ಕಲಬುರಗಿ | ಖರ್ಗೆ ಜೀವನ, ಹೋರಾಟ ಯುವಜನತೆಗೆ ಪ್ರೇರಣೆ: ಬಿ.ಕೆ. ಹರಿಪ್ರಸಾದ್

Date:

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೀವನ ಹಾಗೂ ಹೋರಾಟ ಯುವಜನತೆಗೆ ಪ್ರೇರಣೆಯಾಗಬೇಕು ಎಂದು ಮಾಜಿ ಸಚಿವ ಬಿ.ಕೆ. ಹರಿಪ್ರಸಾದ್ ಹೇಳಿದರು.

- Advertisement -

ನಗರದ ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಅಭಿನಂದನಾ ಗ್ರಂಥ ‘ಧೀಮಂತ ಧುರೀಣ’ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

‘ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಶಿಕ್ಷಣ, ಕಾರ್ಮಿಕ, ರೈಲ್ವೆ, ಕಂದಾಯ ಸೇರಿದಂತೆ ಹಲವು ಇಲಾಖೆಗಳ ಜವಾಬ್ದಾರಿ ನಿರ್ವಹಿಸಿ ಜನಪರವಾಗಿ ಹಾಗೂ ಶೋಷಿತರು, ದಲಿತರು ಮತ್ತು ಬಹುಜನರ ಪರವಾಗಿ ಸೇವೆ ಸಲ್ಲಿಸಿದ್ದಾರೆ’ ಎಂದರು.

‘ಸಾಮಾನ್ಯ ದಲಿತ ಕುಟುಂಬದಿಂದ ಬಂದ ಖರ್ಗೆ ಅವರು ಇಂದು ಎಐಸಿಸಿ ಅಧ್ಯಕ್ಷರಾಗಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಇಳಿವಯಸ್ಸಿನಲ್ಲಿಯೂ ಹೋರಾಟ ನಡೆಸುತ್ತಿರುವುದು ಹೆಮ್ಮೆಯ ಸಂಗತಿ’ ಎಂದು ಹೇಳಿದರು.

‘ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಖರ್ಗೆ ಅವರ ಕೊಡುಗೆ ಅಪಾರವಾಗಿದೆ. ಇಎಸ್‌ಐ ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳು ಹಾಗೂ ವಿವಿಧ ಸಾರ್ವಜನಿಕ ಸಂಸ್ಥೆಗಳ ಸ್ಥಾಪನೆಗೆ ಅವರು ಶ್ರಮಿಸಿದ್ದಾರೆ. ಐತಿಹಾಸಿಕ 371ಜೆ ಕಲಂ ಸೇರ್ಪಡೆಯಲ್ಲಿಯೂ ಅವರ ಹೋರಾಟ ಮಹತ್ವದ್ದಾಗಿದೆ. ಖರ್ಗೆ ಅವರ ಹೋರಾಟ ಮತ್ತಷ್ಟು ಬಲಗೊಳ್ಳಲು ಜಿಲ್ಲೆಯ ಹಾಗೂ ರಾಜ್ಯದ ಜನರು ಶಕ್ತಿ ತುಂಬಬೇಕು’ ಎಂದು ಕರೆ ನೀಡಿದರು.

‘ಧೀಮಂತ ಧುರೀಣ’ ಕೃತಿಯಲ್ಲಿ ದೇಶದ ವಿವಿಧ ಕ್ಷೇತ್ರಗಳ ಗಣ್ಯರು ಖರ್ಗೆ ಅವರ ಜೀವನ, ವ್ಯಕ್ತಿತ್ವ, ಸಾರ್ವಜನಿಕ ಸೇವೆ ಹಾಗೂ ಸೈದ್ಧಾಂತಿಕ ಮೌಲ್ಯಗಳ ಕುರಿತು ಬೆಳಕು ಚೆಲ್ಲಿದ್ದಾರೆ. ಈ ಪುಸ್ತಕವನ್ನು ರಾಜಕಾರಣಿಗಳು ಮಾತ್ರವಲ್ಲದೆ ವಿದ್ಯಾರ್ಥಿಗಳು ಹಾಗೂ ಯುವಜನರೂ ಓದಬೇಕು. ರಾಜಕೀಯ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಈ ಕೃತಿ ಪ್ರೇರಣೆಯಾಗಲಿದೆ’ ಎಂದು ಹರಿಪ್ರಸಾದ್ ಹೇಳಿದರು.

ಇದನ್ನು ಓದಿದ್ದೀರಾ? ಕಲಬುರಗಿ | ವಿದ್ಯಾರ್ಥಿಯಿಂದ ಪ್ರಯಾಣಿಕರಿಗೆ ಟಿಕೆಟ್ ವಿತರಣೆ: ಕಂಡಕ್ಟರ್ ಅಮಾನತು

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಹುಭಾಷಾ ನಟ ಪ್ರಕಾಶ್ ರಾಜ್, ಅನುವಾದಕಾರ ಪ್ರೊ. ಆರ್.ಕೆ. ಹುಡುಗಿ, ದಸಂಸ ಹಿರಿಯ ಮುಖಂಡ ಡಾ. ಡಿ ಜಿ ಸಾಗರ, ದತ್ತಾತ್ರೇಯ ಇಕ್ಕಳಕಿ,ಆರ್ ಜೆ ಶಟ್ಟಗಾರ, ಸಚಿವರು, ಶಾಸಕರು, ಸಾಹಿತ್ಯಾಸಕ್ತರು ಹಾಗೂ ಖರ್ಗೆ ಅವರ ಅಭಿಮಾನಿಗಳು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಿಮ್ಕಡಿ ಸೋಯಾ ಕೊಯ್ಲಕ ಮಂದಿ ಸಿಗ್ತಾರೇನ್?

ಹೊಲ್ದಾಗ್‌ ಸೋಯಾ ಕೊಯ್ಲಕ್‌ ಬಂದುದ, ನಮ್ಮೂರಾಗ ಕೂಲಿ ಮಂದಿ ಒಬ್ರೂ ಸಿಗ್ಲಾತಿಲ,...

ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ

ಕೇಂದ್ರ ಸರ್ಕಾರವು ಭಾರತೀಯ ವಾಯುಪಡೆಯ (IAF) ಮುಂದಿನ ಮುಖ್ಯಸ್ಥರನ್ನಾಗಿ ಏರ್ ಮಾರ್ಷಲ್...

ಸೈಬೀರಿಯಾ ಗುಹೆಯಲ್ಲಿ ಹಿಮಯುಗದ ರಹಸ್ಯ ಬಯಲು: 4 ಲಕ್ಷ ವರ್ಷಗಳ ಹಿಂದಿನ ಅಜ್ಞಾತ ಜೀವಿ ಪತ್ತೆ!

ದಕ್ಷಿಣ ಸೈಬೀರಿಯಾದ ಗುಹೆಗಳಲ್ಲಿ ದೊರೆತ ಸಾಮಾನ್ಯ ಮೂಳೆಯ ತುಣುಕುಗಳು ಇದೀಗ ವಿಕಾಸನದ...