ಕನ್ನಡಿಗರ ಹೋರಾಟಕ್ಕೆ ಮಣಿದ ಅಧಿಕಾರಿಗಳು; ರೈಲ್ವೆ ಬಡ್ತಿ ಪರೀಕ್ಷೆ ರದ್ದು

Date:

ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಲಾಗಿತ್ತು. ಇದನ್ನು ವಿರೋಧಿಸಿ ಕನ್ನಡಪರ ಹೋರಾಟಗಾರರು ನಡೆಸಿದ ಹೋರಾಟಕ್ಕೆ ಅಧಿಕಾರಿಗಳು ಮಣಿಸಿದ್ದಾರೆ. ಮಂಗಳವಾರ (ಮಾರ್ಚ್‌ 17)ರಂದು ನಡೆಯಬೇಕಿದ್ದ ಪರೀಕ್ಷೆ ರದ್ದಾಗಿದೆ. ಪರೀಕ್ಷೆಯನ್ನು ರದ್ದುಗೊಳಿಸಿ ರೈಲ್ವೆ ಇಲಾಖೆ ದಿಢೀರ್ ಆದೇಶ ಹೊರಡಿಸಿದೆ.

- Advertisement -

ರೈಲ್ವೆಯ ಮುಂಬಡ್ತಿ ಪರೀಕ್ಷೆಯಲ್ಲಿ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಮಾತ್ರವೇ ಪ್ರಶ್ನೆಗಳಿದ್ದವು. ಉತ್ತರವನ್ನೂ ಈ ಎರಡು ಭಾಷೆಗಳಲ್ಲಿಯೇ ಬರೆಯಬೇಕಿತ್ತು. ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಇಲ್ಲದಿರುವುದನ್ನು ಖಂಡಿಸಿ, ಕನ್ನಡಪರ ಸಂಘಟನೆಗಳು ಹೋರಾಟಕ್ಕಿಳಿದಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಬೇಕೆಂದು ತಮ್ಮ ಕಾರ್ಯಕರ್ತರಿಗೆ ಕರ್ನಾಟಕ ರಕ್ಷಣಾ ವೇದಿಕೆಯ (ಕರವೇ) ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಕರೆಕೊಟ್ಟಿದ್ದರು. ಅದಂತೆ, ಪರೀಕ್ಷೆಗಳು ನಡೆಯುತ್ತಿದ್ದ ಬೆಂಗಳೂರು, ಹುಬ್ಬಳ್ಳಿ, ದಾವಣಗೆರೆ, ಮೈಸೂರು ಸೇರಿದಂತೆ ಹಲವು ಪರೀಕ್ಷಾ ಕೇಂದ್ರಗಳಿಗೆ ಕನ್ನಡಪರ ಹೋರಾಟಗಾರರು ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ, ಹುಬ್ಬಳ್ಳಿಯ ಆರ್‌ಆರ್‌ಸಿ (RRC) ಕಚೇರಿಯ ಎದುರು ಕೂಡ ಪ್ರತಿಭಟನೆಗಳು ನಡೆದಿವೆ.

ಈ ಲೇಖನ ಓದಿದ್ದೀರಾ?: ವರದಕ್ಷಿಣೆ ಸಾವು | 3 ತಿಂಗಳಲ್ಲಿ 508 ಮಂದಿಗೆ ಜಾಮೀನು: ಹೈಕೋರ್ಟ್ ನ್ಯಾಯಾಧೀಶರಿಗೆ ಸುಪ್ರೀಂ…

ಪ್ರತಿಭಟನೆಗಳಿಗೆ ಮಣಿದ ರೈಲ್ವೆ ಅಧಿಕಾರಿಗಳು ನಡೆಯುತ್ತಿದ್ದ ಪರೀಕ್ಷೆಯನ್ನು ಅರ್ಧಕ್ಕೆ ರದ್ದುಗೊಳಿಸಿದ್ದಾರೆ. ಪರೀಕ್ಷೆಯನ್ನು ಮುಂದೂಡಿದ್ದಾರೆ. ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಅರ್ಧದಲ್ಲಿಯೇ ಪರೀಕ್ಷೆ ಬಿಟ್ಟು ಹೊರಬಂದಿದ್ದಾರೆ. ಕನ್ನಡದಲ್ಲಿ ಪರೀಕ್ಷೆ ಬರೆಯುವುದರಿಂದ ವಂಚಿತರಾಗಿದ್ದ ಅಭ್ಯರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಪರೀಕ್ಷೆ ಮುಂದೂಡಿಕೆ ಕುರಿತು ಮಾತನಾಡಿದ ಹುಬ್ಬಳ್ಳಿ ಆರ್‌ಆರ್‌ಸಿ ಚೇರ್ಮನ್ ಆಸಿಫ್ ಅನ್ಸಾರಿ, “ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸುವ ಬಗ್ಗೆ ಮೇಲಧಿಕಾರಿಗಳು ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುವುದು” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯಲ್ಲಿ ಆಂತರಿಕ ಕುಸ್ತಿ; ಪ್ರತಾಪ್ ಸಿಂಹ – ನಾಗೇಂದ್ರ‌ ಬೀದಿ ಕಾಳಗ

ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್‌...

ಮುಸ್ಲಿಂ ಮಹಿಳೆಯ ಸೌಹಾರ್ದತೆ: 18 ವರ್ಷಗಳಿಂದ ಗಣೇಶ ಸಮಿತಿ ಮುನ್ನಡೆಸುತ್ತಿರುವ ಜುಬೇದಾ

ಸಮಾಜದಲ್ಲಿ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಒಡಕು ಮೂಡಿಸಲು ಹಿಂದುತ್ವ ಕೋಮುವಾದಿ...

ಕರ್ನಾಟಕ ಕಾಂಗ್ರೆಸ್‌ ವಾರ್‌ ರೂಂ ಅಧ್ಯಕ್ಷರಾಗಿ ತಿಪಟೂರು ಟುಡಾ ಶಶಿಧರ್‌ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಮುಂಬರುವ ಪಕ್ಷದ ಸಂಘಟನಾತ್ಮಕ ಹಾಗೂ...

ಮಹಿಳಾ ಉದ್ಯೋಗಿಗಳ ರಾತ್ರಿ ಪಾಳಿ ಸುರಕ್ಷತಾ ನಿಯಮ ತಿದ್ದುಪಡಿ: ಸರ್ಕಾರದ ನಡೆಗೆ ಕೆಐಟಿಯು ತೀವ್ರ ವಿರೋಧ

ಕರ್ನಾಟಕ ಸರ್ಕಾರವು ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಗೆ ತಿದ್ದುಪಡಿ ತರುವ...