ಮುಟ್ಟಿನ ರಜೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲು ಹೈಕೋರ್ಟ್ ಆದೇಶ: ಜನವಾದಿ ಮಹಿಳಾ ಸಂಘಟನೆ ಸ್ವಾಗತ

Date:

ಮಹಿಳಾ ನೌಕರರು ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ ನೀಡುವ ಕುರಿತ ನೀತಿಗೆ ಕೂಡಲೇ ನಿಯಮಗಳನ್ನು ರೂಪಿಸಿ, ಕಿಂಚಿತ್ತೂ ವಿಳಂಬವಾಗದೆ ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ಜಾರಿ ಮಾಡಬೇಕೆಂದು ಸರ್ಕಾರಕ್ಕೆ ಆದೇಶ ನೀಡಿರುವ ಹೈಕೋರ್ಟ್‌ನ ತೀರ್ಪನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ (ಜೆಎಂಎಸ್) ರಾಜ್ಯ ಸಮಿತಿ ಸ್ವಾಗತಿಸಿದೆ.

- Advertisement -

ಬೆಳಗಾವಿ ಜಿಲ್ಲೆಯ ಹೋಟೆಲ್ ಉದ್ಯೋಗಿ ಚಂದ್ರವ್ವ ಹಣುಮಂತ ಗೋಕಾವಿ ಮುಟ್ಟಿನ ರಜೆ ನಿಯಮವನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಧಾರವಾಡ ಪೀಠ ತೀರ್ಪನ್ನು ಕಾಯ್ದಿರಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? BREAKING NEWS | ಮುಟ್ಟಿನ ರಜೆ ‘ಬದುಕುವ ಹಕ್ಕು’ – ನೀತಿ ಕಟ್ಟುನಿಟ್ಟಾಗಿ ಜಾರಿಗೊಳಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬುಧವಾರ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ, “ಕಾನೂನಿನ ದೃಷ್ಟಿಯಲ್ಲಿ ಪುರುಷರು ಮತ್ತು ಮಹಿಳೆಯರು ಸಮಾನರು. ಆದರೂ ಅವರು (ಮಹಿಳೆಯರು) ಜೈವಿಕವಾಗಿ ಭಿನ್ನರು. ಅಂತಹ ವ್ಯತ್ಯಾಸಗಳನ್ನು ಒಪ್ಪಿಕೊಳ್ಳುವುದು ಸಮಾನತೆಯನ್ನು ಉಲ್ಲಂಘಿಸಿದಂತೆ ಅಲ್ಲ. ವಿಶೇಷವಾಗಿ ಆರೋಗ್ಯ, ಘನತೆ ಮತ್ತು ದೈಹಿಕ ಸ್ವಾಯತ್ತತೆಗೆ ಸಂಬಂಧಿಸಿದ ವಿಷಯಗಳಿಗೆ ಬಂದಾಗ ಅದು ಸಮಾನತೆಯನ್ನು ಉಲ್ಲಂಘಿಸುವುದಲ್ಲ. ಬದಲಾಗಿ ಅದಕ್ಕೆ ಗಣನೀಯ ಅರ್ಥವಿದೆ” ಎಂದು ಹೇಳಿದೆ.

ಈ ತೀರ್ಪನ್ನು ಜನವಾದಿ ಮಹಿಳಾ ಸಂಘಟನೆ ಸ್ವಾಗತಿಸಿದ್ದು, “ಹೈಕೋರ್ಟ್ ಆದೇಶದಂತೆ ಸರ್ಕಾರವು ಕೂಡಲೇ ಯಾವುದೇ ರೀತಿಯಲ್ಲಿ ವಿಳಂಬ ಮಾಡದೆ ಕಟ್ಟುನಿಟ್ಟಾಗಿ ಮುಟ್ಟಿನ ರಜೆ ನೀತಿಯನ್ನು ಜಾರಿ ಮಾಡಲು ಕ್ರಮವಹಿಸಬೇಕು” ಎಂದು ಒತ್ತಾಯಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...