ಕನ್ನಡ ಬಾರದ ಆಟೋ, ಟ್ಯಾಕ್ಸಿ ಇತರೆ ವಾಹನ ಚಾಲಕರ ಪರವಾನಗಿ ರದ್ದುಗೊಳಿಸಿ: ಕರವೇ ಆಗ್ರಹ

Date:

ಕನ್ನಡ ಬಾರದ ಆಟೋ, ಟ್ಯಾಕ್ಸಿ, ಕ್ಯಾಬ್ ಮತ್ತು ಇತರ ಸಾರಿಗೆ ವಾಹನ ಚಾಲಕರ ಪರವಾನಗಿಯನ್ನು ರದ್ದುಗೊಳಿಸುವ ಸ್ಪಷ್ಟ ನಿಯಮಾವಳಿಯನ್ನು ಜಾರಿಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಆಗ್ರಹಿಸಿದೆ. ಜತೆಗೆ ಈ ಸಂಬಂಧ ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರ ಕೈಗೊಂಡ ನಿರ್ಧಾರವನ್ನು ಸ್ವಾಗತಿಸಿದೆ.

- Advertisement -

ಈ ಸಂಬಂಧ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಮಹಾರಾಷ್ಟ್ರದಲ್ಲಿ ಮರಾಠಿ ಭಾಷೆ ಬಾರದ ಟ್ಯಾಕ್ಸಿ ಮತ್ತು ಆಟೋ ಚಾಲಕರ ಪರವಾನಗಿಯನ್ನು ರದ್ದುಪಡಿಸಲು ಅಲ್ಲಿನ ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರ ದೃಢ ನಿರ್ಧಾರ ಕೈಗೊಂಡಿದೆ. ಮೇ 1ರಿಂದ (ಮಹಾರಾಷ್ಟ್ರ ದಿನಾಚರಣೆಯಂದು) ಈ ನಿಯಮ ಕಟ್ಟುನಿಟ್ಟಾಗಿ ಜಾರಿಗೆ ಬರುತ್ತಿದೆ. ಸಾರಿಗೆ ಇಲಾಖೆಯ ಅಧಿಕಾರಿಗಳು ರಾಜ್ಯಾದ್ಯಂತ 59 ಆರ್‌ಟಿಒ ಕಚೇರಿಗಳಲ್ಲಿ ತಪಾಸಣೆ ನಡೆಸಿ, ಮರಾಠಿ ಓದಲು, ಬರೆಯಲು ಮತ್ತು ಮಾತನಾಡಲು ತಿಳಿಯದ ಚಾಲಕರ ಪರವಾನಗಿಗಳನ್ನು ರದ್ದುಗೊಳಿಸುವ ಕೆಲಸ ಈಗಾಗಲೇ ಆರಂಭಿಸಿದ್ದಾರೆ. ಈ ಅರ್ಥಪೂರ್ಣ, ಧೈರ್ಯದ ನಿರ್ಧಾರವನ್ನು ಕರ್ನಾಟಕ ರಕ್ಷಣಾ ವೇದಿಕೆ ಹೃದಯಪೂರ್ವಕವಾಗಿ ಸ್ವಾಗತಿಸುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದನ್ನು ಓದಿದ್ದೀರಾ? ಕೆಪಿಎಸ್‌ಸಿ ಪರೀಕ್ಷೆಗಳು ಕನ್ನಡದಲ್ಲೇ ನಡೆಯಲಿ: ಕರವೇ ಆಗ್ರಹ

“ಜೀವನ ನಿರ್ವಹಣೆಗಾಗಿ ಬೇರೆ ರಾಜ್ಯಗಳಿಗೆ ವಲಸೆ ಹೋಗುವವರು ಆ ರಾಜ್ಯದ ಅಧಿಕೃತ ಭಾಷೆಯನ್ನು ಕಲಿಯುವುದು ಅತ್ಯಂತ ಮೂಲಭೂತ ಕರ್ತವ್ಯವಾಗಿದೆ. ತಮ್ಮ ಜೀವನಾಧಾರಕ್ಕಾಗಿ ಆ ರಾಜ್ಯದ ಮಣ್ಣು, ನೀರು ಮತ್ತು ಜನರನ್ನು ಅವಲಂಬಿಸುವಾಗ, ಅಲ್ಲಿನ ಭಾಷೆ, ಸಂಸ್ಕೃತಿ ಮತ್ತು ಜನರೊಂದಿಗೆ ಬೆರೆಯುವುದು ಸಹಜವಾದ ನೈತಿಕ ಜವಾಬ್ದಾರಿಯಾಗಿದೆ. ಮರಾಠಿ ಬಾರದ ಚಾಲಕರು ಮರಾಠಿ ಭಾಷಿಕ ಪ್ರಯಾಣಿಕರೊಂದಿಗೆ ಹೇಗೆ ಸಂವಾದ ನಡೆಸುತ್ತಾರೆ? ದಾರಿಯಲ್ಲಿ ತುರ್ತು ಸಮಸ್ಯೆ ಎದುರಾದಾಗ, ವಿಳಾಸ ಅಥವಾ ಸೂಚನೆಗಳನ್ನು ಹೇಗೆ ಅರ್ಥಮಾಡಿಕೊಳ್ಳುತ್ತಾರೆ? ಇಂತಹ ಸಂವಹನದ ಕೊರತೆಯಿಂದಾಗಿ ಪ್ರಯಾಣಿಕರು ತೊಂದರೆಗೊಳಗಾಗುತ್ತಿದ್ದಾರೆ ಎಂಬ ದೂರುಗಳು ಹಲವಾರು. ಹೀಗಾಗಿ ಮಹಾರಾಷ್ಟ್ರ ಸರ್ಕಾರದ ಈ ತೀರ್ಮಾನ ಸಂಪೂರ್ಣವಾಗಿ ಸರಿಯಾದುದು ಮತ್ತು ಅಗತ್ಯವಾದುದು” ಎಂದು ಅಭಿಪ್ರಾಯಿಸಿದ್ದಾರೆ.

“ಕರ್ನಾಟಕದಲ್ಲೂ ಇದೇ ಪರಿಸ್ಥಿತಿ ನಿರಂತರವಾಗಿ ಕಾಣಸಿಗುತ್ತಿದೆ. ಕನ್ನಡ ಬಾರದ, ಕನ್ನಡದಲ್ಲಿ ವ್ಯವಹರಿಸದ ವಲಸಿಗ ಚಾಲಕರು ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ನಾನಾ ರೀತಿಯ ಸಮಸ್ಯೆಗಳಿಗೆ ಕಾರಣರಾಗುತ್ತಿದ್ದಾರೆ. ಪ್ರಯಾಣಿಕರೊಂದಿಗೆ ಸಂವಾದದ ಕೊರತೆ, ತಪ್ಪು ದಾರಿ ತೋರಿಸುವುದು, ಮೀಟರ್ ವ್ಯವಹಾರದಲ್ಲಿ ಗೊಂದಲ, ಮತ್ತು ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ — ಇವು ಸಾಮಾನ್ಯವಾಗುತ್ತಿವೆ. ಕೆಲವು ಸಂದರ್ಭಗಳಲ್ಲಿ ಇದು ಕನ್ನಡಿಗರ ಆತ್ಮಗೌರವಕ್ಕೆ ಧಕ್ಕೆ ತರುತ್ತಿದೆ” ಎಂದು ಪೋಸ್ಟ್‌ನಲ್ಲಿ ಬರೆದಿದ್ದಾರೆ.

“ತಮಿಳುನಾಡಿನಲ್ಲೂ ಅಲ್ಲಿನ ಚಾಲಕರು ಪರವಾನಗಿ ಪಡೆಯುವಾಗ ಅಥವಾ ನವೀಕರಿಸುವಾಗ ತಮಿಳು ಭಾಷೆಯಲ್ಲಿ ಕನಿಷ್ಠ ಮಟ್ಟದ ಜ್ಞಾನ ಇದೆಯೇ ಎಂದು ಪರೀಕ್ಷಿಸಲಾಗುವುದು. ದೀರ್ಘಕಾಲದಿಂದಲೂ ಈ ನೀತಿ ಜಾರಿಯಲ್ಲಿದೆ. ಚಾಲಕರು ಪ್ರಯಾಣಿಕರೊಂದಿಗೆ ತಮಿಳಿನಲ್ಲಿ ವ್ಯವಹರಿಸಬೇಕು ಎಂಬ ನಿಯಮವಿದೆ” ಎಂದು ಹೇಳಿದ್ದಾರೆ.

“ಹೀಗಾಗಿ, ಮಹಾರಾಷ್ಟ್ರದ ಬಿಜೆಪಿ ಸರ್ಕಾರ ಅನುಸರಿಸುತ್ತಿರುವ ಈ ಧೋರಣೆಯನ್ನು ಕರ್ನಾಟಕ ಸರ್ಕಾರವೂ ತಕ್ಷಣ ಅನುಸರಿಸಬೇಕು. ಕನ್ನಡ ಬಾರದ ಆಟೋ, ಟ್ಯಾಕ್ಸಿ, ಕ್ಯಾಬ್ ಮತ್ತು ಇತರ ಸಾರಿಗೆ ವಾಹನ ಚಾಲಕರ ಪರವಾನಗಿಯನ್ನು ರದ್ದುಗೊಳಿಸುವ ಸ್ಪಷ್ಟ ನಿಯಮಾವಳಿಯನ್ನು ಜಾರಿಗೊಳಿಸಬೇಕು” ಎಂದು ರಾಜ್ಯ ಸರ್ಕಾರವನ್ನು ಕರವೇ ರಾಜ್ಯಾಧ್ಯಕ್ಷರು ಆಗ್ರಹಿಸಿದ್ದಾರೆ.

ಹಾಗೆಯೇ “ಭಾಷೆ ಕೇವಲ ಸಂವಹನದ ಸಾಧನವಲ್ಲ, ನಮ್ಮ ಅಸ್ಮಿತೆ, ಬದುಕು, ಸಂಸ್ಕೃತಿ ಮತ್ತು ಆತ್ಮಗೌರವದ ಸಂಕೇತ. ಯಾವುದೇ ರಾಜ್ಯದಲ್ಲಿ ವ್ಯವಹಾರ ಮಾಡುವವರು ಆ ರಾಜ್ಯದ ಭಾಷೆಯನ್ನು ಗೌರವಿಸುವುದು ಅನಿವಾರ್ಯ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಯದ ಗುರುತುಗಳಿಲ್ಲವೆಂದು ಪೋಕ್ಸೋ ಸಂತ್ರಸ್ತೆಗೆ ಪರಿಹಾರ ನಿರಾಕರಿಸುವಂತಿಲ್ಲ: ಅಲಹಾಬಾದ್‌ ಹೈಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದ ವೈದ್ಯಕೀಯ ವರದಿಯಲ್ಲಿ ದೈಹಿಕ ಗಾಯಗಳ ಗುರುತುಗಳು ದಾಖಲಾಗಿಲ್ಲ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...