ದುಬೈನಲ್ಲಿ ಭಾರೀ ಮಳೆ; ಸಂಕಷ್ಟದಲ್ಲಿ ಸಿಲುಕಿದವರ ನೆರವಿಗೆ ಕನ್ನಡಿಗಾಸ್ ಹೆಲ್ಪ್ ಲೈನ್ ತಂಡ

Date:

Advertisements

ಏಪ್ರಿಲ್ 16ರಂದು ಯುಎಇಯ ಇತಿಹಾಸದಲ್ಲೇ ಅತಿ ಹೆಚ್ಚಿನ ಮಳೆ ಸುರಿದು ಸೃಷ್ಟಿಯಾದ ನೆರೆಯಿಂದ ಶಾರ್ಜಾ ಮತ್ತು ದುಬೈನ ಹಲವು ತಗ್ಗು ಪ್ರದೇಶಗಳಲ್ಲಿ ನೀರು ಜನಜೀವನ ಅಸ್ತವ್ಯಸ್ತವಾಗಿದ್ದು, ಜನರಿಗೆ ಊಟ, ನೀರು ಔಷಧಿಯ ಸಮಸ್ಯೆ ಎದುರಾಗಿರುವುದು ಮನಗಂಡು ಕನ್ನಡಿಗಾಸ್ ಹೆಲ್ಪ್‌ಲೈನ್ ತಂಡ ನೆರವಿನ ಕಾರ್ಯಾಚರಣೆ ನಡೆಸಿದೆ.

ದುಬೈ ಇಂಡಿಯನ್ ಕನ್ಸಲೇಟ್ ಅನುಮತಿ ಮತ್ತು ಸಹಯೋಗದಲ್ಲಿ ಕನ್ನಡಿಗಾಸ್ ಹೆಲ್ಪ್‌ಲೈನ್ ತಂಡ ರಕ್ಷಣಾ ಬೋಟ್‌ನಲ್ಲಿ ಊಟ, ನೀರು, ರೇಷನ್‌ಗಳನ್ನು ಕಳೆದ ಮೂರು ದಿನಗಳಿಂದ ಸಂಕಷ್ಟದಲ್ಲಿರುವ ಅನಿವಾಸಿ ಭಾರತೀಯರಿಗೆ ಮಾತ್ರವಲ್ಲದೆ ನೂರಾರು ವಿದೇಶಿಯರಿಗೂ ಭೇದವಿಲ್ಲದೇ ನೆರವಿನ ಹಸ್ತ ನೀಡಿದೆ. ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ನಗರ ಪಾಲಿಕೆ ವಾಹನ ಚಾಲಕರಿಗೂ ಸ್ಥಳದಲ್ಲೇ ಊಟದ ವ್ಯವಸ್ಥೆ ಕಲ್ಪಿಸಿದೆ.

ಕನ್ನಡಿಗಾಸ್ ಹೆಲ್ಪ್ ಲೈನ್ ತಂಡ

ಅಂತರರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಹಿದಾಯತ್ ಅಡ್ಡೂರು, ಕೆಎನ್ಆರ್‌ಐ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಒಕ್ಕಲಿಗರ ಸಂಘ ದುಬೈ ಅಧ್ಯಕ್ಷ ಕಿರಣ್ ಗೌಡ, ಕರ್ನಾಟಕ ಸಂಘ ದುಬೈ ಅಧ್ಯಕ್ಷ ಶಶಿಧರ ನಾಗರಾಜಪ್ಪ, ಉಪಾಧ್ಯಕ್ಷ ದಯಾ ಕಿರೋಡಿಯನ್, ದುಬೈ ಅನಿವಾಸಿ ಕನ್ನಡಿಗರು ಸ್ಥಾಪಕ ಇಮ್ರಾನ್ ಖಾನ್ ಎರ್ಮಾಳ್, ಸಮೀರ್ ಉದ್ಯಾವರ, ಫಿರೋಜ್, ಬಿಸಿಸಿಐ ಯುಎಇ ಪ್ರಧಾನ ಕಾರ್ಯದರ್ಶಿ ಅನ್ವರ್ ಹುಸೈನ್, ಓವರ್‌ಸೀಸ್‌ ಮೂವೀಸ್‌ನ ದೀಪಕ್ ಸೋಮಶೇಖರ್, ಏಮ್ ಇಂಡಿಯಾ ಫೌಂಡೇಶನ್ ಮುಝಫ್ಫರ್ ಶೇಖ್, ಯೂಸುಫ್ ಶೇಖ್, ಬಾಹರ್ ಅಲ್ ನೂರ್‌ನ ಇಸ್ಮಾಯಿಲ್, ಗಲ್ಫ್ ಗೆಳೆಯರು ತಂಡದ ಸಾಗರ್ ಶೆಟ್ಟರ್ ಆಹಾರ ಸಾಮಗ್ರಿಗಳನ್ನು ವ್ಯವಸ್ಥೆ ಮಾಡಿ, ಜನರಿಗೆ ತಲುಪಿಸುವ ಕಾರ್ಯ ನಡೆಸಿದೆ. ಪರಿಸ್ಥಿತಿ ಸಂಪೂರ್ಣವಾಗಿ ಸುಧಾರಿಸುವವರೆಗೂ ಈ ನೆರವಿನ ಕಾರ್ಯ ಮುಂದುವರೆಯಲಿದೆ.

Advertisements

ಈ ಸುದ್ದಿ ಓದಿದ್ದೀರಾ? ಹಾವೇರಿ | ನೇಹಾ ಕೊಲೆ ಪ್ರಕರಣ; ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಎಸ್‌ಎಫ್‌ಐ ಒತ್ತಾಯ 

ಮಳೆ ಸಂಕಷ್ಟದಲ್ಲಿರುವ ಯಾವುದೇ ಅನಿವಾಸಿ ಕನ್ನಡಿಗರು ಊಟ, ನೀರು, ರೇಷನ್, ಔಷಧಿಯ ಸಹಾಯ ಬೇಕಿದ್ದಲ್ಲಿ +971 55 111 8555, +971529214783, +971 52 466 8185, +971526995413, +97155 597 1414 ಈ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕನ್ನಡಿಗಾಸ್ ಹೆಲ್ಪ್‌ಲೈನ್ ತಂಡ ಪ್ರಕಟಣೆ ತಿಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X