ಕೇರಳ ಮಾದರಿ ಮಾಟ ಮಂತ್ರದಿಂದಲೇ ಜೆಡಿಎಸ್ ಸೋತಿದ್ದು: ಬಂಡೆಪ್ಪ ಕಾಶಂಪೂರ

Date:

  • 30 ಜನರಲ್ಲಿ ಕೇವಲ ನಾಲ್ಕು ಜನ ಗೆದ್ದಿದ್ದಾರೆ
  • 2018ರ ಚುನಾವಣೆಯಲ್ಲಿ 37 ಜ‌ನ ಗೆದ್ದಿದ್ವಿ

ಕಳೆದ ಚುನಾವಣೆಯಲ್ಲಿ ಕೇರಳ ಮಾದರಿ ಮಾಟ ಮಂತ್ರದಿಂದಲೇ ನಾವು ಸೋತಿದ್ದು. 2018ರ ಚುನಾವಣೆಯಲ್ಲಿ ನಾವು 37 ಜ‌ನ ಗೆದ್ದಿದ್ವಿ. ಅದರಲ್ಲಿ ಏಳು ಜನ ಹೋಗಿ 30 ಜನ ಉಳಿದುಕೊಂಡಿದ್ವಿ. ಆದರೆ ಆ 30 ಜನರಲ್ಲಿ ಕೇವಲ ನಾಲ್ಕು ಜನ ಗೆದ್ದಿದ್ದಾರೆ. ಉಳಿದವರು ಸೋಲಲು‌ ಮಾಟ ಮಂತ್ರವೇ ಕಾರಣ ಎಂದು ಜೆಡಿಎಸ್‌ ಮಾಜಿ ಶಾಸಕ ಬಂಡೆಪ್ಪ ಕಾಶಂಪೂರ ಹೇಳಿದರು.

- Advertisement -

ಹುಬ್ಬಳ್ಳಿಯಲ್ಲಿ ನಡೆದ ಪಕ್ಷದ ಪುನಃಶ್ಚೇತನ ಪರ್ವದಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲಿಗೆ ಕಾರಣ ಎನು ಎಂಬುದನ್ನು ಹೀಗೆ ಬಿಚ್ಚಿಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಕಾಂಗ್ರೆಸ್‌ನವರಿಗೆ 135 ಸ್ಥಾನ ಬರುತ್ತದೆ ಎಂಬುದು ಗೊತ್ತಿರಲಿಲ್ಲ. ನಾವು 55 ಸ್ಥಾನ ಗೆಲ್ಲಬೇಕಿತ್ತು. ಮಾಟ ಮಂತ್ರ ಮಾಡಿರೋದು ನೂರಕ್ಕೆ ನೂರು ನಿಜವಾಗಿದ್ದು, ನಾವು ಹೀನಾಯವಾಗಿ ಸೋಲಲು ಕಾರಣವಾಯಿತು” ಎಂದರು.

“ಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಒಂದು ಸ್ಥಾನ ಕೂಡ ಗೆಲ್ಲಬಾರದು. ಕಾಂಗ್ರೆಸ್ ವಿರುದ್ದ ಅವರದೇ 35 ಶಾಸಕರು ದಿನ ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಇನ್ನೊಂದು 20 ರಿಂದ 25 ಜನ ಡೈಲಾಗ್ ಹೊಡೆದರೂ ಸರ್ಕಾರದ ಕಥೆ ಮುಗೀತು”ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಹೇಳಿದ್ದ ಹಸಿ ಸುಳ್ಳು-‘ನಾನೂ ತಿನ್ನುವುದಿಲ್ಲ, ತಿನ್ನಲೂ ಬಿಡುವುದಿಲ್ಲ’

ಜಿ ಟಿ ದೇವೇಗೌಡ ಮಾತನಾಡಿ, “ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕರ್ನಾಟಕದಿಂದ ಹಣ ಹೋಗುತ್ತಿದೆ. ಚುನಾವಣೆಗಾಗಿ ಲಂಚದ ದುಡ್ಡನ್ನು ತೆಗೆದುಕೊಂಡು ಹೋಗುತ್ತಿದ್ದಾರೆ. ಯಾರು ಏನೇ ಎನ್ನಲಿ ಮತ್ತೆ ಮೋದಿ‌ಯನ್ನು ಪ್ರಧಾನಿ‌ ಮಾಡೋಣ” ಎಂದು ​ ಸಮಾವೇಶದಲ್ಲಿ ಕರೆಕೊಟ್ಟರು.

“ಪಂಪಸೆಟ್​ಗಳಿಗೆ ಕರೆಂಟ್ ಇಲ್ಲ, ರೈತರ ಆತ್ಮಹತ್ಯೆ 6ನೇ ಗ್ಯಾರಂಟಿಯಾಗಿದೆ. ಕಾಂಗ್ರೆಸ್ ಸರ್ಕಾರ ಒಂದು ಕಾಳು ಅಕ್ಕಿಯನ್ನೂ ಕೂಡ ಕೊಟ್ಟಿಲ್ಲ. ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆ ಎಲ್ಲವೂ ಬೋಗಸ್​” ಎಂದು ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...