ಅರಣ್ಯ ಸಂರಕ್ಷಣೆ ಹೆಸರಲ್ಲಿ ಜನರ ಬದುಕು ಬಲಿ ಕೊಡಬೇಡಿ: ಕಸ್ತೂರಿರಂಗನ್ ವರದಿ ವಿರುದ್ಧ ಕರವೇ ಆಕ್ರೋಶ

Date:

ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆ ಅತ್ಯಂತ ಅಗತ್ಯ. ಆದರೆ ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಮಲೆನಾಡಿನಲ್ಲಿ ತಲೆತಲಾಂತರಗಳಿಂದ ಬದುಕುತ್ತಿರುವ ಜನರ ಜೀವನ, ಕೃಷಿ, ಉದ್ಯೋಗ ಮತ್ತು ಮೂಲಭೂತ ಹಕ್ಕುಗಳಿಗೆ ಧಕ್ಕೆ ತರುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ಸರ್ಕಾರ ಕಸ್ತೂರಿರಂಗನ್ ವರದಿಯನ್ನು ಜಾರಿಗೊಳಿಸದೇ ತಿರಸ್ಕರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣ ಗೌಡ ಆಗ್ರಹಿಸಿದ್ದಾರೆ.

- Advertisement -

ಈ ಬಗ್ಗೆ ಕರವೇ ಹೇಳಿಕೆ ಬಿಡುಗಡೆ ಮಾಡಿದ್ದು, ಕಸ್ತೂರಿರಂಗನ್ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳ 56,825.7 ಚದರ ಕಿಲೋಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವಾಗಿ ಗುರುತಿಸುವ 7ನೇ ಕರಡು ಅಧಿಸೂಚನೆಯನ್ನು 2026ರ ಜುಲೈ 27ರಂದು ಹೊರಡಿಸಿದೆ. ಕರ್ನಾಟಕದ 20,668 ಚದರ ಕಿಲೋಮೀಟರ್ ಪ್ರದೇಶ ಮತ್ತು 1,449 ಗ್ರಾಮಗಳು ಇದರ ವ್ಯಾಪ್ತಿಯಲ್ಲಿ ಬರುತ್ತವೆ. ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳ ಅನೇಕ ಪ್ರದೇಶಗಳು ಈ ವ್ಯಾಪ್ತಿಗೆ ಬರುತ್ತವೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎರಡನೇ ಬರಪಟ್ಟಿಗೂ ಬಾರದ ರಾಮದುರ್ಗ, ಸವದತ್ತಿ: ಸಂಕಷ್ಟದಲ್ಲಿ ರೈತರು,...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಇದನ್ನೂ ಓದಿ: ಹಿಂದಿ ವಿವಾದ : ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದ ಕರವೇ ನಾರಾಯಣಗೌಡ

ಕಸ್ತೂರಿರಂಗನ್ ವರದಿಯ ಮೂಲಭೂತ ಸಮಸ್ಯೆಯೆಂದರೆ ಪರಿಸರ ಸೂಕ್ಷ್ಮ ಪ್ರದೇಶಗಳ ಗುರುತಿಸುವಿಕೆಯಲ್ಲಿ ಸ್ಥಳೀಯ ವಾಸ್ತವಾಂಶಗಳಿಗೆ ಅಗತ್ಯ ಪ್ರಾಮುಖ್ಯತೆ ನೀಡದಿರುವುದು. ಉಪಗ್ರಹ ಚಿತ್ರಗಳು ಮತ್ತು ವಿಶಾಲ ಮಟ್ಟದ ದತ್ತಾಂಶಗಳ ಆಧಾರದ ಮೇಲೆ ಪ್ರದೇಶಗಳನ್ನು ಗುರುತಿಸಿರುವುದರಿಂದ, ಹಲವೆಡೆ ಜನವಸತಿ ಪ್ರದೇಶಗಳು, ಕೃಷಿ ಭೂಮಿಗಳು, ತೋಟಗಾರಿಕೆ ಪ್ರದೇಶಗಳು ಮತ್ತು ಮಾನವ ಚಟುವಟಿಕೆಗಳು ನಡೆಯುತ್ತಿರುವ ಪ್ರದೇಶಗಳೂ ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಗೆ ಬಂದಿವೆ ಎಂಬ ಆಕ್ಷೇಪಣೆಗಳು ವ್ಯಕ್ತವಾಗಿವೆ. ನೆಲಮಟ್ಟದ ಸಮಗ್ರ ಅಧ್ಯಯನ, ಗ್ರಾಮವಾರು ಪರಿಶೀಲನೆ ಮತ್ತು ಸ್ಥಳೀಯ ಸಮುದಾಯಗಳ ಅಭಿಪ್ರಾಯವಿಲ್ಲದೆ ಕೇವಲ ಕಚೇರಿ ಆಧಾರಿತ ನಕ್ಷೆಗಳ ಮೂಲಕ ಭವಿಷ್ಯ ನಿರ್ಧರಿಸುವುದು ವೈಜ್ಞಾನಿಕ ಮತ್ತು ಪ್ರಜಾಸತ್ತಾತ್ಮಕ ಕ್ರಮವಾಗಲಾರದು ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಕೇರಳ ರಾಜ್ಯ ಅನುಸರಿಸಿದ ಪರ್ಯಾಯ ಮಾದರಿಯು ಗಮನಾರ್ಹವಾಗಿದೆ. ಅಲ್ಲಿನ ಸರ್ಕಾರ ಸ್ಥಳೀಯ ಸಂಸ್ಥೆಗಳು, ತಜ್ಞರು ಮತ್ತು ಜನಪ್ರತಿನಿಧಿಗಳ ಸಹಭಾಗಿತ್ವದಲ್ಲಿ ಗ್ರಾಮ ಮಟ್ಟದ ಪರಿಶೀಲನೆ ನಡೆಸಿ, ಜನವಸತಿ ಪ್ರದೇಶಗಳು, ಕೃಷಿ ಭೂಮಿಗಳು ಮತ್ತು ನೈಜ ಅರಣ್ಯ ಪ್ರದೇಶಗಳನ್ನು ಪ್ರತ್ಯೇಕವಾಗಿ ಗುರುತಿಸುವ ಪ್ರಯತ್ನ ಮಾಡಿದೆ. ಕರ್ನಾಟಕದಲ್ಲಿಯೂ ಇಂತಹ ನೆಲಮಟ್ಟದ, ಜನಪರ ಮತ್ತು ವೈಜ್ಞಾನಿಕ ಸಮೀಕ್ಷೆಯನ್ನು ನಡೆಸಿ, ಸ್ಥಳೀಯ ವಾಸ್ತವಾಂಶಗಳ ಆಧಾರದ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳಬೇಕು. ಉಪಗ್ರಹ ಚಿತ್ರಗಳಿಗಿಂತ ಮಲೆನಾಡಿನ ನೆಲದ ಸತ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕಾಡನ್ನು ರಕ್ಷಿಸಬೇಕು ಎಂಬುದೇನೋ ಸರಿ. ಆದರೆ ಕಾಡಿನ ನಡುವೆ, ಕಾಡಿನ ಅಂಚಿನಲ್ಲಿ ಮತ್ತು ಪಶ್ಚಿಮ ಘಟ್ಟಗಳ ಪರಿಸರ ವ್ಯವಸ್ಥೆಯೊಂದಿಗೆ ಬದುಕು ಕಟ್ಟಿಕೊಂಡಿರುವ ಸಾವಿರಾರು ಕುಟುಂಬಗಳನ್ನು ಏನು ಮಾಡುತ್ತೀರಿ? ಅವರು ತಮ್ಮ ಸ್ವಾತಂತ್ರ್ಯವನ್ನು ಕಳೆದುಕೊಂಡು ಬದುಕಬೇಕೆ? ಪರಿಸರವನ್ನು ರಕ್ಷಿಸುವ ಹೆಸರಿನಲ್ಲಿ ಪರಿಸರದ ಜೊತೆ ಬದುಕುತ್ತಿರುವ ಮನುಷ್ಯನನ್ನೇ ಸಂಕಷ್ಟಕ್ಕೆ ತಳ್ಳುವ ನೀತಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಕರಡು ಅಧಿಸೂಚನೆಯಲ್ಲಿ ಗಣಿಗಾರಿಕೆ, ಕಲ್ಲುಗಣಿಗಾರಿಕೆ, ಮರಳು ಗಣಿಗಾರಿಕೆ, ಕೆಲವು ಕೈಗಾರಿಕೆಗಳು, ಉಷ್ಣ ವಿದ್ಯುತ್ ಯೋಜನೆಗಳು ಹಾಗೂ ನಿರ್ದಿಷ್ಟ ಪ್ರಮಾಣಕ್ಕಿಂತ ದೊಡ್ಡ ಕಟ್ಟಡಗಳ ನಿರ್ಮಾಣ ಮತ್ತು ಟೌನ್‌ಶಿಪ್ ಯೋಜನೆಗಳ ಮೇಲೆ ನಿರ್ಬಂಧಗಳು ಮತ್ತು ನಿಯಂತ್ರಣಗಳನ್ನು ಪ್ರಸ್ತಾಪಿಸಲಾಗಿದೆ. ಇದೆಲ್ಲ ಇಷ್ಟಕ್ಕೆ ಸೀಮಿತವಾಗುವ ಹಾಗೆ ಕಾಣಿಸುತ್ತಿಲ್ಲ. ವರದಿ ಜಾರಿಯಾದಲ್ಲಿ ಮಲೆನಾಡು ಪ್ರದೇಶದಲ್ಲಿ ಒಂದು ಬಗೆಯ ತುರ್ತುಪರಿಸ್ಥಿತಿಯ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ಕಾಡಿನಂಚಿನ ಜನರು ತಮ್ಮ ಮನೆಗಳನ್ನು ರಿಪೇರಿ ಮಾಡಿಕೊಳ್ಳಬಹುದೇ? ಹೊಸ ಮನೆಯನ್ನು ಕಟ್ಟಬಹುದೇ? ಗ್ರಾಮಗಳಿಗೆ ರಸ್ತೆ, ಸೇತುವೆ, ಶಾಲೆ, ಆಸ್ಪತ್ರೆ, ಕುಡಿಯುವ ನೀರು ಮತ್ತು ಇತರ ಮೂಲಸೌಕರ್ಯಗಳನ್ನು ಕಲ್ಪಿಸುವುದಕ್ಕೆ ಏನೇನು ಅಡಚಣೆಗಳು ಆಗಲಿವೆ? ಸ್ಥಳೀಯ ಯುವಕರಿಗೆ ಉದ್ಯೋಗ ಸೃಷ್ಟಿಸುವ ಸಣ್ಣ ಉದ್ಯಮಗಳು ಮತ್ತು ಗ್ರಾಮೀಣ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡರೆ ಅವರ ಗತಿ ಏನು ಎಂದು ಪ್ರಶ್ನಿಸಿದ್ದಾರೆ.

ಕಸ್ತೂರಿ ರಂಗನ್‌ ವರದಿ ಜಾರಿಯಾದಲ್ಲಿ ತೋಟಗಾರಿಕೆ, ಕೃಷಿ ಮತ್ತು ಗ್ರಾಮೀಣ ಜೀವನಕ್ಕೆ ಸಂಬಂಧಿಸಿದ ಚಟುವಟಿಕೆಗಳ ಮೇಲೆ ಭವಿಷ್ಯದಲ್ಲಿ ಯಾವ ರೀತಿಯ ನಿಯಂತ್ರಣಗಳು ಬರಬಹುದು? ಈ ಪ್ರಶ್ನೆಗಳಿಗೆ ಸ್ಪಷ್ಟವಾದ ಉತ್ತರಗಳು ಯಾರ ಬಳಿಯೂ ಇಲ್ಲ. ಕರಡು ಅಧಿಸೂಚನೆಯು ಕೃಷಿ ಮತ್ತು ತೋಟಗಾರಿಕೆಯನ್ನು ನಿಷೇಧಿಸುವುದಿಲ್ಲ ಎಂದು ಹೇಳುತ್ತದೆ. ಜನರನ್ನು ಸ್ಥಳಾಂತರಿಸುವ ಉದ್ದೇಶವೂ ಇಲ್ಲ ಎಂದು ಸರ್ಕಾರದ ಹೇಳಿಕೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಆದರೆ ಮಲೆನಾಡಿನಲ್ಲಿ ಬದುಕುವ ಜನರ ಮೂಲಭೂತ ಹಕ್ಕುಗಳನ್ನು ಇದು ಒಂದಲ್ಲ ಒಂದು ಬಗೆಯಲ್ಲಿ ಹತ್ತಿಕ್ಕುವ ಸಾಧ್ಯತೆಯೇ ಹೆಚ್ಚು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹಾವೇರಿ | ರಾಜ್ಯಪಾಲರ ಪತ್ರ: ಹಿಂದಿ ಹೇರಿಕೆ ಹುನ್ನಾರ ಕರವೇ ಆಕ್ರೋಶ

ಪಶ್ಚಿಮ ಘಟ್ಟಗಳನ್ನು ಕಾಪಾಡಿರುವುದು ಕೇವಲ ಸರ್ಕಾರಗಳಲ್ಲ, ಅಲ್ಲಿ ಬದುಕುವ ಜನರು. ಕಾಡಿನ ಸುತ್ತಮುತ್ತ ತಲೆತಲಾಂತರಗಳಿಂದ ಬದುಕುತ್ತಿರುವ ರೈತರು, ಕಾಡಿನಂಚಿನ ಗ್ರಾಮಗಳ ಜನರು, ಸಣ್ಣ ಕೃಷಿಕರು ಮತ್ತು ಸ್ಥಳೀಯ ಸಮುದಾಯಗಳು ಪ್ರಕೃತಿಯೊಂದಿಗೆ ಅವಿನಾಭಾವ ಸಂಬಂಧ ಇಟ್ಟುಕೊಂಡು ಬದುಕುತ್ತಿದ್ದಾರೆ. ಈಗ ಕಾಡು ಮತ್ತು ಜನರ ನಡುವೆ ಸರ್ಕಾರ ಮೂಗು ತೂರಿಸುತ್ತಿದೆ ಎಂದು ಹೇಳಿದ್ದಾರೆ.

ಪಶ್ಚಿಮ ಘಟ್ಟಗಳನ್ನು ರಕ್ಷಿಸುವುದು ನಮ್ಮೆಲ್ಲರ ಹೊಣೆ. ಆದರೆ ಯಾವುದೇ ಪರಿಸರ ನೀತಿಯ ಅಂತಿಮ ಗುರಿ ಮನುಷ್ಯನ ಬದುಕನ್ನು ಉತ್ತಮಗೊಳಿಸುವುದೂ ಆಗಿರಬೇಕು. ಸಾವಿರಾರು ವರ್ಷಗಳಿಂದ, ತಲೆತಲಾಂತರದಿಂದ ಬದುಕುತ್ತಿರುವ ಜನರ ಘನತೆಯಿಂದ ಜೀವಿಸುವ ಹಕ್ಕನ್ನು ಕಿತ್ತುಕೊಳ್ಳಲು ಯಾವ ಸರ್ಕಾರಕ್ಕೂ ಅಧಿಕಾರವಿಲ್ಲ ಎಂದಿದ್ದಾರೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮಲೆನಾಡ ಜನರ ಜೊತೆಗೆ ಸಂವಾದ ಆರಂಭಿಸಿದ್ದಾರೆ. ಅಲ್ಲಿನ ಜನರ ಅಳಲು, ಸಂಕಟಗಳನ್ನು ಅವರು ಕೇಳಲಿದ್ದಾರೆ. ಅದು ಒಳ್ಳೆಯ ಕಾರ್ಯ, ಸರಿಯಾದ ಮಾರ್ಗ. ಜನರನ್ನು ಕತ್ತಲೆಯಲ್ಲಿಟ್ಟು ಅವರ ಮೇಲೆ ಕರಾಳ ಕಾನೂನುಗಳನ್ನು ಹೇರುವುದು ಸರಿಯಲ್ಲ. ಸರ್ಕಾರ ವಿಶೇಷ ಅಧಿವೇಶನದಲ್ಲಿ ಈ ಸಂಬಂಧ ಗೊತ್ತುವಳಿಯನ್ನು ಮಂಡಿಸಿ, ಕಸ್ತೂರಿ ರಂಗನ್‌ ವರದಿಯನ್ನು ತಿರಸ್ಕರಿಸುವ ಘೋಷಣೆಯನ್ನು ಅಂಗೀಕರಿಸಬೇಕು.

ಮಲೆನಾಡಿನ ಜನರ ಬದುಕನ್ನು ಬಲಿಕೊಟ್ಟು ಪಶ್ಚಿಮ ಘಟ್ಟಗಳ ಸಂರಕ್ಷಣೆ ಮಾಡುವ ಬದಲು, ಮಲೆನಾಡಿನ ಜನರನ್ನೇ ಪಶ್ಚಿಮ ಘಟ್ಟಗಳ ಸಂರಕ್ಷಣೆಯ ಪಾಲುದಾರರನ್ನಾಗಿ ಮಾಡುವ ಜನಪರ ಮತ್ತು ವೈಜ್ಞಾನಿಕ ಮಾದರಿ ರೂಪಿಸಬೇಕು. ಪರಿಸರ ಸಂರಕ್ಷಣೆ ಮತ್ತು ಮಾನವ ಬದುಕಿನ ನಡುವೆ ಸಂಘರ್ಷ ಸೃಷ್ಟಿಸುವ ಬದಲು, ಎರಡನ್ನೂ ಉಳಿಸುವ ಮಾರ್ಗವನ್ನು ಸರ್ಕಾರಗಳು ಕಂಡುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನದ ಮಸೀದಿಯಲ್ಲಿ ಭೀಕರ ಆತ್ಮಾಹುತಿ ದಾಳಿ: 16 ಮಂದಿ ಸಾವು

ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕೊಹಾಟ್ ಜಿಲ್ಲೆಯ ಹಳೆಯ ಪೊಲೀಸ್...

ಸಿನಿಮಾ ಟಿಕೆಟ್ ಮೇಲೆ ಹೆಚ್ಚುವರಿ ಸುಂಕ! ಸೆಸ್ ಹಿಂಪಡೆಯಲು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಒತ್ತಾಯ

ಸೆಪ್ಟೆಂಬರ್ 30ರಿಂದ ಸಿನಿಮಾ ಟಿಕೆಟ್‌ಗಳ ಮೇಲೆ ಶೇ. 2ರಷ್ಟು ಹೆಚ್ಚುವರಿ ಸೆಸ್...

SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ; ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ಪತ್ರ

ASDDO ಅಂಕಿಅಂಶಗಳಲ್ಲಿ ಹೊಂದಾಣಿಕೆ ಇಲ್ಲ, 44 ಲಕ್ಷ ಮತದಾರರ ಮ್ಯಾಪಿಂಗ್ ಸಮಸ್ಯೆ,...

ಪಾಸ್‌ಪೋರ್ಟ್‌ನಲ್ಲಿ ಮಾಜಿ ಸಂಗಾತಿ ಹೆಸರು ಅಳಿಸಲು ‘ವಿಚ್ಛೇದನ ಆದೇಶ’ ಕಡ್ಡಾಯವಲ್ಲ: ಕೇರಳ ಹೈಕೋರ್ಟ್

ವಿಚ್ಛೇದಿತ ವ್ಯಕ್ತಿಯು ತಮ್ಮ ಪಾಸ್‌ಪೋರ್ಟ್‌ನಿಂದ ಮಾಜಿ ಸಂಗಾತಿಯ (ಪತಿ ಅಥವಾ ಪತ್ನಿ)...