ಕಲಬುರಗಿ ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ (80) ಮಂಗಳವಾರ ತಡರಾತ್ರಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.
ಶ್ರೀಯುತರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಒಬ್ಬ ಪುತ್ರ ಇದ್ದಾರೆ. ಕುಟುಂಬದ ಮೂಲಗಳ ಪ್ರಕಾರ ಬುಧವಾರ ಸಂಜೆ ಹಫ್ತ್ ಗುಂಬಜ್ ಸಮೀಪದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಇಕ್ಬಾಲ್ ಅಹಮದ್ ಸರಡಗಿ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಕ್ಕೆ ಒಂದು ವರ್ಷ, ಸಮರ್ಥನೀಯವಲ್ಲದ ನಡೆ
1944ರ ಜೂನ್ 5ರಂದು ಮೊಹಮದ್ ಅಹಮದ್ ಸರಡಗಿ ಮತ್ತು ಗೌಹರ್ ಬೇಗಂ ದಂಪತಿಗೆ ಜನಿಸಿದ ಇಕ್ಬಾಲ್ ಅವರು ಕಲಬುರಗಿಯ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಪದವಿ ಹಾಗೂ ಹೈದರಾಬಾದ್‌ನ ಉಸ್ಮಾನಿಯಾ ವಿವಿಯಿಂದ ಕಾನೂನು ಪದವಿ ಪಡೆದಿದ್ದರು.
ಕಲಬುರಗಿ ಪಟ್ಟಣದಲ್ಲಿ ಪಾಲಿಕೆ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿದ ಸರಡಗಿ ಅವರು ಲೋಕಸಭಾ ಕ್ಷೇತ್ರದಲ್ಲಿ 1999 ಹಾಗೂ 2004ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸಂಸದರಾಗಿದ್ದರು. 2008ರಲ್ಲಿ ಕ್ಷೇತ್ರಗಳ ವಿಂಗಡಣೆಯ ನಂತರ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದರಿಂದ ಈ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಿದರು. ಇಕ್ಬಾಲ್ ಅವರು ಒಂದು ಬಾರಿ ವಿಧಾನ ಪರಿಷತ್‌ನ ಸದಸ್ಯರೂ ಆಗಿದ್ದರು.
Deeply pained by the passing away of my dear friend, senior Congress leader and Former Member of Parliament from Gulbarga, Shri Iqbal Ahmed Saradgi.
An Educationist and a philanthropist, he tirelessly worked towards the upliftment of the people of Gulbarga, and championed the… pic.twitter.com/THFj5p0L0R
— Mallikarjun Kharge (@kharge) May 22, 2024
ಮಾಜಿ ಸಂಸದರು ಹಾಗೂ ಹಿರಿಯ ನಾಯಕರಾದ ಶ್ರೀ ಇಕ್ಬಾಲ್ ಅಹ್ಮದ್ ಸರಡಗಿ ಅವರು ಇಂದು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬಸ್ಥರಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ… pic.twitter.com/4acFHjZkhD
— DK Shivakumar (@DKShivakumar) May 22, 2024
