ಜೆಸಿಟಿಯು, ಎಸ್‌ಕೆಎಂ ನೇತೃತ್ವದಲ್ಲಿ ಮೇ 20ರಂದು ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ

Date:

ದುಡಿಯುವ ವರ್ಗದ ಮೇಲೆ ಪ್ರಹಾರ ನಡೆಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರಕಾರದ ನಡೆಯನ್ನು ವಿರೋಧಿಸಿ ಟ್ರೇಡ್ ಯೂನಿಯನ್ ಜಂಟಿ ಸಮಿತಿ (ಜೆಸಿಟಿಯು) ಮತ್ತು ಸಂಯುಕ್ತ ಕಿಸಾನ್‌ ಮೋರ್ಚಾ (ಎಸ್‌ ಕೆ ಎಂ)‌ ಜಂಟಿ ನೇತೃತ್ವದಲ್ಲಿ ಮೇ 20ರಂದು ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ.

- Advertisement -

ಬೆಂಗಳೂರು ಗಾಂಧಿ ಭವನದಲ್ಲಿ ಶನಿವಾರ ನಡೆದ ಮುಷ್ಕರದ ಅಂತಿಮ ತಯಾರಿ ಸಭೆಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಮಾಹಿತಿ ನೀಡಿದರು.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ದೇಶ ವ್ಯಾಪಿಯಾಗಿ ರೈತರು ಮತ್ತು ಕಾರ್ಮಿಕರು ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಹೋರಾಟಕ್ಕಿಳಿಯಲಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವೂ ಬಿಜೆಪಿ ತಂದಿದ್ದ ನೀತಿಗಳನ್ನೇ ಮುಂದುವರಿಸುತ್ತಿರುವುದರಿಂದ ಮತ್ತು ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಕೊಟ್ಟ ಮಾತುಗಳನ್ನೆಲ್ಲಾ ಮರೆತಿರುವುದರಿಂದ ರಾಜ್ಯ ಸರಕಾರದ ವಿರುದ್ಧವೂ ರೈತ – ಕಾರ್ಮಿಕರು ಸೇರಿ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

ಸಂಯುಕ್ತ ಹೋರಾಟ ಕರ್ನಾಟಕವು ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ – ಯುವಜನರ ಐಕ್ಯ ವೇದಿಕೆಯಾಗಿದ್ದು ಕರ್ನಾಟಕದಲ್ಲಿ ಸಾರ್ವತ್ರಿಕ ಮುಷ್ಕರಕ್ಕೆ ಮುಂದಾಳತ್ವ ನೀಡಲಿದೆ. ರಾಜ್ಯದ ನೂರಕ್ಕೂ ಎಚ್ಚು ಆಯಕಟ್ಟಿನ ಜಾಗಗಳಲ್ಲಿ
ಮೇ 20ರಂದು ದುಡಿಯುವ ಜನರ ಬೃಹತ ಸತ್ಯಾಗ್ರಹಗಳು ನಡೆಯಲಿವೆ. ಸರ್ಕಾರ ಯಾವುದೇ ರೀತಿಯ ಪ್ರತಿಕ್ರಿಯೆ ತೋರದಿದ್ದಲ್ಲಿ ರಸ್ತೆಗಿಳಿದು ಪ್ರತಿಭಟಿಸಲು ಮತ್ತು ಜೈಲ್‌ ಭರೋ ನಡೆಸಲು ತೀರ್ಮಾನಿಸಲಾಗಿದೆ.

ಮೇ 20ರಂದು ನಡೆಯುವ ಮುಷ್ಕರದಲ್ಲಿ ರಾಜ್ಯದ ಎಲ್ಲಾ ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ, ಯುವಜನ ಹಾಗೂ ನಾಗರಿಕ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿ ಯಶಸ್ಸುಗೊಳಿಸಬೇಕು” ಎಂದು ಮುಖಂಡರು ಮನವಿ ಮಾಡಿದರು.

ಪ್ರಮುಖ ಬೇಡಿಕೆಗಳು

1. 8 ಗಂಟೆ ಕೆಲಸದ ಅವಧಿ, ಖಾಯಂ ಕೆಲಸ, ಕೆಲಸಕ್ಕೆ ತಕ್ಕ ವೇತನ, ಸುರಕ್ಷತೆ, ಮುಷ್ಕರದ ಹಕ್ಕು, ಸಂಘ ಕಟ್ಟುವ ಹಕ್ಕು, ಇನ್ನಿತರ ಹಕ್ಕುಗಳನ್ನು ಇಲ್ಲವಾಗಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸಲು ಕೇಂದ್ರ ಸರ್ಕಾರ ಕಾರ್ಪೊರೇಟ್ ಬಂಡವಾಳದ ಪರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರದ್ದುಪಡಿಸಬೇಕು.

2. ಇವತ್ತಿನ ಬೆಲೆಗಳಿಗೆ ಅನುಗುಣವಾಗಿ ಎಲ್ಲಾ ಸಂಘಟಿತ, ಅಸಂಘಟಿತ, ಗುತ್ತಿಗೆ ಕಾರ್ಮಿಕರು ಮತ್ತು ಸ್ಕೀಂ ನೌಕರರಿಗೂ ರಾಷ್ಟ್ರವ್ಯಾಪಿ 26 ಸಾವಿರ ಹಾಗೂ ರಾಜ್ಯವ್ಯಾಪಿ 36 ಸಾವಿರ ಕನಿಷ್ಠ ವೇತನ ನಿಗದಿಪಡಿಸಬೇಕು.

3. ಗುತ್ತಿಗೆ, ಹೊರ ಗುತ್ತಿಗೆ, ನಿಗದಿತ ಅವಧಿಯ ಉದ್ಯೋಗ, ಅಪ್ರೆಂಟಿಸ್, ಟ್ರೈನಿ, ನ್ಯಾಪ್ಸ್ ಮುಂತಾದ ಹೆಸರಿನಲ್ಲಿ ಕಾರ್ಮಿಕರ ನೇಮಕ ನಿಲ್ಲಿಸಬೇಕು. ಗುತ್ತಿಗೆ, ಮುಂತಾದ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ತಕ್ಷಣ ಜಾರಿ ಮಾಡಬೇಕು.

4. ಕಟ್ಟಡ ಕಾರ್ಮಿಕರು, ಆಟೋ-ಟ್ಯಾಕ್ಸಿ ಚಾಲಕರು, ಮನೆಕೆಲಸಗಾರರು, ಗಿಗ್ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಟೈಲರ್‍ಗಳು, ಫೋಟೋಗ್ರಾಫರ್ಸ್, ಮೆಕ್ಯಾನಿಕ್ಸ್, ಬೀಡಿ-ಅಗರಬತ್ತಿ, ಹೆಂಚು ಕಾರ್ಮಿಕರು, ಮೀನುಗಾರರು, ಇನ್ನಿತರ ಎಲ್ಲಾ ಅಸಂಘಟಿತ ಕಾರ್ಮಿಕರು ಮತ್ತು ಕೃಷಿ-ತೋಟ ಕಾರ್ಮಿಕರು ಸೇರಿದಂತೆ ಎಲ್ಲಾ ವಿಭಾಗದ ಕಾರ್ಮಿಕರಿಗೆ ಕನಿಷ್ಟ ಮಾಸಿಕ ರೂ. 9,000 ಪಿಂಚಣಿ ಹಾಗೂ ಸಾಮಾಜಿಕ ಭದ್ರತೆಯನ್ನು ಖಾತ್ರಿಪಡಿಸಬೇಕು.

5. ಎನ್‍ಪಿಎಸ್ ಮತ್ತು ಯುಪಿಎಸ್ ರದ್ದುಪಡಿಸಿ, ಹಳೆಯ ಪೆನ್ಷನ್ ಸ್ಕೀಂ ನ್ನು ಮರುಸ್ಥಾಪಿಸಬೇಕು.

6. ಇಎಸ್‍ಐ, ಪಿ.ಎಫ್, ಬೋನಸ್ ಪಾವತಿಗಿರುವ ಎಲ್ಲಾ ವೇತನ ಮಿತಿಯನ್ನು ತೆಗೆಯಬೇಕು. ಗ್ರಾಚ್ಯುಟಿ ಪರಿಹಾರ 90 ದಿನಕ್ಕೆ ಹೆಚ್ಚಿಸಬೇಕು.

7. ಅರ್ಜಿ ಸಲ್ಲಿಸಿದ 45 ದಿನಗಳೊಳಗೆ ಕಾರ್ಮಿಕ ಸಂಘಗಳ ಕಡ್ಡಾಯ ನೋಂದಣಿ ಹಾಗು ಮಾನ್ಯತೆ ನೀಡಬೇಕೆಂಬ ILO ಸಮಾವೇಶದ C 87 ಮತ್ತು C 98 ನಿರ್ಣಯಗಳನ್ನು ಕೇಂದ್ರ ಸರ್ಕಾರ ಅನುಮೋದಿಸಬೇಕು.

8. ಕರ್ನಾಟಕವು ಸರ್ಕಾರವು ಕೊಟ್ಟ ಮಾತಿನಂತೆ ರೈತರ ಬದುಕಿಗೆ ಮಾರಕವಾಗಿರುವ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುಮೋದಿಸಲಾಗಿದ್ದ ಭೂ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಜಾನುವಾರು ತಿದ್ದುಪಡಿ ಕಾಯ್ದೆಗಳನ್ನು ಕೂಡಲೇ ರದ್ದುಪಡಿಸಬೇಕು. ಕೇಂದ್ರ ಸರ್ಕಾರವು ತರಲು ಹೊರಟಿರುವ “ಕೃಷಿ ಉತ್ಪನ್ನಗಳ ಮಾರುಕಟ್ಟೆ ರಾಷ್ಟ್ರೀಯ ಚೌಕಟ್ಟು ನೀತಿ”ಗಳನ್ನು ರಾಜ್ಯ ಸರ್ಕಾರವು ತಿರಸ್ಕರಿಸಿ ತೀರ್ಮಾನ ತೆಗೆದುಕೊಳ್ಳಬೇಕು.

9. ಎಲ್ಲಾ ಕೃಷಿ ಉತ್ಪನ್ನಗಳಿಗೆ MSP@ C2+50% ಅನುಪಾತದಲ್ಲಿ ಬೆಂಬಲ ಬೆಲೆ ಖಾತರಿಗೆ ಕಾನೂನು ರೂಪಿಸಬೇಕು. ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಮತ್ತು ವಿದ್ಯುತ್ ಮೇಲಿನ ಸಬ್ಸಿಡಿ ಹೆಚ್ಚಿಸಬೇಕು. ಸಮಗ್ರ ಸಾಲ ಮನ್ನಾ ಮತ್ತು ಬೆಳೆ ವಿಮೆ ಯೋಜನೆಗಳನ್ನು ಜಾರಿಗೆ ತರಬೇಕು. ಸಂಯುಕ್ತ ಕಿಸಾನ್ ಮೋರ್ಚ್ (SKM)ಗೆ ನೀಡಿದ ಲಿಖಿತ ಭರವಸೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಬೇಕು.

10. ವಿದ್ಯುತ್ ತಿದ್ದುಪಡಿ ಮಸೂದೆ-2022 ವಾಪಸ್ಸು ಪಡೆಯಬೇಕು. ವಿದ್ಯುತ್ ಖಾಸಗೀಕರಣ ಮತ್ತು ಸ್ಮಾರ್ಟ್ ಮೀಟರ್ ಅಳವಡಿಕೆ ನಿಲ್ಲಿಸಬೇಕು.

11. ಬಗರ್‌ ಹುಕುಂ ರೈತರ ದೀರ್ಘ ಕಾಲೀನ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಲು ಕ್ರಮಕೈಗೊಳ್ಳಬೇಕು. ಈ ಜಟಿಲ ಸಮಸ್ಯೆಯನ್ನು ಬಗೆಹರಿಸಲು ಉನ್ನತ ಮಟ್ಟದ ಸಭೆ ಕರೆಯಬೇಕು ಮತ್ತು ತಜ್ಞರ ಸಮಿತಿಯನ್ನು ರಚಿಸಬೆಕು.

12. ಬಲವಂತದ ಭೂಸ್ವಾಧೀನ ಕೈಬಿಡಬೇಕು. ಜನ್ನರಾಯಪಟ್ಟಣದಲ್ಲಿ ರೈತರ ಭೂ ಸ್ವಾಧೀನ ಮಾಡುವ ಪ್ರಕ್ರಿಯೆಯನ್ನು ಕೈಬಿಡಬೇಕು. ಜಿಂಡಾಲ್‌ ಕಂಪನಿಗೆ ನೀಡಿರುವ ಭೂಮಿಯನ್ನು ರದ್ದುಗೊಳಿಸಬೇಕು. ಪ್ಲಾಂಟರುಗಳು ಅಕ್ರಮ ಒತ್ತುವರಿಗಳನ್ನು ಅವರಿಗೇ ಗುತ್ತಿಗೆ ನೀಡುವ ತೀರ್ಮಾನ ಕೈಬಿಡಬೇಕು.

13. ಅರಣ್ಯ ಹಕ್ಕು ಕಾಯ್ದೆ (FRA)ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು. ಅರಣ್ಯ ನಿವಾಸಿಗಳನ್ನು ತೆರವುಗೊಳಿಸಲು ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡುವ ತಿದ್ದುಪಡಿಗಳನ್ನು ವಾಪಸ್ಸು ಪಡೆಯಬೇಕು.

14. ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಆಹಾರ, ಔಷಧಿಗಳು, ಕೃಷಿ ಸಾಮಾಗ್ರಿ ಮುಂತಾದ ಅಗತ್ಯ ವಸ್ತುಗಳ ಮೇಲಿನ ಜಿಎಸ್‍ಟಿ ತೆಗೆಯಬೇಕು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮೇಲಿನ ಕೇಂದ್ರೀಯ ಅಬಕಾರಿ ಸುಂಕ ಇಳಿಸಬೇಕು. ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಾರ್ವತ್ರೀಕರಣಗೊಳಿಸಿ ಆಹಾರ ಭದ್ರತೆಯನ್ನು ಖಾತ್ರಿಪಡಿಸಬೇಕು.

15. ಸಾರ್ವಜನಿಕ ಉದ್ದಿಮೆ, ನಿಗಮ ಮತ್ತು ಇಲಾಖೆಗಳನ್ನು ಖಾಸಗೀಕರಿಸುವ ‘ರಾಷ್ಟ್ರೀಯ ನಗದೀಕರಣ ಪೈಪ್‍ಲೈನ್ ಯೋಜನೆ’ಯನ್ನು ರದ್ದುಪಡಿಸಬೇಕು. ಆದಿವಾಸಿಗಳು, ರೈತರು, ಸ್ಥಳೀಯ ಸಮುದಾಯದ ಉನ್ನತಿಗೆ ಗಣಿಗಾರಿಕೆ ಲಾಭದ ಶೇ.50 ಪಾಲು ಬಳಕೆ ಖಾತ್ರಿಗೊಳಿಸಲು ಖನಿಜ ಮತ್ತು ಲೋಹಗಳ ಗಣಿಗಾರಿಕೆಯ ಕಾನೂನಿಗೆ ತಿದ್ದುಪಡಿ ಮಾಡಬೇಕು.

16. ಉದ್ಯೋಗದ ಹಕ್ಕನ್ನು ಮೂಲಭೂತ ಹಕ್ಕಾಗಿಸಬೇಕು. ಖಾಲಿಯಿರುವ ಹುದ್ದೆಗಳ ಭರ್ತಿ ಮಾಡಬೇಕು. ಉದ್ಯೋಗ ಸೃಷ್ಟಿ ಮಾಡಬೇಕು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಾರ್ಷಿಕ 200 ದಿನ ಕೆಲಸ, ದಿನಕ್ಕೆ ರೂ.600 ಕೂಲಿ ನಿಗದಿಪಡಿಸಬೇಕು. ನಗರ ಪ್ರದೇಶಕ್ಕೂ ವಿಸ್ತರಿಸಬೇಕು.

17. ಎಲ್ಲರಿಗೂ ಉಚಿತ ಶಿಕ್ಷಣದ ಹಕ್ಕು, ಆರೋಗ್ಯದ ಹಕ್ಕು, ನೀರು ಮತ್ತು ನೈರ್ಮಲ್ಯದ ಹಕ್ಕು ಹಾಗೂ ಎಲ್ಲರಿಗೂ ವಸತಿ ಖಾತ್ರಿಪಡಿಸಬೇಕು. ನೂತನ ಶಿಕ್ಷಣ ನೀತಿ-2020ನ್ನು ರದ್ದುಪಡಿಸಬೇಕು.

18. ಇ-ಶ್ರಮ್ ಪೋರ್ಟಲ್‍ನಲ್ಲಿ ನೊಂದಾಯಿಸಿದ ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಆರೋಗ್ಯ ಯೋಜನೆಗಳು, ಹೆರಿಗೆ ಸೌಲಭ್ಯಗಳು, ಜೀವ ಮತ್ತು ಅಂಗವೈಕಲ್ಯ ವಿಮೆ ನೀಡಬೇಕು ಹಾಗೂ ಇಎಸ್‍ಐ ಸೌಲಭ್ಯ ಸೇರಿದಂತೆ ಸಾಮಾಜಿಕ ಸುರಕ್ಷತೆ ಒದಗಿಸಬೇಕು. ಕಲ್ಯಾಣ ಮಂಡಳಿಗಳಿಗೆ ಬಜೆಟ್‍ನಲ್ಲಿ ಅನುದಾನ ನೀಡಬೇಕು.

19. ದೇಶದ ಅತೀ ದೊಡ್ಡ ಶ್ರೀಮಂತರ ಆಸ್ತಿ ಮೇಲೆ ಸಂಪತ್ತು ತೆರಿಗೆ, ಉತ್ತರಾಧಿಕಾರತ್ವ ತೆರಿಗೆ ವಿಧಿಸಬೇಕು. ಕಾರ್ಪೊರೇಟ್ ತೆರಿಗೆಯನ್ನು ಹೆಚ್ಚಿಸಿ ಸಂಪನ್ಮೂಲ ಕ್ರೋಡೀಕರಣ ಮಾಡಬೇಕು.

20. ಸಂವಿಧಾನದ ಆಶಯಗಳ ಮೇಲಿನ ದಾಳಿ ನಿಲ್ಲಿಸಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯ, ಧಾರ್ಮಿಕ ಸ್ವಾತಂತ್ರ್ಯ, ವೈವಿಧ್ಯಮಯ ಸಂಸ್ಕೃತಿಗಳು, ಭಾಷೆಗಳು, ಸಮಾನತೆ ಮತ್ತು ಒಕ್ಕೂಟ ತತ್ವವನ್ನು ರಕ್ಷಿಸಬೇಕು.

21. ದಿನದ ಕೆಲಸದ ಅವಧಿ 12 ಗಂಟೆಗೆ ವಿಸ್ತರಣೆ ಹಾಗೂ ರಾತ್ರಿ ಪಾಳಿಯಲ್ಲಿ ಮಹಿಳಾ ಕಾರ್ಮಿಕರ ದುಡಿಮೆಗೆ ಅವಕಾಶ ನೀಡಿ ಕಾರ್ಖಾನೆ ಕಾಯ್ದೆಗೆ ಮಾಡಿರುವ ತಿದ್ದುಪಡಿ ಹಾಗೂ ನಿಶ್ಚಿತ ಕಾಲಾವಧಿ ಕಾರ್ಮಿಕ ನೇಮಕಕ್ಕೆ ಅವಕಾಶ ನೀಡುವ ಮಾದರಿ ಸ್ಥಾಯಿ ಆದೇಶಗಳ ತಿದ್ದುಪಡಿಗಳನ್ನು ರಾಜ್ಯ ಸರ್ಕಾರ ವಾಪಸ್ಸು ಪಡೆಯಬೇಕು.

22. ರಾಜ್ಯ ಸರ್ಕಾರವು ಕಾರ್ಮಿಕರ ನಿವೃತ್ತಿ ವಯಸ್ಸು 60 ವರ್ಷವನ್ನು ಸಮರ್ಪಕವಾಗಿ ಜಾರಿ ಮಾಡಬೇಕು ಹಾಗೂ ಎಲ್ಲಾ ವಿಭಾಗದ ದುಡಿಯುವ ಮಹಿಳೆಯರಿಗೆ ವಾರ್ಷಿಕ 12 ದಿನ ವೇತನ ಸಹಿತ ಮುಟ್ಟಿನ ರಜೆ ನೀಡಬೇಕು.

23. ಐಟಿ ಕಂಪನಿಗಳಿಗೆ ಸ್ಥಾಯಿ ಆದೇಶಗಳ ಕಾಯಿದೆಯಿಂದ ನೀಡಿರುವ ವಿನಾಯಿತಿ ರದ್ದುಪಡಿಬೇಕು. ಕಾನೂನುಬದ್ಧ ಸೇವಾ ನಿಯಮಗಳನ್ನು ಜಾರಿಗೆ ತರಬೇಕು.

24. ಬೆಂಗಳೂರಿನಲ್ಲಿ ಪ್ರತಿಭಟನೆ ಮತ್ತು ಮೆರವಣಿಗೆಗೆ ಇರುವ ನಿರ್ಬಂಧವನ್ನು ಹಿಂಪಡೆಯಬೇಕು.

25. ಕನಿಷ್ಟ ಕೂಲಿ ಮಾಸಿಕ 35,000 ರೂ. ನೀಡಬೇಕು. 

ಸುದ್ದಿಗೋಷ್ಠಿಯಲ್ಲಿ ಮುಷ್ಕರದ ಸಂಯೋಜಕರಾದ ರೈತ ಮುಖಂಡ ಬಡಗಲಪುರ ನಾಗೇಂದ್ರ, ಕೆ.ವಿ.ಭಟ್‌, ಎಸ್‌.ವರಲಕ್ಷ್ಮಿ, ನೂರ್‌ ಶ್ರೀಧರ್‌, ಟಿ.ಯಶವಂತ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....