ಶಾಲೆ, ಆಸ್ಪತ್ರೆಗಳ ಕ್ಯಾಂಟೀನ್‌ನಲ್ಲಿ ಜಂಕ್ ಫುಡ್ ನಿಷೇಧ; ಆರೋಗ್ಯ ಇಲಾಖೆ ಚಿಂತನೆ

Date:

ಸಾರ್ವಜನಿಕ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳು ಹಾಗೂ ಆಸ್ಪತ್ರೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲು ಆಯೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ಆರೋಗ್ಯ ಸಚಿವ ಯು.ಟಿ ಖಾದರ್ ತಿಳಿಸಿದ್ದಾರೆ.

- Advertisement -

ಮಂಗಳೂರಿನ ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯಲ್ಲಿ ನಡೆದ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್, “ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಜೀವನಶೈಲಿ ಆಧಾರಿತ ಕಾಯಿಲೆಗಳಿಗೆ ಜಂಕ್ ಫುಡ್ ಸೇವನೆಯೇ ಪ್ರಮುಖ ಕಾರಣವಾಗಿದೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಆದ್ದರಿಂದ, ಶಾಲೆ, ಆಸ್ಪತ್ರೆಗಳ ಆವರಣದಲ್ಲಿ ಜಂಕ್ ಫುಡ್ ನಿಷೇಧಕ್ಕೆ ಚಿಂತನೆ ನಡೆದಿದೆ. ಈ ನಿಷೇಧಾಜ್ಞೆಯನ್ನು ಪ್ರಾಯೋಗಿಕವಾಗಿ ಮೊದಲು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಜಾರಿಗೆ ತರಲಾಗುತ್ತದೆ. ನಂತರ, ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೂ ವಿಸ್ತರಿಸಲಾಗುತ್ತದೆ” ಎಂದಿದ್ದಾರೆ.

“ಮಾರುಕಟ್ಟೆಗೆ ಆಹಾರ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಮುನ್ನ ಗುಣಮಟ್ಟದ ಪರೀಕ್ಷೆಯನ್ನು ಕಡ್ಡಾಯವಾಗಿ ನಡೆಸಬೇಕು. ರಾಜ್ಯದಲ್ಲಿ ಆಹಾರ ಸುರಕ್ಷತಾ ನಿಯಮಗಳನ್ನು ಬಲಪಡಿಸಲು ಪ್ರಸ್ತುತ ಇರುವ ಪ್ರಯೋಗಾಲಯಗಳನ್ನು ಮೇಲ್ದರ್ಜೆಗೇರಿಸುವುದರ ಜೊತೆಗೆ ಬೆಂಗಳೂರಿನಲ್ಲಿ ಹೊಸ ಆಹಾರ ಪರೀಕ್ಷಾ ಪ್ರಯೋಗಾಲಯವನ್ನು ಸ್ಥಾಪಿಸಲಾಗುವುದು” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಯದ ಗುರುತುಗಳಿಲ್ಲವೆಂದು ಪೋಕ್ಸೋ ಸಂತ್ರಸ್ತೆಗೆ ಪರಿಹಾರ ನಿರಾಕರಿಸುವಂತಿಲ್ಲ: ಅಲಹಾಬಾದ್‌ ಹೈಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದ ವೈದ್ಯಕೀಯ ವರದಿಯಲ್ಲಿ ದೈಹಿಕ ಗಾಯಗಳ ಗುರುತುಗಳು ದಾಖಲಾಗಿಲ್ಲ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...