ರಾಜ್ಯದಲ್ಲಿರುವ ಅಂಗನವಾಡಿಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಮಾಡಲು ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ಧರಿಸಿದೆ. ರಾಜ್ಯಾದ್ಯಂತ 2,500 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲು ಮುಂದಾಗಿದೆ.
ಇಲಾಖೆಯು ನೇಮಕಾತಿ ಸಂಬಂಧ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಶೀಘ್ರದಲ್ಲೇ ಅರ್ಜಿ ಆಹ್ವಾನಿಸಲಿದ್ದು, ಆಸಕ್ತ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ರಾಜ್ಯಾದ್ಯಂತ, ಒಟ್ಟು 1,500 ಅಂಗನವಾಡಿ ಕಾರ್ಯಕರ್ತೆಯರು ಮತ್ತು 1,000 ಅಂಡನವಾಡಿ ಸಹಾಯಕಿರ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವವರು ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಅಂತೆಯೇ, ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಬಯಸುವವರು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರೇಕು ಎಂದು ಹೇಳಿದೆ.
ಅರ್ಜಿ ಸಲ್ಲಿಸುವವರ ವಯೋಮಿತಿಯು ಕನಿಷ್ಠ 19 ವರ್ಷಗಳಿಂದ ಗರಿಷ್ಠ 35 ವರ್ಷ ವಯಸ್ಸನ ಒಳಗಿನವರಾಗಿರಬೇಕು ಎಂದು ಇಲಾಖೆ ತಿಳಿಸಿದೆ.
ನೇಮಕಾತಿಯು ಮೆರಿಟ್ ಪಟ್ಟಿ ಮತ್ತು ಸಂದರ್ಶನ ಪ್ರಕ್ರಿಯೆಯ ಮೂಲಕ ನಡೆಯಲಿದೆ.
ಅರ್ಜಿ ಸಲ್ಲಿಸುವ ಆರಂಭದ ದಿನಾಂಕ ಮತ್ತು ಕಡೆಯ ದಿನಾಂಕವನ್ನು ಇಲಾಖೆಯು ಶೀಘ್ರದಲ್ಲಿಯೇ ಪ್ರಕಟಿಸಲಿದೆ.