ಕನ್ನಡ ಕಾರಣದಿಂದ ಪಹಲ್ಗಾಮ್‌ನಲ್ಲಿ ದಾಳಿ ಹೇಳಿಕೆ, ಗಾಯಕ ಸೋನು ನಿಗಮ್ ವಿರುದ್ಧ ಕರವೇ ದೂರು

Date:

Advertisements

“ಕನ್ನಡ, ಕನ್ನಡ.. ಇದೇ ಕಾರಣದಿಂದ ಪಹಲ್ಗಾಮ್‌ನಲ್ಲಿ ದಾಳಿಯಾಗಿದ್ದು” ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಗಾಯಕ ಸೋನು ನಿಗಮ್ ವಿರುದ್ಧ ಕರವೇ (ಕರ್ನಾಟಕ ರಕ್ಷಣಾ ವೇದಿಕೆ) ದೂರು ನೀಡಿದೆ.

ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮರಾಜ್ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಆವಲಹಳ್ಳಿ ಪೊಲೀಸ್ ಠಾಣೆಗೆ ಖುದ್ದು ಭೇಟಿ ನೀಡಿ ದೂರು ಸಲ್ಲಿಸದ್ದಾರೆ.

ಪ್ರಸಿದ್ಧ ಗಾಯಕ ಸೋನು ನಿಗಮ್ ತಮ್ಮ ಪೊಲೀಸ್ ಠಾಣಾ ವ್ಯಾಪ್ತಿಯ ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ, ವಿರ್ಗೊನಗರ್, ಬೆಂಗಳೂರು ಇಲ್ಲಿ ಏಪ್ರಿಲ್ 25, 26ರಂದು ನಡೆದ ಸಂಗೀತ ಕಾರ್ಯಕ್ರಮದಲ್ಲಿ ಮಾಡಿದ ಆಕ್ಷೇಪಾರ್ಹ ಮತ್ತು ಭಾವನೆಗಳನ್ನು ಕೆರಳಿಸುವ ಹೇಳಿಕೆಗಳಿಗಾಗಿ ಈ ಮೂಲಕ ದೂರನ್ನು ಸಲ್ಲಿಸುತ್ತಿದ್ದೇನೆ” ಎಂದು ಧರ್ಮರಾಜ್ ತಿಳಿಸಿದ್ದಾರೆ.

Advertisements

“ಈ ಹೇಳಿಕೆಗಳು ವಿಡಿಯೋ ರೂಪದಲ್ಲಿ ದಾಖಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ವಿವಿಧ ಸುದ್ದಿ ವಾಹಿನಿಗಳಲ್ಲಿ ವರದಿಯಾಗಿದೆ, ಇದರಿಂದ ಕನ್ನಡಿಗರಲ್ಲಿ ತೀವ್ರ ಆಕ್ರೋಶ ಉಂಟಾಗಿದೆಯಲ್ಲದೆ, ಕನ್ನಡಿಗರ ಮೇಲೆ ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಯುವ ಆತಂಕ ಉಂಟಾಗಿದೆ” ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಬಿಎನ್‌ಎಸ್, 2023 ರ ಸೆಕ್ಷನ್ 352(1), 351(2), ಮತ್ತು 353 ಅಡಿಯಲ್ಲಿ ಸೋನು ನಿಗಮ್ ವಿರುದ್ಧ ಈ ದೂರು ದಾಖಲಿಸಿ, ದ್ವೇಷವನ್ನು ಉತ್ತೇಜಿಸಿದ್ದಕ್ಕಾಗಿ, ಕ್ರಿಮಿನಲ್ ಮಾನಹಾನಿಗಾಗಿ, ಮತ್ತು ಭಾಷಿಕ ಭಾವನೆಗಳನ್ನು ಆಕ್ಷೇಪಿಸಿದ್ದಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

Download Eedina App Android / iOS

X