ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಜಾಲ ಆಫ್ರಿಕಾದಿಂದ ದುಬೈಗೆ ಭಾರತಕ್ಕೆ ವಿಸ್ತರಿಸಿದೆ: ಇಡಿ

Date:

ಕನ್ನಡ ಸಿನಿಮಾ ನಟಿ ರನ್ಯಾ ರಾವ್ ಆಫ್ರಿಕಾದಿಂದ ದುಬೈಗೆ ಅಲ್ಲಿಂದ ಭಾರತಕ್ಕೆ 102 ಕೋಟಿ ರೂ. ಚಿನ್ನದ ಕಳ್ಳಸಾಗಣೆ ದಂಧೆಯನ್ನು ನಡೆಸುತ್ತಿದ್ದರು ಎಂದು ಜಾರಿ ನಿರ್ದೇಶನಾಲಯ (ಇಡಿ) ತಿಳಿಸಿದೆ.

- Advertisement -

ಸಂಸ್ಥೆಯು ತನ್ನ ಆರೋಪಪಟ್ಟಿಯಲ್ಲಿ ಬಳ್ಳಾರಿ ಮೂಲದ ಚಿನ್ನದ ವ್ಯಾಪಾರಿ ತರುಣ್ ಕೊಂಡೂರು ಅವರನ್ನು ನಟಿಯ ಸಹಚರ ಎಂದು ಹೆಸರಿಸಿದೆ. ರನ್ಯಾ ಮತ್ತು ಅವರ ಸಹಚರರು 2024ರ ಮಾರ್ಚ್ ಮತ್ತು 2025ರ ಮಾರ್ಚ್ ನಡುವೆ 102.55 ಕೋಟಿ ರೂ. ಮೌಲ್ಯದ 127.28 ಕೆಜಿ ಚಿನ್ನವನ್ನು ಭಾರತಕ್ಕೆ ಕಳ್ಳಸಾಗಣೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇದನ್ನು ಓದಿದ್ದೀರಾ? ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ವೈರಲ್

ಕಳ್ಳಸಾಗಣೆ ಮಾಡಿದ ಚಿನ್ನವನ್ನು ನಂತರ ಹ್ಯಾಂಡ್ಲರ್‌ಗಳು ಮತ್ತು ಆಭರಣ ವ್ಯಾಪಾರಿಗಳ ಜಾಲದ ಮೂಲಕ ದೇಶೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ್ದಾರೆ. ಆರೋಪಿಗಳು 2023ರಲ್ಲಿ ದುಬೈ ಮೂಲದ ವೀರಾ ಡೈಮಂಡ್ಸ್ ಟ್ರೇಡಿಂಗ್ ಎಲ್‌ಎಲ್‌ಸಿಯನ್ನು ಸ್ಥಾಪಿಸಿದ್ದರು. ಉಗಾಂಡಾ, ಕೀನ್ಯಾ ಮತ್ತು ಟಾಂಜಾನಿಯಾ ಸೇರಿದಂತೆ ಆಫ್ರಿಕನ್ ರಾಷ್ಟ್ರಗಳ ಪೂರೈಕೆದಾರರಿಂದ ನೇರವಾಗಿ ಚಿನ್ನವನ್ನು ಪಡೆಯಲು ಪ್ರಯತ್ನಿಸಿದ್ದರು ಎಂದು ಇಡಿ ಹೇಳಿದೆ.

ಆದರೆ ಒಮ್ಮೆ, ನಟಿಗೆ ಉಗಾಂಡಾ ಏಜೆಂಟ್ ಭರವಸೆ ನೀಡಿದಂತೆ ದುಬೈಗೆ ಚಿನ್ನವನ್ನು ತಲುಪಿಸದ ಕಾರಣ ಅವರು 2 ಕೋಟಿ ರೂಪಾಯಿ ವಂಚನೆಗೊಳಗಾಗಿದ್ದರು. ನಂತರ, ನಟಿ ದುಬೈನ ಅತಿದೊಡ್ಡ ಚಿನ್ನದ ಮಾರುಕಟ್ಟೆಯಾದ ಡೀರಾ ಗೋಲ್ಡ್ ಸೌಕ್‌ನಲ್ಲಿರುವ ಆಫ್ರಿಕನ್ ಡೀಲರ್‌ಗಳಿಂದ ಚಿನ್ನವನ್ನು ಖರೀದಿಸಲು ಪ್ರಾರಂಭಿಸಿದ್ದರು. ದುಬೈ ಮಾರುಕಟ್ಟೆಯಲ್ಲಿ ಹೆಚ್ಚಿನ ಚಿನ್ನವು ಆಫ್ರಿಕನ್ ಗಣಿಗಳಿಂದ ಬಂದವು ಎಂದು ಇಡಿ ತಿಳಿಸಿದೆ.

ರನ್ಯಾ ಚಿನ್ನವನ್ನು ಖರೀದಿಸಲು ಮಾರುಕಟ್ಟೆಗೆ ದೊಡ್ಡ ಮೊತ್ತದ ಹಣವನ್ನು ಸಾಗಿಸುತ್ತಿದ್ದರು. ಆದರೆ ಚಿನ್ನವನ್ನು ದುಬೈನಿಂದ ಸ್ವಿಟ್ಜರ್ಲೆಂಡ್ ಅಥವಾ ಥೈಲ್ಯಾಂಡ್‌ನಂತಹ ಮೂರನೇ ದೇಶಕ್ಕೆ ಸಾಗಿಸಲಾಗುತ್ತಿದೆ ಎಂದು ಹೇಳಿಕೊಂಡು ಕಸ್ಟಮ್ಸ್‌ಗೆ ಮೋಸ ಮಾಡುತ್ತಿದ್ದರು ಎಂದೂ ಇಡಿ ಆರೋಪಿಸಿದೆ.

ಇದನ್ನು ಓದಿದ್ದೀರಾ? ರಾಸಲೀಲೆ ವಿಡಿಯೋ ಪ್ರಕರಣ: ಡಿಜಿಪಿ ರಾಮಚಂದ್ರರಾವ್ ಅಮಾನತು

2025ರ ಮಾರ್ಚ್‌ನಲ್ಲಿ ರನ್ಯಾ ಅವರು ದುಬೈನಿಂದ ಬೆಂಗಳೂರಿಗೆ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ‘ರೆಡ್‌ ಹ್ಯಾಂಡ್‌’ಆಗಿ ಸಿಕ್ಕಿಬಿದ್ದಿದ್ದರು. ಅವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಅವರ ದೇಹದಲ್ಲಿ ಬಚ್ಚಿಟ್ಟಿದ್ದ 12.56 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ 14.2 ಕೆಜಿಯನ್ನು ವಶಪಡಿಸಿಕೊಳ್ಳಲಾಗಿತ್ತು.

ರನ್ಯಾ ತಂದೆ (ಮಲತಂದೆ) ಕೆ. ರಾಮಚಂದ್ರ ರಾವ್ ಹಿರಿಯ ಐಪಿಎಸ್ (IPS) ಅಧಿಕಾರಿಯಾಗಿದ್ದಾರೆ. ರನ್ಯಾ ತನ್ನ ತಂದೆಯ ಹೆಸರು ಹೇಳಿಕೊಂಡೇ ಕಸ್ಟಮ್ಸ್ ಅಧಿಕಾರಿಗಳಿಂದ ತಪ್ಪಿಸಿಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ. ಹಾಗೆಯೇ ಈ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಆ ಸಮಯದಲ್ಲಿ ರಾವ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿತ್ತು. ನಂತರ 2025ರ ಆಗಸ್ಟ್‌ನಲ್ಲಿ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿಯಾಗಿ ಮರುನೇಮಕ ಮಾಡಲಾಯಿತು. ಆದರೆ 2026ರ ಜನವರಿಯಲ್ಲಿಆಕ್ಷೇಪಾರ್ಹ ವಿಡಿಯೋಗಳು ವೈರಲ್ ಆದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...