‘ಇನ್ಮುಂದೆ ದ್ವೇಷ ಭಾಷಣ ಮಾಡುವುದಿಲ್ಲ’: ಹೈಕೋರ್ಟ್‌ಗೆ ಕಲ್ಲಡ್ಕ ಮುಚ್ಚಳಿಕೆ

Date:

ಇನ್ನು ಮುಂದೆ ಕಲ್ಲಡ್ಕ ಪ್ರಭಾಕರ ಭಟ್ ದ್ವೇಷ ಭಾಷಣ ಮಾಡುವುದಿಲ್ಲ ಎಂದು ಅವರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು ಕರ್ನಾಟಕ ಹೈಕೋರ್ಟ್‌ಗೆ ಮುಚ್ಚಳಿಕೆ ಕೊಟ್ಟಿದ್ದಾರೆ. ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ವಿಚಾರಣೆ ವೇಳೆ ಮುಚ್ಚಳಿಕೆ ಕೊಡಲಾಗಿದೆ.

- Advertisement -

ಉಪ್ಪಳಿಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಜನವಾದಿ ಮಹಿಳಾ ಸಂಘಟನೆಯ ಮುಖಂಡೆ ಈಶ್ವರಿ ಪದ್ಮುಂಜ ಅವರು ಕಲ್ಲಡ್ಕ ಪ್ರಭಾಕರ್ ವಿರುದ್ಧ ದೂರು ದಾಖಲಿಸಿದ್ದರು. ತಮ್ಮ ವಿರುದ್ಧದ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಕಲ್ಲಡ್ಕ ಪ್ರಭಾಕರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆರಂಭದಲ್ಲಿ, ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಞೆಯನ್ನೂ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರದಲ್ಲಿ ಜಿ.ಪಂ ತಾ.ಪಂ ಚುನಾವಣೆಯ ಕಾವು; AI ಪೋಸ್ಟರ್‌ಗಳಲ್ಲೂ...

ಚುನಾವಣೆಯ ದಿನಾಂಕ ಇನ್ನೂ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಅಂತಿಮ ಪಟ್ಟಿಯೂ ಸಿದ್ಧವಾಗಿಲ್ಲ. ಆದರೆ, ಗ್ರಾಮೀಣ ರಾಜಕಾರಣದಲ್ಲಿ ಮಾತ್ರ ಈಗಾಗಲೇ ಚುನಾವಣೆಯ ಕಾವು ಏರತೊಡಗಿದೆ. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ...

ಸ್ಟಿಂಗ್ ಆರೋಪದ ಸುತ್ತ ರಾಜಕೀಯ ಲೆಕ್ಕಾಚಾರ; ಸತ್ಯಾಸತ್ಯತೆ ಹೊಣೆಗಾರಿಕೆಯ...

ಸಿದ್ದರಾಮಯ್ಯ ಅವರ ನಿರಾಕರಣೆ, ಕುಮಾರಸ್ವಾಮಿ ಅವರ ಆರೋಪಗಳು, ಆರ್. ಅಶೋಕ್ ಅವರ ಹಣಕಾಸಿನ ಕುರಿತ ಹೇಳಿಕೆಗಳು ಮತ್ತು ಸರ್ಕಾರದ ತನಿಖೆಯ ಭರವಸೆ—ಇವೆಲ್ಲವೂ ಪ್ರಕರಣದ ವಿವಿಧ ಆಯಾಮಗಳನ್ನು ಪ್ರತಿನಿಧಿಸುತ್ತವೆ. ಆದರೆ ಇವುಗಳಲ್ಲಿ ಯಾವುದೂ ಸ್ವತಃ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಆ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ನ್ಯಾಯಾಲಯದಲ್ಲಿ ದೂರುದಾರೆಯ ಪರ ಹಿರಿಯ ವಕೀಲ ಎಸ್‌ ಬಾಲನ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು ವಿಚಾರಣೆ ನಡೆಸಿದೆ.

ವಿಚಾರಣೆ ವೇಳೆ ವಾದ ಮಂಡಿಸಿದ ಬಾಲನ್, “ಕಲ್ಲಡ್ಕ ಪ್ರಭಾಕರ ಭಟ್ ನಿರಂತರವಾಗಿ ಒಂದು ಸಮುದಾಯದ ವಿರುದ್ಧ ದ್ವೇಷಭಾಷಣ ಮಾಡುತ್ತಿದ್ದಾರೆ. ನ್ಯಾಯಾಲಯ ನೀಡಿರುವ ರಕ್ಷಣೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ” ಎಂದು ವಾದಿಸಿದರು.

“ಸಮಾಜದಲ್ಲಿ ಸೌಹಾರ್ದತೆ ಮತ್ತು ಸಹೋದರತ್ವಕ್ಕೆ ಧಕ್ಕೆ ತರುವ ರೀತಿಯ ಭಾಷಣಗಳನ್ನು ಅವರು ಪದೇ ಪದೇ ಮಾಡುತ್ತಿದ್ದಾರೆ. ಅವರ ವಿರುದ್ಧ ಈಗಾಗಲೇ 12 ಎಫ್‌ಐಆರ್‌ಗಳು ದಾಖಲಾಗಿವೆ. ತಡೆಯಾಜ್ಞೆ ಇದ್ದರೂ ವಿವಾದಾತ್ಮಕ ಹೇಳಿಕೆಗಳು ಮುಂದುವರಿದಿವೆ” ಎಂದು ಬಾಲನ್ ಅವರು ನ್ಯಾಯಾಲಯದ ಗಮನಕ್ಕೆ ತಂದರು.

ಈ ಲೇಖನ ಓದಿದ್ದೀರಾ?: ಪ್ರಜಾಪ್ರಭುತ್ವ ದಮನಕ್ಕೆ ಮೋದಿ ‘SIR’ ಅಸ್ತ್ರ ಬಳಸುತ್ತಿರುವುದು ಯಾಕೆ?

ಮುಂದುವರೆದು, ಪ್ರಭಾಕರ ಭಟ್ ಅವರ ದ್ವೇಷ ಭಾಷಣದ ಕೆಲವು ಭಾಗಗಳನ್ನು ಓದಿದ ಬಾಲನ್, “ಭಟ್ ವಿರುದ್ಧದ ಪ್ರಕರಣಕ್ಕೆ ನೀಡಲಾಗಿರುವ ತಡೆಯಾಜ್ಞೆಯನ್ನು ರದ್ದುಗೊಳಿಸಬೇಕು. ವಿಚಾರಣೆ ಪೂರ್ಣಗೊಳ್ಳುವವರೆಗೆ ಪ್ರಭಾಕರ ಭಟ್ ದ್ವೇಷಭಾಷಣ ಮಾಡದಂತೆ ನಿರ್ಬಂಧ ವಿಧಿಸಬೇಕು” ಎಂದು ಮನವಿ ಮಾಡಿದರು.

ಪ್ರತಿವಾದ ಮಂಡಿಸಿದ ಕಲ್ಲಡ್ಕ ಪ್ರಭಾಕರ್ ಪರ ವಕೀಲ ಅರುಣ್ ಶ್ಯಾಮ್, “ಪ್ರಭಾಕರ ಭಟ್ ಅವರಿಗೆ 83 ವರ್ಷ ವಯಸ್ಸಾಗಿದೆ. ಈ ಹಂತದಲ್ಲಿ ತಡೆಯಾಜ್ಞೆಯನ್ನು ತೆರವುಗೊಳಿಸುವ ಅಗತ್ಯವಿಲ್ಲ. ಇನ್ನು ಮುಂದೆ ಕಲ್ಲಡ್ಕ ಪ್ರಭಾಕರ ಭಟ್ ದ್ವೇಷ ಭಾಷಣ ಮಾಡುವುದಿಲ್ಲ” ಎಂದು ನ್ಯಾಯಾಲಯಕ್ಕೆ ಮುಚ್ಚಳಿಕೆ ಕೊಟ್ಟಿದ್ದಾರೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು, ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ ಎಲ್ಲ ಪ್ರಕರಣಗಳ ಮಾಹಿತಿಯನ್ನು ಅರ್ಜಿಯೊಂದಿಗೆ ಜೋಡಿಸುವಂತೆ ನಿರ್ದೇಶನ ನೀಡಿದೆ. ವಿಚಾರಣೆಯನ್ನು ಜೂನ್ 16ಕ್ಕೆ ಮುಂದೂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಟಿಂಗ್ ಆರೋಪದ ಸುತ್ತ ರಾಜಕೀಯ ಲೆಕ್ಕಾಚಾರ; ಸತ್ಯಾಸತ್ಯತೆ ಹೊಣೆಗಾರಿಕೆಯ ಪ್ರಶ್ನೆಗಳು

ಸಿದ್ದರಾಮಯ್ಯ ಅವರ ನಿರಾಕರಣೆ, ಕುಮಾರಸ್ವಾಮಿ ಅವರ ಆರೋಪಗಳು, ಆರ್. ಅಶೋಕ್ ಅವರ...

ಮಧ್ಯಪ್ರದೇಶ ಮರಳು ಮಾಫಿಯಾದ ಜೊತೆ ಸರ್ಕಾರಿ ಅಧಿಕಾರಿಗಳು ಶಾಮೀಲು; NGT ಕಳವಳ

ಮಧ್ಯಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ರಚಿಸಿರುವ ಕಾರ್ಯಪಡೆ...

ಮೋದಿ ಭಾರತ ಕಂಡ ಅತ್ಯಂತ ದೊಡ್ಡ ಹೇಡಿ, ಪ್ರಧಾನಿಯಾಗಿರುವುದು ದುರದೃಷ್ಟಕರ: ಅಭಿಜೀತ್ ದೀಪ್ಕೆ ವಾಗ್ದಾಳಿ

ದೆಹಲಿಯ ಜಂತರ್ ಮಂತರ್‌ನಲ್ಲಿ ರಾಷ್ಟ್ರಧ್ವಜ ಹಾರಿಸಲು ಯತ್ನಿಸಿದ ಯುವ ಹೋರಾಟಗಾರರಾದ ಸೌರವ್...