆ ನೌಕರರಿಗೆ ವಾರ್ಷಿಕ ರೂ. 3,200 ಕೋಟಿ ವೆಚ್ಚವಾಗಲಿದ್ದು, ಇದು ರಾಜ್ಯದ ಬಜೆಟ್‌ಗೆ ಹೋಲಿಸಿದರೆ ಅತ್ಯಂತ ಅಲ್ಪ ಭಾಗವಾಗಿದೆ” ಎಂದು ಸಮಿತಿ ವಿವರಿಸಿದೆ.

“ಉದ್ಯೋಗದಾತರ ಮನವಿಗೆ ಸರ್ಕಾರ ಸ್ಪಂದಿಸಬಾರದು. ಈ ಕನಿಷ್ಠ ವೇತನ ಪರಿಷ್ಕರಣೆಯನ್ನು ಮರುಪರಿಶೀಲಿಸಲು ಮುಂದಾಗಬಾರದು” ಎಂದು ಐಎನ್‌ಟಿಯುಸಿ, ಎಐಟಿಯುಸಿ, ಸಿಐಟಿಯು, ಎಚ್‌ಎಂಎಸ್ ಸೇರಿದಂತೆ ಪ್ರಮುಖ ಕಾರ್ಮಿಕ ಸಂಘಟನೆಗಳ ಮುಖಂಡರು ಜಂಟಿ ಪತ್ರದ ಮೂಲಕ ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...