‘ಜೆಡಿಎಸ್ ಮಾಡ್ತಿರೋದು ಪಾದಯಾತ್ರೆ ಅಲ್ಲ, ಎಚ್‌ಡಿಕೆ ಪಾಪಕ್ಕೆ ಪ್ರಾಯಶ್ಚಿತ ಯಾತ್ರೆ’: ಸಚಿವ ಎಚ್.ಸಿ ಬಾಲಕೃಷ್ಣ ವಾಗ್ದಾಳಿ

Date:

ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿಪಕ್ಷ ಜೆಡಿಎಸ್-ಬಿಜೆಪಿ ನಡುವೆ ರಾಜಕೀಯ ಸಮರ ತೀವ್ರಗೊಂಡಿದೆ. ಬಿಡದಿ ಟೌನ್‌ಶಿಪ್ ವಿರೋಧಿಸಿ ಜೆಡಿಎಸ್ ಪಾದಯಾತ್ರೆ ಆಯೋಜಿಸುತ್ತಿದೆ. ಇದನ್ನು ಕಟುವಾಗಿ ಟೀಕಿಸಿರುವ ಸಚಿವ ಎಚ್.ಸಿ. ಬಾಲಕೃಷ್ಣ, “ಇದು ರಾಜಕೀಯ ಪಾದಯಾತ್ರೆ ಅಲ್ಲ; ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ತಾವೇ ಮಾಡಿದ ಪಾಪಕ್ಕೆ ಮಾಡಿಕೊಳ್ಳುತ್ತಿರುವ ಪ್ರಾಯಶ್ಚಿತ ಯಾತ್ರೆ” ಎಂದು ವ್ಯಂಗ್ಯವಾಡಿದ್ದಾರೆ.

- Advertisement -

ಶನಿವಾರ ಮಾಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಾಲಕೃಷ್ಣ,

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಗಾಡ್ಗೀಳ್‌, ಕಸ್ತೂರಿ ರಂಗನ್ ವರದಿಗಳು ಹೇಳುವುದೇನು? ವಿರೋಧವೇಕೆ?

ಪಶ್ಚಿಮ ಘಟ್ಟವನ್ನು ಉಳಿಸಬೇಕೆಂಬ ಪರಿಸರದ ಕೂಗು ಒಂದು ಕಡೆ, ಜನವಸತಿ–ಕೃಷಿ–ಜೀವನೋಪಾಯದ ಆತಂಕ ಮತ್ತೊಂದು ಕಡೆ. ಗಾಡ್ಗೀಳ್‌ನ ಕಠಿಣ ಸಂರಕ್ಷಣಾ ಶಿಫಾರಸುಗಳಿಂದ ಕಸ್ತೂರಿರಂಗನ್ ವರದಿವರೆಗೆ—ಪಶ್ಚಿಮ ಘಟ್ಟದ ಭವಿಷ್ಯವನ್ನು ರೂಪಿಸಿದ ಎರಡು ಪ್ರಮುಖ ವರದಿಗಳು ಏನು...

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಬಿಡದಿ ಟೌನ್‌ಶಿಪ್‌ ಯೋಜನೆಯನ್ನು ಆರಂಭಿಸಿದ್ದೇ ಎಚ್.ಡಿ. ಕುಮಾರಸ್ವಾಮಿ. ತಾವು ತಂದ ಯೋಜನೆಯ ವಿರುದ್ಧವೇ ಈಗ ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ನಡೆಸುತ್ತಿರುವುದು ದುರಾದೃಷ್ಟಕರ. ಸಂಕಷ್ಟದಲ್ಲಿರುವ ರೈತರು ಪಾದಯಾತ್ರೆ ನಡೆಸಿದರೆ ಸರ್ಕಾರ ಬೆಂಬಲ ನೀಡುತ್ತದೆ. ಆದರೆ, ಅಧಿಕಾರದಲ್ಲಿದ್ದಾಗ ಯೋಜನೆ ತಂದು ಈಗ ಬೀದಿಗಿಳಿಯುತ್ತಿರುವ ಜೆಡಿಎಸ್-ಬಿಜೆಪಿ ನಾಯಕರ ನಡವಳಿಕೆ ಹಾಸ್ಯಾಸ್ಪದ” ಎಂದಿದ್ದಾರೆ.

ನೈಸ್‌ ರಸ್ತೆಗೆ ಟೋಲ್ ಕಟ್ಟಬೇಡಿ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, “ನೈಸ್ ಯೋಜನೆಗೆ ಚಾಲನೆ ಸಿಕ್ಕಿದ್ದೇ ಎಚ್.ಡಿ. ದೇವೇಗೌಡರ ಆಡಳಿತಾವಧಿಯಲ್ಲಿ. ದೇವೇಗೌಡರು ಅಂದು ಆ ಯೋಜನೆ ಮಾಡದಿದ್ದರೆ ಇವತ್ತು ಈ ಚರ್ಚೆಯೇ ಬರುತಿರಲಿಲ್ಲ. ಜವಾಬ್ದಾರಿಯುತ ಕೇಂದ್ರ ಸಚಿವರ ಸ್ಥಾನದಲ್ಲಿದ್ದುಕೊಂಡು ಜನರನ್ನು ಎತ್ತಿಕಟ್ಟುವುದು ಮತ್ತು ಗಲಾಟೆ ಸೃಷ್ಟಿಸುವುದು ಕ್ಷುಲ್ಲಕ ರಾಜಕಾರಣ. ಕಾನೂನುಬದ್ಧವಾಗಿ ಹೋರಾಡಲು ಅವರಿಗೆ ಹಕ್ಕಿದೆ; ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಕುಮಾರಸ್ವಾಮಿ ಅವರೇ ಹೊಣೆ” ಎಂದು ಎಚ್ಚರಿಸಿದ್ದಾರೆ.

“ಯಾವ ಸರ್ಕಾರದ ಅವಧಿಯಲ್ಲಿ ಏನೇನು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂಬುದರ ಸಂಪೂರ್ಣ ಮತ್ತು ಅಧಿಕೃತ ಮಾಹಿತಿಯನ್ನು ಒಳಗೊಂಡ ಜಾಹೀರಾತನ್ನು ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ವತಿಯಿಂದ ಶೀಘ್ರದಲ್ಲೇ ಸಾರ್ವಜನಿಕರ ಮುಂದೆ ಇಡಲಾಗುವುದು. ಪಾದಯಾತ್ರೆಗೆ ಸರ್ಕಾರದಿಂದ ಸಂಪೂರ್ಣ ಅನುಮತಿ ಮತ್ತು ಭದ್ರತೆ ನೀಡಲಾಗುತ್ತದೆ; ಅವರ ಪ್ರಾಯಶ್ಚಿತ ಯಾತ್ರೆಗೆ ಸರ್ಕಾರ ಯಾವುದೇ ಅಡ್ಡಿಪಡಿಸುವುದಿಲ್ಲ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೆಹರೂ-ಶಾಸ್ತ್ರಿ ಕಾಲದ ಕಟ್ಟಡಗಳಿಗೆ ಮೋದಿ ಬುಲ್ಡೋಝರ್: ಕೃಷಿ ಭವನ, ಶಾಸ್ತ್ರಿ ಭವನ ನೆಲಸಮಕ್ಕೆ ಸಿದ್ಧತೆ!

ಕೇಂದ್ರದ ನರೇಂದ್ರ ಮೋದಿ ಸರ್ಕಾರವು ನವದೆಹಲಿಯ ಲೂಟಿಯನ್ಸ್ ವಲಯದಲ್ಲಿ ಕೈಗೆತ್ತಿಕೊಂಡಿರುವ 'ಸೆಂಟ್ರಲ್...

ಇನ್ಸ್‌ಪೆಕ್ಟರ್‌ಗೆ ಜಾತಿ ನಿಂದನೆ: ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು

ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ಅವರ ವಿರುದ್ಧ ಜಾತಿ ನಿಂದನೆ ಮಾಡಿದ...

ಸೌಜನ್ಯ ಪ್ರಕರಣ: ಮರುತನಿಖೆ ಆದೇಶಕ್ಕೆ ‘ಕೊಂದವರು ಯಾರು?’ ಆಂದೋಲನ ಸ್ವಾಗತ, ದಕ್ಷ ಎಸ್‌ಐಟಿ ರಚನೆಗೆ ಆಗ್ರಹ

ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಸೌಜನ್ಯಳ ಭೀಕರ ಅತ್ಯಾಚಾರ ಮತ್ತು...