ಕಲಬುರಗಿ | ಬಿಜೆಪಿಗೆ ಸೋಲಿನ ಭೀತಿ ಶುರುವಾಗಿದೆ: ಪ್ರಕಾಶ್ ರಾಜ್

Date:

ಬಿಜೆಪಿಗೆ ಸೋಲಿನ ಭೀತಿ ಶುರುವಾಗಿದೆ. ಆದ್ದರಿಂದಲೇ ಡಿಲಿಮಿಟೇಷನ್‌ ಮತ್ತು ಎಸ್‌ಐಆರ್‌ ಪ್ರಕ್ರಿಯೆಗಳನ್ನು ಮುಂದಿಟ್ಟುಕೊಂಡು ಬರುತ್ತಿದ್ದಾರೆ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಆರೋಪಿಸಿದರು.

- Advertisement -

ನಗರದ ಎಸ್‌.ಎಂ. ಪಂಡಿತ್ ರಂಗಮಂದಿರದಲ್ಲಿ ಶನಿವಾರ ನಡೆದ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ‘ಧೀಮಂತ ನಾಯಕ’ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

“ಡಿಲಿಮಿಟೇಷನ್‌ ಹಾಗೂ ಎಸ್‌ಐಆರ್‌ ಹೆಸರಿನಲ್ಲಿ ದಕ್ಷಿಣ ಭಾರತದ ರಾಜಕೀಯ ಪ್ರಾತಿನಿಧ್ಯವನ್ನು ಕಡಿಮೆ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಡಿಲಿಮಿಟೇಷನ್‌ ಜಾರಿಯಾದರೆ ದಕ್ಷಿಣ ಭಾರತದ ರಾಜ್ಯಗಳ ಪ್ರಾತಿನಿಧ್ಯ ಕುಗ್ಗುವ ಸಾಧ್ಯತೆ ಇದೆ” ಎಂದರು.

“ಎಸ್‌ಐಆರ್‌ ಹೆಸರಿನಲ್ಲಿ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಕರ್ನಾಟಕದಲ್ಲಿ ಒಂದು ಕೋಟಿಗೂ ಅಧಿಕ ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಹೇಳಿದ ಅವರು, ಒಂದು ತಿಂಗಳಲ್ಲಿ ಒಂದೂವರೆ ಕೋಟಿ ಮತದಾರರನ್ನು ಪತ್ತೆಹಚ್ಚಲು ಸಾಧ್ಯವೇ? ಎಂದು ಚುನಾವಣಾ ಆಯೋಗವನ್ನು” ಪ್ರಶ್ನಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸಿದ ಘಟನೆಯನ್ನು ಪ್ರಸ್ತಾಪಿಸಿದ ಪ್ರಕಾಶ್ ರಾಜ್, “ಖರ್ಗೆ ಮಾತನಾಡಿದ ಸ್ಥಳವನ್ನು ಶುದ್ಧೀಕರಿಸುವ ಬದಲು ಅವರನ್ನು ಅವಾಚ್ಯವಾಗಿ ನಿಂದಿಸುವವರು ತಮ್ಮ ಬಾಯಲ್ಲಿ ಗೋಮೂತ್ರ ಹಾಕಿಕೊಂಡು ಶುದ್ಧೀಕರಿಸಿಕೊಳ್ಳಲಿ” ಎಂದು ವ್ಯಂಗ್ಯವಾಡಿದರು.

“ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಾವಿರಾರು ವರ್ಷಗಳ ನೋವು ಮತ್ತು ಶೋಷಣೆಯನ್ನು ಅನುಭವಿಸಿದ ಜನರಿಗೆ ಸಂವಿಧಾನದ ಮೂಲಕ ಹಕ್ಕು ಹಾಗೂ ರಕ್ಷಣೆ ಕಲ್ಪಿಸಿದರು. ಮನುವಾದಿ ವ್ಯವಸ್ಥೆಯಿಂದ ಜನರನ್ನು ರಕ್ಷಿಸಲು ಸಂವಿಧಾನ ರಚಿಸಿದ ಧೀಮಂತ ನಾಯಕ ಅಂಬೇಡ್ಕರ್” ಎಂದು ಹೇಳಿದರು.

ನೋಟು ಅಮಾನ್ಯೀಕರಣ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ನೀತಿಗಳನ್ನು ಟೀಕಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಮಹಾಪ್ರಭು’ ಎಂದು ಕರೆಯುವವರ ವಿರುದ್ಧ ವ್ಯಂಗ್ಯವಾಡಿದರು.

ಇದನ್ನು ಓದಿದ್ದೀರಾ? ಬೀದರ್‌ | ಅಂಬೇಡ್ಕರವರ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ : ಸಿದ್ರಾಮ ಸಿಂಧೆ

ಮಾಧ್ಯಮಗಳು, ಜನಪ್ರತಿನಿಧಿಗಳು, ಶಾಸಕರು, ಸಚಿವರು ಹಾಗೂ ವಿವಿಧ ಸಂಘ-ಸಂಸ್ಥೆಗಳು ತಮ್ಮ ಹೊಣೆಗಾರಿಕೆಯನ್ನು ಅರಿತುಕೊಳ್ಳಬೇಕು ಎಂದು ಪ್ರಕಾಶ್ ರಾಜ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಮಟಕಾ ಜೂಜಾಟದ ಮೇಲೆ ಚೌಕ ಪೊಲೀಸರ ದಾಳಿ; ₹1,120 ನಗದು ವಶ

ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಚೌಕ ಠಾಣೆ...

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಸುಳ್ಳು ಹೇಳಿಕೆ ಆರೋಪ: 6 CBI ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಕ್ರಮಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ಪ್ರಕರಣವೊಂದರಲ್ಲಿ ಸರ್ಕಾರದೊಂದಿಗೆ ನಡೆದ ಪತ್ರವ್ಯವಹಾರದ ಕುರಿತು ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ...

ಬೀದರ್‌ | ಕಲಾಪ್ರತಿಭೋತ್ಸವ: ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

ಮಕ್ಕಳು ಹಾಗೂ ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಕನ್ನಡ...